ಬಿವೈವಿ, ಬಿಎಸ್‌ವೈ ವಿರುದ್ಧ ತಪ್ಪು ಮಾಹಿತಿ: ಡಿಕೆಶಿ ವಿರುದ್ಧ ಎಫ್‌ಐಆರ್
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಬಿಜೆಪಿಯ ಇತರೆ ನಾಯಕರ ವಿರುದ್ಧ ತಪ್ಪು ಮಾಹಿತಿಯನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದ ಆರೋಪ ಸಂಬಂಧ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಿ ವಿಚಾರಣೆ ನಡೆಸುವಂತೆ ಹೈಗ್ರೌಂಡ್ ಠಾಣಾ ಪೊಲೀಸರಿಗೆ ನಿರ್ದೇಶನ ನೀಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ
ಬೆಂಗಳೂರು(ಫೆ.07): ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಬಿಜೆಪಿಯ ಇತರೆ ನಾಯಕರ ವಿರುದ್ಧ ತಪ್ಪು ಮಾಹಿತಿಯನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದ ಆರೋಪ ಸಂಬಂಧ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಿ ವಿಚಾರಣೆ ನಡೆಸುವಂತೆ ಹೈಗ್ರೌಂಡ್ ಠಾಣಾ ಪೊಲೀಸರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಿರ್ದೇಶನ ನೀಡಿದೆ.
ಬಿಜೆಪಿಯ ಯೋಗೇಂದ್ರ ಹೂಡಘಟ್ಟ ಸಲ್ಲಿಸಿದ್ದ ಖಾಸಗಿ ದೂರಿನ ವಿಚಾರಣೆ ನಡೆಸಿದ ನ್ಯಾಯಾಲಯ ಈ ಆದೇಶ ನೀಡಿದೆ. ವಿಚಾರಣೆ ವರದಿಯನ್ನು ಸಲ್ಲಿಸುವಂತೆ ಸೂಚಿಸಿ ಮುಂದಿನ ವಿಚಾರಣೆಯನ್ನು ಮಾ.30ಕ್ಕೆ ಮುಂದೂಡಿತು. ಹಿಂದೂ ಕಾರ್ಯಕರ್ತ ಶ್ರೀಕಾಂತ್ ಪೂಜಾರಿಯನ್ನು ಪ್ರಕರಣವೊಂದರ ಸಂಬಂಧ ಬಂಧಿಸಿದ್ದನ್ನು ವಿರೋಧಿಸಿ ರಾಜ್ಯ ಬಿಜೆಪಿ ಪ್ರತಿಭಟನೆ ನಡೆಸಿತ್ತು. ಈ ವೇಳೆ ಫೋಟೋಗಳ ಬಗ್ಗೆ ಸುಳ್ಳು ಮತ್ತು ಪ್ರಚೋದನಾಕಾರಿ ರೀತಿಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೆ ಮಾಡಲಾಗಿತ್ತು. ಆಧಾರರಹಿತ ಆರೋಪಗಳನ್ನು ಮಾಡಲಾಗಿದೆ ಎಂದು ಆರೋಪಿಸಿ ದೂರು ನೀಡಲಾಗಿತ್ತು.
ದೇಶದ ಮುಂದೆ ಬೆತ್ತಲಾದ ಕಾಂಗ್ರೆಸ್‌ನ 2 ತಲೆ ರಾಜಕಾರಣ: ಮಾಜಿ ಸಿಎಂ ಕುಮಾರಸ್ವಾಮಿ ಹೀಗೆ ಹೇಳಿದ್ಯಾಕೆ?
ಇದೇ ವೇಳೆ ಕಾಂಗ್ರೆಸ್‌ನ ಸಾಮಾಜಿಕ ಜಾಲತಾಣದ ಮುಖ್ಯಸ್ಥ ಬಿ.ಆರ್.ನಾಯ್ಡು ವಿರುದ್ಧವೂ ಪ್ರಕರಣ ದಾಖಲಿಸಿ ವಿಚಾರಣೆ ನಡೆಸುವಂತೆ ಸೂಚಿಸಲಾಗಿದೆ.