Asianet Suvarna News Asianet Suvarna News

ಬಾಳಗಾರ ಭಾಗದಲ್ಲಿ ಚಿರತೆಗಳ ಓಡಾಟ: ಜಮೀನುಗಳಿಗೆ ಹೋಗಲು ರೈತರು ಆತಂಕ

ತಾಲೂಕಿನ ಬಾಳಗಾರ ಗ್ರಾಮದ ಬೆಟ್ಟ, ಗುಡ್ಡಗಳಲ್ಲಿ ಚಿರತೆ ಸಂಚರಿಸುತ್ತಿರುವ ಅಂಶ ಬೆಳಕಿಗೆ ಬಂದಿದ್ದು ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ.

Footsteps of leopards on the balagar area at Shirsi  people in fear rav
Author
First Published Sep 29, 2023, 12:27 PM IST | Last Updated Sep 29, 2023, 12:27 PM IST

ಶಿರಸಿ (ಸೆ.29) :  ತಾಲೂಕಿನ ಬಾಳಗಾರ ಗ್ರಾಮದ ಬೆಟ್ಟ, ಗುಡ್ಡಗಳಲ್ಲಿ ಚಿರತೆ ಸಂಚರಿಸುತ್ತಿರುವ ಅಂಶ ಬೆಳಕಿಗೆ ಬಂದಿದ್ದು ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ.

ಇದಕ್ಕೆ ಪುಷ್ಟಿ ನೀಡುವಂತೆ ಆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎದುರಿನ ರಸ್ತೆಯಲ್ಲಿ ಕಳೆದ ಎರಡ್ಮೂರು ದಿನಗಳ ಹಿಂದೆ ಚಿರತೆಯೊಂದು ಮೂತ್ರ ಮಾಡಿ ಲದ್ದಿ ಹಾಕಿ ಹೋಗಿರುವುದು ಗ್ರಾಮಸ್ಥರಲ್ಲಿ ಆತಂಕದ ಜತೆ ಅಚ್ಚರಿಯನ್ನೂ ಮೂಡಿಸಿದೆ. ಆದರೆ ಈ ಚಿರತೆ ಸಂಚಾರದಿಂದ ಯಾವುದೇ ಸಾಕು ಪ್ರಾಣಿಗಳು ಚಿರತೆ ಬಾಯಿಗೆ ತುತ್ತಾದ, ಕಾಣೆಯಾದ ಹಾಗೂ ಚಿರತೆ ನೋಡಿದ ಬಗ್ಗೆಯಾಗಲೀ ವರದಿಯಾಗಿಲ್ಲ.

ಇತ್ತೀಚಿನ ವರ್ಷಗಳಲ್ಲಿ ಅಘನಾಶಿನಿ ನದಿ ತಟದಲ್ಲಿರುವ ಬಾಳಗಾರ, ಬಂದಳಿಕೆ, ಕರೂರು, ಹಳದೋಟ, ಭತ್ತಗುತ್ತಿಗೆ, ದೊಡ್ಡಮನೆ, ಹೂವಿನಮನೆ, ಮುತ್ತಮುರ್ಡು, ಅಡಕಳ್ಳಿ, ಹಿತ್ತಲಕೈ ಮತ್ತಿತರ ಗ್ರಾಮಸ್ಥರು ಪರಿಸರ ರಕ್ಷಣೆಗೆ ಒತ್ತು ಕೊಟ್ಟು ತಮ್ಮ ಬೆಟ್ಟಗಳಲ್ಲಿ ಕಾಡು ಜಾತಿ ಗಿಡ ಬೆಳೆಸಿದ್ದರಿಂದ ಕಾಡು ಪ್ರಾಣಿಗಳಿಗೆ ಇದೊಂದು ಪ್ರಶಸ್ತ ಆವಾಸ ಸ್ಥಾನವಾಗಿ ಪರಿಣಮಿಸುತ್ತಿದೆ.

ಬನ್ನೇರುಘಟ್ಟ ಉದ್ಯಾನವನದಲ್ಲಿ ಚಿರತೆ ಬಳಿಕ ಈಗ 13 ಜಿಂಕೆಗಳ ಸಾವು: ಪ್ರಾಣಿ ಪ್ರಿಯರ ಆಕ್ರೋಶ

ಅನೇಕ ವರ್ಷಗಳಿಂದ ಈ ಭಾಗದಲ್ಲಿ ಹುಲಿ, ಚಿರತೆ ಸಂಚಾರವಿದೆ. ಬಾಳಗಾರ ಅಘನಾಶಿನಿ ನದಿ ತಟದ ಮಾರಿಗದ್ದೆ ಹೊಳೆಯಿದಿಂದ ಬಾಳಗಾರ ಗಾಳಿಗುಡ್ಡ, ಜೋಗಿಮನೆ ಸಮೀಪದ ಕೆರೆ ಮೂಲೆ ಬೆಟ್ಟ, ಶಾಲೆಯ ಹಿಂಭಾಗದ ಕವಲುಗುಡ್ಡ, ಕುಮ್ರಿ ಗುಡ್ಡ, ತಗ್ಗಿನ ಬಾಳಗಾರ ನಾಗರಸಾಲೆ ಮೂಲೆ ಬೆಟ್ಟದ ಮೂಲಕ ಮುಂದೆ ಕರೂರು ಮಾರ್ಗವಾಗಿ ತಟ್ಟಗುಣಿ ಹೊಳೆಗೆ ತಲುಪುವ ಒಂದು ಹುಲಿ-ಚಿರತೆ ಕಾರಿಡಾರೇ ಇದೆ. ಬೆಟ್ಟ, ಬೇಣದಗುಂಟ ಚಿರತೆ ರಾತ್ರಿ ಸಮಯದಲ್ಲಿ ಸಂಚರಿಸುತ್ತಿವೆ. 6-7 ವರ್ಷಗಳ ಹಿಂದೆ ತಮ್ಮ ಮನೆಯಂಗಳದಲ್ಲಿ ಕಟ್ಟಿ ಹಾಕಿದ್ದ ಸಾಕು ನಾಯಿಯನ್ನು ಮಧ್ಯ ರಾತ್ರಿಯಲ್ಲಿ ಚಿರತೆಯೊಂದು ಕಚ್ಚಿಕೊಂಡು ಮನೆಯ ಹಿಂದಿನ ಬೆಟ್ಟದ ತುದಿಗೆ ಹೋಗಿತ್ತು. ನಾಯಿ ಸೆಣೆಸಾಡಿ ತಪ್ಪಿಸಿಕೊಂಡು ವಾಪಸ್ ಬಂದಿತ್ತು. ನಂತರ ಎರಡು ವರ್ಷ ಬದುಕಿತ್ತು. ಇದರಂತೆ ಕೆಳಗಿನ ಬಾಳಗಾರದ ಎಂ.ಜಿ. ಶಾಸ್ತ್ರೀ ಅವರ ಮನೆಯಂಗಳದಲ್ಲಿ ಕಟ್ಟಿ ಹಾಕಿದ್ದ ಸಾಕು ನಾಯಿಯನ್ನು ಮೂರು ವರ್ಷಗಳ ಹಿಂದೆ ಚಿರತೆಯೊಂದು ಕಚ್ಚಿಕೊಂಡು ಹೋಗಿತ್ತು. ಅನೇಕ ಬಾರಿ ಇವುಗಳ ಘರ್ಜನೆಯನ್ನು ತಾವು ಕೇಳಿದ್ದಾಗಿ ಬಾಳಗಾರ ಜೋಗಿಮನೆಯ ಅನಂತ ರಾಮಕೃಷ್ಣ ಹೆಗಡೆ ಆತಂಕಿಸಿದ್ದಾರೆ.

ಬೆಂಗಳೂರು ಮಾರಕ ವೈರಸ್‌ಗೆ ಬನ್ನೇರುಘಟ್ಟ ಜೈವಿಕ ಉದ್ಯಾನದ 7 ಚಿರತೆಗಳ ಸಾವು

ಬಾಳಗಾರ ಶಾಲೆಯ ಎದುರು ಕಂಡುಬಂದ ಚಿರತೆ ಲದ್ದಿ ಕುತೂಹಲವನ್ನುಂಟು ಮಾಡಿದೆ. ಸ್ವಲ್ಪ ದಿನಗಳ ಹಿಂದೆ ಅನತಿ ದೂರದಲ್ಲಿ ಇದೇ ತರಹದ ಲದ್ದಿ ಕಂಡಿತ್ತು. ಅಂದರೆ ಈ ಭಾಗದಲ್ಲಿ ಎರಡು ಚಿರತೆಗಳು ಓಡಾಡುತ್ತಿವೆ. ಇಲಾಖೆಯವರು ಸ್ಥಳ ಪರಿಶೀಲಿಸಿ ಚಿರತೆ ಮತ್ತು ಹುಲಿ‌ ಸಂಚಾರದ ಕುರಿತು ಜನರಿಗೆ ಸ್ಪಷ್ಟ ಮಾಹಿತಿ ಹಾಗೂ ಅಭಯ ಕೊಡಬೇಕು. ಇದೊಂದು ಹುಲಿ-ಚಿರತೆಯ ಕಾರಿಡಾರ್ ಆಗಿರಲಿಕ್ಕೂ ಸಾಕು.

ಡಾ. ಬಾಲಕೃಷ್ಣ ಹೆಗಡೆ, ಇತಿಹಾಸ ತಜ್ಞ

ಈ ಭಾಗದಲ್ಲಿ ಚಿರತೆ ಓಡಾಟ ಇದೆ. ಚಿರತೆಯದ್ದೇ‌ ಲದ್ದಿ ಆಗಿರಬೇಕು. ಸಂಬಂಧ ಪಟ್ಟ ಅಧಿಕಾರಿಗಳು ಸ್ಥಳ ಪರಿಶೀಲನೆ ಮಾಡುತ್ತಾರೆ.

ಡಾ. ಅಜ್ಜಯ್ಯ ಡಿಎಫ್ಒ

Latest Videos
Follow Us:
Download App:
  • android
  • ios