ಮದುವೆಯಾಗುವುದಾಗಿ ಸುಳ್ಳು ಭರವಸೆ ನೀಡಿ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಸಂತ್ರಸ್ತೆ ಹಾಗೂ ಆರೋಪಿ ನಡುವೆ ಎಷ್ಟುಅವಧಿಯಿಂದ ಸಂಬಂಧವಿದೆ ಎಂಬುದನ್ನು ಪರಿಗಣಿಸಬೇಕಾಗುತ್ತದೆ. ಒಪ್ಪಿತ ಲೈಂಗಿಕ ಕ್ರಿಯೆ ನಡೆದಿದ್ದರೆ ಅದು ಅತ್ಯಾಚಾರವಾಗುವುದಿಲ್ಲ ಎಂದು ಹೈಕೋರ್ಟ್‌ ಅಭಿಪ್ರಾಯಪಟ್ಟಿದೆ. 

ಬೆಂಗಳೂರು (ಮಾ.11): ಮದುವೆಯಾಗುವುದಾಗಿ ಸುಳ್ಳು ಭರವಸೆ ನೀಡಿ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಸಂತ್ರಸ್ತೆ ಹಾಗೂ ಆರೋಪಿ ನಡುವೆ ಎಷ್ಟು ಅವಧಿಯಿಂದ ಸಂಬಂಧವಿದೆ ಎಂಬುದನ್ನು ಪರಿಗಣಿಸಬೇಕಾಗುತ್ತದೆ. ಒಪ್ಪಿತ ಲೈಂಗಿಕ ಕ್ರಿಯೆ ನಡೆದಿದ್ದರೆ ಅದು ಅತ್ಯಾಚಾರವಾಗುವುದಿಲ್ಲ ಎಂದು ಹೈಕೋರ್ಟ್‌ ಅಭಿಪ್ರಾಯಪಟ್ಟಿದೆ. ಅಲ್ಲದೆ, ಮದುವೆಯ ಭರವಸೆ ನೀಡಿ ಐದು ವರ್ಷಕ್ಕೂ ಅಧಿಕ ಸಮಯ ಲೈಂಗಿಕ ಸಂಪರ್ಕ ಬೆಳೆಸಿದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬರ ವಿರುದ್ಧ ದಾಖಲಾಗಿದ್ದ ಅತ್ಯಾಚಾರ ಪ್ರಕರಣವನ್ನು ಹೈಕೋರ್ಟ್‌ ರದ್ದುಪಡಿಸಿದೆ. ಪ್ರಕರಣದಲ್ಲಿ ತನ್ನ ವಿರುದ್ಧ ಸಲ್ಲಿಕೆಯಾಗಿರುವ ದೋಷಾರೋಪ ಪಟ್ಟಿಯನ್ನು ರದ್ದುಪಡಿಸುವಂತೆ ಕೋರಿ ಮಲ್ಲಿಕಾರ್ಜುನ ದೇಸಾಯಿ ಗೌಡರ್‌ ಎಂಬಾತ ಸಲ್ಲಿಸಿದ್ದ ಅರ್ಜಿಯನ್ನು ಭಾಗಶಃ ಪುರಸ್ಕರಿಸಿದ ನ್ಯಾಯಪೀಠ ಈ ಆದೇಶ ಮಾಡಿದೆ. 

ಆರೋಪಿ, ಸಂತ್ರಸ್ಥೆ ನಡುವಿನ ಪರಿಚಯವು ಪ್ರೀತಿಗೆ ತಿರುಗಿ, ಇಬ್ಬರ ನಡುವೆ ದೈಹಿಕ ಸಂಪರ್ಕ ಬೆಳೆದಿತ್ತು. ಸಂಬಂಧ ಹಳಸಿದ ಬಳಿಕ ಸಂತ್ರಸ್ತೆಯು ಪೊಲೀಸರಿಗೆ ದೂರು ನೀಡಿ, ಆರೋಪಿಯು ಮದುವೆಯಾಗುವುದಾಗಿ ಸುಳ್ಳು ಭರವಸೆ ನೀಡಿ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಿದ್ದರು. ತನಿಖೆ ನಡೆಸಿದ್ದ ಪೊಲೀಸರು ಆರೋಪ ಪಟ್ಟಿಸಲ್ಲಿಸಿದ್ದರು. ಅದನ್ನು ರದ್ದುಪಡಿಸುವಂತೆ ಕೋರಿ ಆರೋಪಿ ಹೈಕೋರ್ಟ್‌ ಮೆಟ್ಟಿಲೇರಿದ್ದ. ಇದೇ ವೇಳೆ ಮಹಿಳೆ ಮೇಲೆ ಹಲ್ಲೆ ನಡೆಸಿ ಗಾಯಗೊಳಿಸಿದ ಹಾಗೂ ಜೀವ ಬೆದರಿಕೆ ಸಂಬಂಧ ದೋಷಾರೋಪವನ್ನು ಎತ್ತಿ ಹಿಡಿದಿರುವ ನ್ಯಾಯಪೀಠ, ಈ ಕುರಿತು ಸಂಬಂಧಪಟ್ಟ ನ್ಯಾಯಾಲಯವು ಅರ್ಜಿದಾರನ ವಿರುದ್ಧದ ಕಾನೂನು ಪ್ರಕ್ರಿಯೆ ಮುಂದುವರಿಸಬಹುದು ಎಂದು ಸ್ಪಷ್ಟಪಡಿಸಿದೆ.

ಸತೀಶ್‌ ಜಾರಕಿಹೊಳಿ ಗೆಲುವಿನ ಓಟಕ್ಕೆ ಬಿಜೆಪಿ ಪಡೆ ಬ್ರೇಕ್‌ ಹಾಕುತ್ತಾ

ಪ್ರಕರಣವೇನು?: ಅರ್ಜಿದಾರ ಆರೋಪಿ ಮತ್ತು ಸಂತ್ರಸ್ತೆ ಪರಿಚಿತರಾಗಿದ್ದರು. ಪರಿಚಯವು ಪ್ರೀತಿಗೆ ತಿರುಗಿ, ಇಬ್ಬರ ನಡುವೆ ದೈಹಿಕ ಸಂಪರ್ಕ ಬೆಳೆದಿತ್ತು. ಸಂಬಂಧ ಹಳಸಿದ ಬಳಿಕ ಸಂತ್ರಸ್ತೆಯು ಪೊಲೀಸರಿಗೆ ದೂರು ನೀಡಿ, ಆರೋಪಿಯು ಮದುವೆಯಾಗುವುದಾಗಿ ಸುಳ್ಳು ಭರವಸೆ ನೀಡಿ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಿದ್ದರು. ತನಿಖೆ ನಡೆಸಿದ್ದ ಪೊಲೀಸರು ಆರೋಪ ಪಟ್ಟಿಸಲ್ಲಿಸಿದ್ದರು. ಅದನ್ನು ರದ್ದುಪಡಿಸುವಂತೆ ಕೋರಿ ಆರೋಪಿ ಹೈಕೋರ್ಟ್‌ ಮೆಟ್ಟಿಲೇರಿದ್ದ.

ಹೃದಯಾಘಾತದಿಂದ ಆರ್.ಧ್ರುವನಾರಾಯಣ ನಿಧನ: ಹುಟ್ಟೂರಿನಲ್ಲಿ ಅಂತ್ಯ ಸಂಸ್ಕಾರ

ವಿಚಾರಣೆ ನಡೆಸಿದ ಹೈಕೋರ್ಟ್‌, ದೂರಿನಲ್ಲಿ ಉಲ್ಲೇಖಿಸಿರುವಂತೆ ಆರೋಪಿ ಮತ್ತು ಸಂತ್ರಸ್ತೆ ಕಳೆದ 12 ವರ್ಷಗಳಿಂದ ಪರಿಚಿತರು. ಇಬ್ಬರ ನಡುವೆ ಪ್ರೀತಿಯಿತ್ತು. ನಂತರ ದೈಹಿಕ ಸಂಪರ್ಕ ಬೆಳೆದಿದೆ. ಅದಕ್ಕೆ ಸಂತ್ರಸ್ತೆ ಐದು ವರ್ಷದವರೆಗೆ ಒಪ್ಪಿಗೆ ನೀಡಿದ್ದಾರೆ. ಅಂದರೆ ಇಷ್ಟು ಸುದೀರ್ಘ ಅವಧಿಯವರೆಗೆ ಆರೋಪಿಯು ಸಂತ್ರಸ್ತೆಯೊಂದಿಗೆ ಒತ್ತಾಯಪೂರ್ವಕ ದೈಹಿಕ ಸಂಪರ್ಕ ಬೆಳೆಸಲು ಸಾಧ್ಯವಿಲ್ಲ. ಸಂತ್ರಸ್ತೆಯ ಒಪ್ಪಿಗೆ ಮೇರೆಗೆ ದೈಹಿಕ ಸಂಪರ್ಕ ಬೆಳೆದಿದೆ ಎಂಬುದು ತಿಳಿಯುತ್ತದೆ. ಒಪ್ಪಿತ ಲೈಂಗಿಕ ಕ್ರಿಯೆಯಾದರೆ ಅದನ್ನು ಅತ್ಯಾಚಾರ ಎಂದು ಪರಿಗಣಿಸಲಾಗದು ಎಂದು ಅಭಿಪ್ರಾಯಪಟ್ಟಿದೆ.