Asianet Suvarna News Asianet Suvarna News

ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ನಿಯಮ ಪಾಲಿಸದ ಕೆಎಸ್ಸಾರ್ಟಿಸಿ ಚಾಲಕರಿಗೆ ದಂಡ - ನಿಗಮ ಎಚ್ಚರಿಕೆ

ಬೆಂಗಳೂರು-ಮೈಸೂರು ಹೆದ್ದಾರಿನಲ್ಲಿ ಸಂಚಾರ ನಿಯಮ ಉಲ್ಲಂಘಿಸಿ ಬಸ್‌ ಚಾಲನೆ ಮಾಡುವ ಚಾಲಕರಿಗೆ ₹500 ರಿಂದ ₹2 ಸಾವಿರವರೆಗೆ ದಂಡ ವಿಧಿಸುವುದಾಗಿ ಕೆಎಸ್ಸಾರ್ಟಿಸಿ ತಿಳಿಸಿದೆ. Fine for ksrtc drivers who do not follow rules on Bengaluru-Mysore highway

Fine for ksrtc drivers who do not follow rules on Bengaluru-Mysore highway rav
Author
First Published Jul 19, 2024, 11:08 AM IST | Last Updated Jul 19, 2024, 11:08 AM IST

 ಬೆಂಗಳೂರು (ಜು.19): ಬೆಂಗಳೂರು-ಮೈಸೂರು ಹೆದ್ದಾರಿನಲ್ಲಿ ಸಂಚಾರ ನಿಯಮ ಉಲ್ಲಂಘಿಸಿ ಬಸ್‌ ಚಾಲನೆ ಮಾಡುವ ಚಾಲಕರಿಗೆ ₹500 ರಿಂದ ₹2 ಸಾವಿರವರೆಗೆ ದಂಡ ವಿಧಿಸುವುದಾಗಿ ಕೆಎಸ್ಸಾರ್ಟಿಸಿ ತಿಳಿಸಿದೆ.

ಬೆಂಗಳೂರು-ಮೈಸೂರು ಹೆದ್ದಾರಿ(Mysuru Bengaluru xpressway)ನಲ್ಲಿ ಸಂಚಾರ ನಿಯಮ ಉಲ್ಲಂಘಿಸುವ ವಾಹನಗಳ ಪತ್ತೆಗಾಗಿ ಇಂಟೆಲಿಜೆಂಟ್‌ ಟ್ರಾಫಿಕ್‌ ಮ್ಯಾನೇಜ್‌ಮೆಂಟ್ ಸಿಸ್ಟಂ(Intelligent Traffic Management System) ಅಳವಡಿಸಲಾಗಿದೆ. ಅದರಂತೆ ಹೆದ್ದಾರಿಯುದ್ದಕ್ಕೂ ನಿಯಮಿತವಾಗಿ ಉನ್ನತ ತಾಂತ್ರಿಕ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಈ ಕ್ಯಾಮೆರಾದಲ್ಲಿ ಕೆಎಸ್ಸಾರ್ಟಿಸಿ ಬಸ್‌(ksrtc bus)ಗಳು ನಿಯಮ ಉಲ್ಲಂಘಿಸುವುದು ಪತ್ತೆಯಾಗುತ್ತಿದ್ದು, ಸಂಚಾರ ನಿಯಮ ಉಲ್ಲಂಘಿಸುವ ಬಸ್‌ಗಳ ಚಾಲಕರಿಗೆ ದಂಡ ವಿಧಿಸುವುದಾಗಿ ತಿಳಿಸಲಾಗಿದೆ.

ಮುಂದುವರಿದ ಬೆಂ-ಮೈ ಎಕ್ಸ್‌ಪ್ರೆಸ್ ಹೈವೇ ಅಪಘಾತ; ಸಿನಿಮಾ ಸ್ಟೈಲ್‌ನಲ್ಲಿ ಕೆರೆಗೆ ಹಾರಿದ ಕಾರು

ಅತಿವೇಗದ ಚಾಲನೆಗೆ ₹2 ಸಾವಿರ, ಅಪಾಯಕಾರಿ ಚಾಲನೆ, ವಾಹನ ಚಾಲನೆ ಸಮಯದಲ್ಲಿ ಮೊಬೈಲ್‌ ಬಳಕೆ, ನಿಲುಗಡೆ ರಹಿತ ಸ್ಥಳದಲ್ಲಿ ಬಸ್‌ ನಿಲ್ಲಿಸುವುದು, ಸಂಚಾರಿ ಪೊಲೀಸರ ಆದೇಶ ಪಾಲಿಸದಿರುವುದು, ನಿಶಬ್ದ ವಲಯದಲ್ಲಿ ಹಾರ್ನ್‌ ಮಾಡುವುದು, ತುರ್ತು ವಾಹನಗಳ ಸಂಚಾರಕ್ಕ ಸ್ಥಳಾವಕಾಶ ನೀಡದಿರುವುದಕ್ಕೆ ತಲಾ ₹1 ಸಾವಿರ ಹಾಗೂ ವಾಹನ ಚಾಲನೆ ಮಾಡುವಾಗ ಏಕಾಏಕಿ ಪಥ ಬದಲಾವಣೆ, ಏಕಮುಖ ರಸ್ತೆಯಲ್ಲಿ ವಾಹನ ಚಾಲನೆ, ಟ್ರಾಫಿಕ್‌ ಸಿಗ್ನಲ್‌ ಜಂಪ್‌ಗೆ ತಲಾ ₹500 ದಂಡ ವಿಧಿಸಲಾಗುವುದು ಎಂದು ನಿಗಮ ಹೇಳಿದೆ.

Latest Videos
Follow Us:
Download App:
  • android
  • ios