Asianet Suvarna News Asianet Suvarna News

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ಬೆಂಗ್ಳೂರಲ್ಲಿ ಎಫ್‌ಐಆರ್‌ಗೆ ಆದೇಶ

ಈ ದೂರಿನ ಮೇರೆಗೆ ಶುಕ್ರವಾರ ನ್ಯಾಯಾಲಯ ಎಫ್‌ಐಆರ್‌ ದಾಖಲಿಸುವಂತೆ ಸೂಚಿಸಿ ಮುಂದಿನ ವಿಚಾರಣೆಯನ್ನು ಅ.10ಕ್ಕೆ ಮುಂದೂಡಿಕೆ ಮಾಡಿದೆ. ತಿಲಕ್‌ನಗರ ಪೊಲೀಸರಿಗೆ ಎಫ್‌ಐಆ‌ರ್ ದಾಖಲಿಸುವಂತೆ ನ್ಯಾಯಾಲಯ ಆದೇಶ ನೀಡಿದೆ. 

FIR ordered against Union Finance Minister Nirmala Sitharaman in Bengaluru grg
Author
First Published Sep 28, 2024, 4:22 AM IST | Last Updated Sep 28, 2024, 4:22 AM IST

ಬೆಂಗಳೂರು(ಸೆ.28): ಚುನಾವಣಾ ಬಾಂಡ್‌ಗಳ ಮೂಲಕ ಕೋಟ್ಯಂತರ ರು. ಸುಲಿಗೆ ಮಾಡಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ಇತರರ ವಿರುದ್ಧ ಎಫ್‌ಐಆರ್ ದಾಖಲಿಸು ವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾ ಲಯ ಆದೇಶಿಸಿದೆ. ಜನಾಧಿಕಾರಸಂಘರ್ಷ ಪರಷತ್‌ನ ಆದರ್ಶ ಆರ್. ಐಯ್ಯ‌ರ್ ದೂರು ನೀಡಿದ್ದರು.

ಈ ದೂರಿನ ಮೇರೆಗೆ ಶುಕ್ರವಾರ ನ್ಯಾಯಾಲಯ ಎಫ್‌ಐಆರ್‌ ದಾಖಲಿಸುವಂತೆ ಸೂಚಿಸಿ ಮುಂದಿನ ವಿಚಾರಣೆಯನ್ನು ಅ.10ಕ್ಕೆ ಮುಂದೂಡಿಕೆ ಮಾಡಿದೆ. ತಿಲಕ್‌ನಗರ ಪೊಲೀಸರಿಗೆ ಎಫ್‌ಐಆ‌ರ್ ದಾಖಲಿಸುವಂತೆ ನ್ಯಾಯಾಲಯ ಆದೇಶ ನೀಡಿದೆ. ಸಚಿವೆ ನಿರ್ಮಲಾ ಸೀತಾರಾಮನ್ ಜತೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಬಿಜೆಪಿ ಮುಖಂಡ ನಳಿನ್‌ ಕುಮಾರ್‌ ಕಟೀಲ್, ಕೇಂದ್ರ ಹಾಗೂ ರಾಜ್ಯ ಬಿಜೆಪಿ ಕಚೇರಿ ಮತ್ತು ಇ.ಡಿ. ಇಲಾಖೆ ವಿರುದ್ಧ ದೂರು. 2019  ಏಪ್ರಿಲ್‌ ತಿಂಗಳಿನಿಂದ 2022ರ ಆಗಸ್ಟ್ ತಿಂಗಳವರೆಗೆ ಉದ್ಯಮಿ ಅನಿಲ್ ಅಗಲ್‌ವಾಲ್ ಅವರ ಸಂಸ್ಥೆಯ ಕಡೆಯಿಂದಸುಮಾರು 230 ಕೋಟಿ ರು. ಮತ್ತು ಅರೊಬಿಂದೋ ಫಾರ್ಮಸಿ ಸಂಸ್ಥೆಯಿಂದ 49 ಕೋಟಿ ರು.ನಷ್ಟು ಚುನಾವಣಾ ಬಾಂಡ್‌ ಗಳ ಮೂಲಕ ವಸೂಲಿ ಮಾಡಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಕೆಲಸದ ಒತ್ತಡದಿಂದ ಯುವತಿ ಸಾವಿನ ಬಗ್ಗೆ ನಿರ್ಮಲಾ ಸೀತಾರಾಮನ್ ವಿವಾದಾತ್ಮಕ ಹೇಳಿಕೆ

ನಿರ್ಮಲಾ ಕೆಳಗಿಳಿಸಿ ರಾಜೀನಾಮೆ ಕೇಳಿ ಚುನಾವಣಾ ಬಾಂಡ್ ಮೂಲಕ ಸುಲಿಗೆ ಸಂಬಂಧ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮೇಲೂ ಎಫ್‌ಐಆರ್‌ಆಗಿದೆ. ಈಗ ಅವರು ರಾಜೀನಾಮೆ ಕೊಡ್ತಾರಾ? ಬಿಜೆಪಿಯವರು ಮೊದಲು ಕುಮಾರಸ್ವಾಮಿ, ನಿರ್ಮಲಾ ಸೀತಾರಾವ ಸೀತಾರಾಮನ್ ಅವರನ್ನು ಅಧಿಕಾರದಿಂದ ಕೆಳಗೆ ಇಳಿಸಲಿ. ಆ ಮೇಲೆ ನನ್ನ ರಾಜೀನಾಮೆ ಕೇಳಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. 

Latest Videos
Follow Us:
Download App:
  • android
  • ios