ನವದೆಹಲಿ[ಡಿ.11]: ಸೋಮವಾರವಷ್ಟೇ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಒಂದು ಸಿಹಿ ಮತ್ತು ಎರಡು ಕಹಿ ಸುದ್ದಿಗಳು ದೊರೆತಿವೆ. ಒಂದೆಡೆ ಬ್ಯಾಂಕುಗಳಿಗೆ ಸಾವಿರಾರು ಕೋಟಿ ವಂಚಿಸಿ ಪರಾರಿಯಾಗಿದ್ದ ವಿಜಯ್ ಮಲ್ಯ ಗಡಿಪಾರಿಗೆ ಲಂಡನ್ ನ್ಯಾಯಾಲಯ ಒಪ್ಪಿಗೆ ನೀಡಿದೆ. ಇತ್ತ ನಿನ್ನೆ ನಡೆದ ನಾಟಕೀಯ ಬೆಳವಣಿಗೆಯಲ್ಲಿ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಗವರ್ನರ್ ಹುದ್ದೆಗೆ ಪಟೇಲ್ ರಾಜೀನಾಮೆ ನೀಡಿದ್ದಾರೆ. ಅಲ್ಲದೇ ಎನ್‌ಡಿಎ ಭಾಗವಾಗಿದ್ದ ಆರ್‌ಎಲ್‌ಎಸ್‌ಪಿ ಸಂಸದ ಉಪೇಂದ್ರ ಖುಷ್ವಾಹ್ ಕೂಡ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮಧ್ಯೆ ಇಂದು ಲೋಕಸಭೆ ಚುನಾವಣೆಗೆ ಸೆಮಿ ಫೈನಲ್ ಎಂದೇ ಹೇಳಲಾಗುತ್ತಿರುವ ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾಗಲಿದ್ದು, ಮೋದಿ ಸಕಾರಕ್ಕೆ ಸತ್ವ ಪರೀಕ್ಷೆ ಎದುರಾಗಲಿದೆ.

ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್ಗಢ, ತೆಲಂಗಾಣ ಮತ್ತು ಮಿಜೋರಾಂ ವಿಧಾನಸಭೆ ಚುನಾವಣೆ ಫಲಿತಾಂಶಗಳು ದೇಶದ ರಾಜಕೀಯ ದಿಕ್ಕನ್ನು ನಿಧರಿಸಲಿವೆ.ಇಂದಿನ ಫಲಿತಾಂಶ ಕೇವಲ ಬಿಜೆಪಿಗೆ ಮಾತ್ರವಲ್ಲದೇ ಅಧಿಕಾರದ ಕನಸು ಕಾಣುತ್ತಿರುವ ಪ್ರತಿ ಪಕ್ಷಗಳು ಅದರಲ್ಲೂ ವಿಶೇಷವಾಗಿ ಕಾಂಗ್ರೆಸ್ ಗೂ ಅತಿ ಮಹತ್ವದ್ದಾಗಿದೆ.

ಅದರಂತೆ ಇಂದಿನ ಪಂಚ ರಾಜ್ಯಗಳ ವಿಧಾನಸಭೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿಯನ್ನು ನಿಮ್ಮ ಸುವರ್ಣ ನ್ಯೂಸ್. ಕಾಂ ನಿಮ್ಮ ಮುಂದೆ ಇಡಲಿದೆ.2019ರ ಪ್ರಧಾನಿ ಕುಚಿ ದಾವೇದಾರ ಯಾರಾಗಲಿದ್ದಾರೆ ಎಂಬ ಮಿಲಿಯನ್ ಡಾಲರ್ ಪ್ರಶ್ನೆಗೆ ಉತ್ತರ ಕಂಡುಕೊಳ್ಳಲು ಪಂಚ ರಾಜ್ಯಗಳ ಚುನಾವಣೆ ಫಲಿತಾಂಶವನ್ನು ಇನ್ನು ಕೆಲವೇ ಕ್ಷಣಗಳಲ್ಲಿ ನಿಮ್ಮ ಸುವರ್ಣ ನ್ಯೂಸ್. ಕಾಂ ನಲ್ಲಿ ನಿರೀಕ್ಷಸಿ.