ಕೇಂದ್ರ ಬಜೆಟ್‌ಗೆ ಸಿಎಂ ಸಿದ್ದರಾಮಯ್ಯರ ಸಲಹೆ ಕೇಳಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್
ಕೇಂದ್ರ ಸರ್ಕಾರದ 2024-25ನೇ ಸಾಲಿನ ಬಜೆಟ್ ಪೂರ್ವ ಸಭೆಗೆ ಸಿಎಂ ಸಿದ್ದರಾಮಯ್ಯ ಅವರಿಗೆ ಆಹ್ವಾನಿಗೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಪತ್ರ ಬರೆದಿದ್ದಾರೆ.
ಬೆಂಗಳೂರು (ಜೂ.19): ಕೇಂದ್ರ ಸರ್ಕಾರದಿಂದ ಮಂಡಿಸಲಾಗುತ್ತಿರುವ 2024-25ನೇ ಆರ್ಥಿಕ ಸಾಲಿನ ಬಜೆಟ್ ಮಂಡನೆಗೂ ಮುನ್ನ ನಡೆಸಲಾಗುವ ಬಜೆಟ್ ಪೂರ್ವ ಚರ್ಚಾ ಸಭೆಗೆ ಹಾಜರಾಗುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಪತ್ರ ಬರೆದಿದ್ದಾರೆ.
ಕೇಂದ್ರದ ಬಜೆಟ್ ಪೂರ್ವ ಸಮಾಲೋಚನೆಗಳ ಭಾಗವಾಗಿ, ಸಮಾನ ಬೆಳವಣಿಗೆ ಮತ್ತು ಉದ್ಯೋಗ ಸೃಷ್ಟಿಗೆ ಅನುಕೂಲವಾಗುವಂತೆ ನಮ್ಮ ನಿಕಟ ಪಾಲುದಾರರಾಗಿರುವ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು (ಶಾಸಕಾಂಗದೊಂದಿಗೆ) ಸೇರಿದಂತೆ ವಿವಿಧ ಪಾಲುದಾರರೊಂದಿಗೆ ಸಭೆಗಳನ್ನು ನಡೆಸಲಾಗುತ್ತದೆ. ಮುಂಬರುವ ಕೇಂದ್ರ ಬಜೆಟ್ 2024-25 (ನಿಯಮಿತ)ಗಾಗಿ ಚರ್ಚೆಗಳ ಮಾಡಲಾಗುತ್ತಿದೆ. ಇದಕ್ಕೆ ನಿಮ್ಮ ಸಲಹೆಗಳು ಮತ್ತು ಆಲೋಚನೆಗಳನ್ನು ಸೂಕ್ತವಾಗಿ ಪಡೆಯಲು ಉದ್ದೇಶಿಸಲಾಗಿದೆ. ಈ ಹಿನ್ನೆಲೆಯಲ್ಲಿ ಜೂ.22ರಂದು ಬಜೆಟ್ ಪೂರ್ವಭಾವಿ ಸಭೆಯನ್ನು ಆಯೋಜನೆ ಮಾಡಲಾಗಿದ್ದು, ಬೆಳಗ್ಗೆ 10.00 ಗಂಟೆಗೆ ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆಯುವ ಸಭೆಗೆ ಹಾಜರಾಗುವಂತೆ ಪತ್ರದಲ್ಲಿ ಉಲ್ಲೇಖ ಮಾಡಲಾಗಿದೆ.
ಮಹಾದಾಖಲೆಗೆ ನಿರ್ಮಲಾ ಸಜ್ಜು, ಜುಲೈ 22ಕ್ಕೆ ಕೇಂದ್ರ ಬಜೆಟ್ ಮಂಡನೆ ಸಾಧ್ಯತೆ!
ಈ ಸಭೆಯಲ್ಲಿ ಸೂಕ್ಷ್ಮ-ಆರ್ಥಿಕ ನೀತಿ ಮತ್ತು ಹಣಕಾಸಿನ ಬಲವರ್ಧನೆಗೆ ಗಮನ ಕೊಡಬೇಕಾದ ವಿಷಯಗಳ ಮೇಲೆ ಕೇಂದ್ರೀಕೃತವಾಗಿರುತ್ತದೆ. ನಮ್ಮ ಬೆಳವಣಿಗೆ ಮತ್ತು ಅಭಿವೃದ್ಧಿ ಪ್ರಕ್ರಿಯೆಯನ್ನು ಉಳಿಸಿಕೊಳ್ಳಲು ಸವಾಲುಗಳನ್ನು ಎದುರಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಡುವಿನ ಸಮನ್ವಯ ಮತ್ತು ಸಹಕಾರದ ಅಗತ್ಯ ಮುಖ್ಯವಾಗಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ನಿಮ್ಮ ಸಲಹೆಗಳನ್ನು ಎದುರು ನೋಡುತ್ತಿದೆ. ಈ ಸಭೆಯಲ್ಲಿ ಭಾಗವಹಿ ನಿಮ್ಮ ಅಮೂಲ್ಯವಾದ ಸಲಹೆಗಳನ್ನು ನೀಡಬೇಕು ವಿನಂತಿಸಲಾಗಿದೆ.
ಕಂದಾಯ ಸಚಿವರನ್ನು ಕಳಿಸಲು ಮುಂದಾದ ಸಿಎಂ ಸಿದ್ದರಾಮಯ್ಯ: ಕೇಂದ್ರ ಸರ್ಕಾರದಿಂದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಪೂರ್ವಭಾವಿ ಸಭೆಗೆ ಹಾಜರಾಗುವಂತೆ ಪತ್ರವನ್ನು ಬರೆದಿದ್ದನ್ನು ಸಿಎಂ ಸಿದ್ದರಾಮಯ್ಯ ಸ್ವಾಗತಿಸಿ ಧನ್ಯವಾದ ತಿಳಿಸಿದ್ದಾರೆ. ಆದರೆ, ಜೂ.22ರಂದು ರಾಜ್ಯದಲ್ಲಿ ತಮಗೆ ಪೂರ್ವ ನಿಯೋಜಿತ ಕಾರ್ಯಕ್ರಮಗಳು ನಿಗದಿಯಾಗಿದ್ದರಿಂದ ಪ್ರೀ ಬಜೆಟ್ ಮೀಟಿಂಗ್‌ನಲ್ಲಿ ಭಾಗವಹಿಸಲು ಸಾಧ್ಯವಿಲ್ಲ. ಈ ಹಿನ್ನೆಲೆಯಲ್ಲಿ ನನ್ನ ಬದಲಾಗಿ ನನ್ನ ಸಂಪುಟದ ಸಹೋದ್ಯೋಗಿ ಕಂದಾಯ ಸಚಿವ ಕೃಷ್ಣ ಬೈರೆಗೌಡ ಭಾಗಿಯಾಗಲಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಉತ್ತರ ನೀಡಿದ್ದಾರೆ.
ಮಂತ್ರಾಲಯದ ಕರ್ನಾಟಕ ಛತ್ರದ ಕಳಪೆ ಕಾಮಗಾರಿ: ಲೋಕಾಯುಕ್ತ ತನಿಖೆಗೆ ಕೊಟ್ಟ ಸಚಿವ ರಾಮಲಿಂಗಾರೆಡ್ಡಿ
ಲೋಕಸಭೆ ಅಧಿವೇಶನ ಜೂ.24ರಿಂದ ಜು.3ರವರೆಗೆ ಆಯೋಜನೆ: ಸತತ ಏಳು ಕೇಂದ್ರ ಬಜೆಟ್ ಮಂಡನೆ ಮಾಡಿದ ದೇಶದ ಮೊದಲ ಹಣಕಾಸು ಸಚಿವೆ ಎನ್ನುವ ಶ್ರೇಯಕ್ಕೆ ನಿರ್ಮಲಾ ಸೀತಾರಾಮನ್ ಪಾತ್ರರಾಗಲಿದ್ದಾರೆ. ಪ್ರಸ್ತುತ ನಿರ್ಮಲಾ ಸೀತಾರಾಮನ್ ಹಾಗೂ ಮೊರಾರ್ಜಿ ದೇಸಾಯಿ ಸತತ 6 ಕೇಂದ್ರ ಬಜೆಟ್ ಮಂಡನೆ ಮಾಡಿದ ದಾಖಲೆ ಹೊಂದಿದ್ದಾರೆ. ಈ ವಾರದ ಆರಂಭದಲ್ಲಿ, ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು 18ನೇ ಲೋಕಸಭೆಯ ಮೊದಲ ಅಧಿವೇಶನವು ಜೂನ್ 24 ರಂದು ಪ್ರಾರಂಭವಾಗಲಿದೆ ಎಂದು ಹೇಳಿದರು. ಅಧಿವೇಶನವು ಜುಲೈ 3 ರಂದು ಅಧಿವೇಶನ ಮುಕ್ತಾಯಗೊಳ್ಳಲಿದೆ. ಇನ್ನು ಬಜೆಟ್ ಅಧಿವೇಶನದಲ್ಲಿಯೇ ಜೂನ್ 27 ರಂದು ರಾಷ್ಟ್ರಪತಿಗಳ ಭಾಷಣದ ನಂತರ ಪ್ರಧಾನಿ ಮೋದಿ ಅವರು ಸಂಸತ್ತಿಗೆ ತಮ್ಮ ಮಂತ್ರಿಮಂಡಲವನ್ನು ಪರಿಚಯಿಸುವ ನಿರೀಕ್ಷೆಯಿದೆ. ಸಂಸತ್ತಿನ ಉಭಯ ಸದನಗಳಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಮೇಲಿನ ಚರ್ಚೆಗೆ ಪ್ರಧಾನಿ ಉತ್ತರ ನೀಡಲಿದ್ದಾರೆ.