ಬೆಂಗಳೂರು[ಜ.08]: ನೆರೆ ಪರಿಹಾರಕ್ಕೆ ಕೇಂದ್ರದಿಂದ ಬಿಡುಗಡೆಯಾಗಿರುವ ಪರಿಹಾರ ಮೊತ್ತ ಸಾಕಾಗುವುದಿಲ್ಲ. ಇದುವರೆಗೆ ಎರಡು ಕಂತುಗಳಲ್ಲಿ ಹಣ ಬಿಡುಗಡೆಯಾಗಿದ್ದು, ಮತ್ತಷ್ಟುಪರಿಹಾರ ಸಿಗುವ ವಿಶ್ವಾಸ ಇದೆ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಮಂಗಳವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಜ್ಯಕ್ಕೆ ಆಗಮಿಸಿ ಹಿಂತಿರುಗಿದ ಕೂಡಲೇ ಪ್ರಧಾನಿ ಮೋದಿ ಅವರು 1869 ಕೋಟಿ ರು.ಗಳ ನೆರವು ಘೋಷಿಸಿದ್ದಾರೆ. ಮುಂಬರುವ ದಿನಗಳಲ್ಲಿ ಹಂತ ಹಂತವಾಗಿ ಕೇಂದ್ರ ಸರ್ಕಾರ ಮತ್ತಷ್ಟುಆರ್ಥಿಕ ನೆರವು ನೀಡಲಿದೆ. ಮೊದಲು 1200 ಕೋಟಿ ರು. ಬಿಡುಗಡೆಯಾಗಿದ್ದು, ಈಗ 1869 ಕೋಟಿ ರು. ಹಣ ಬಿಡುಗಡೆ ಮಾಡಿದ್ದಾರೆ. ನೆರೆ ಪ್ರದೇಶಗಳಿಗೆ ಹಣ ಬಿಡುಗಡೆ ಮಾಡಿದ್ದಾರೆ. ಇದಕ್ಕಾಗಿ ಪ್ರಧಾನಿಗಳಿಗೆ ಅಭಿನಂದಿಸುವುದಾಗಿ ತಿಳಿಸಿದರು.

ಕೇಂದ್ರದಿಂದ 1870 ಕೋಟಿ ನೆರೆ ಪರಿಹಾರ : ಮೋದಿ ಭೇಟಿ ಬೆನ್ನಲ್ಲೇ ಪ್ರಕಟ

ಸದ್ಯಕ್ಕೆ ಬಿಡುಗಡೆ ಮಾಡಿರುವ ಹಣ ಸಾಕಾಗುವುದಿಲ್ಲ. ಮತ್ತಷ್ಟುಹಣ ಬೇಕಾಗಿದೆ. ನೆರೆ ಪರಿಹಾರಕ್ಕೆ ಕೇಂದ್ರದಿಂದ ಇನ್ನಷ್ಟುಆರ್ಥಿಕ ನೆರವು ಸದ್ಯದಲ್ಲಿ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಅವರು, ಬಜೆಟ್‌ ಪೂರ್ವಭಾವಿ ಸಭೆ ಆರಂಭಿಸಲಾಗಿದೆ. ಉತ್ತಮ ಬಜೆಟ್‌ ಮಂಡನೆ ಮಾಡಲಾಗುವುದು. ರೈತ ಪರ ಬಜೆಟ್‌ ಮಂಡನೆ ಮಾಡುವ ಆಲೋಚನೆ ಇದೆ ಎಂದು ಹೇಳಿದರು.