ದಿನೇ ದಿನೇ ತಿರುವು ಪಡೆದುಕೊಳ್ಳುತ್ತಿದೆ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ| ದೀರ್ಘ ಮೌನ ವಹಿಸಿದ್ದ ಬಿಜೆಪಿಯಿಂದ ಮೊದಲ ಅಧಿಕೃತ ಹೇಳಿಕೆ| ಒಂದೇ ಬಾಣದಿಂದ ಎರಡು ಹಕ್ಕಿಗಳಿಗೆ ಗುರಿ ಇಟ್ಟ ಬಿಜೆಪಿ

ಬೆಂಗಳೂರು(ಮಾ.16) ದೇಶಾದ್ಯಂತ ಭಾರೀ ಸಂಚಲನ ಮೂಡಿಸಿದ್ದ ಹಾಗೂ ಕರ್ನಾಟಕ ಸರ್ಕಾರಕ್ಕೆ ಭಾರೀ ಮುಜುಗರ ಹುಟ್ಟಿಸಿದ್ದ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ದಿನೇ ದಿನೇ ಹೊಸ ತಿರುವು ಪಡೆದುಕೊಳಗ್ಳುತ್ತಿದೆ. ಬಿಜೆಪಿ, ಕಾಂಗ್ರೆಸ್‌ ನಾಯಕರು ಕೂಡಾ ಪರಸ್ಪರ ವಾಗ್ದಾಳಿ ನಡೆಸುತ್ತಿದ್ದರೆ, ಅತ್ತ ಎಸ್‌ಐಟಿ ಸೈಲೆಂಟಾಗಿ ತನ್ನ ತನಿಖೆ ಮುಂದುವರೆಸಿದೆ. ಆದರೆ ಈ ಎಲ್ಲಾ ಬೆಳವಣಿಗೆಗಳ ಬೆನ್ನಲ್ಲೇ ಬಿಜೆಪಿಯು ಈ ಪ್ರಕರಣ ಸಂಬಂಧ ಇದೇ ಮೊದಲ ಬಾರಿ ಅಧಿಕೃತ ಹೇಳಿಕೆ ನೀಡಿದೆ. ಈ ಮೂಲಕ ಈ ಪ್ರಕರಣದ ಹಿಂದೆ ಯಾರಿದ್ದಾರೆ ಎಂಬ ಬಗ್ಗೆ ಸುಳಿವು ನೀಡಿದ್ದಾರೆ.

ಹೌದು ಕರ್ನಾಟಕ ಬಿಜೆಪಿ ಟ್ವಿಟರ್‌ ಅಕೌಂಟ್‌ನಿಂದ ಪ್ರಕರಣ ಸಂಬಂಧ ಮಹತ್ವದ ಟ್ವೀಟ್ ಮಾಡಲಾಗಿದೆ. ಪ್ರಕರಣದಲ್ಲಿ ಯಾರಿದ್ದಾರೆಂಬ ಕುರಿತಾಗಿ ಸುಳಿವು ನೀಡಿ ಮಾಡಲಾದ ಈ ಟ್ವೀಟ್‌ನಲ್ಲಿ, ಆ ಘಟನೆಯ ಹಿಂದೆ ಒಬ್ಬ ಜೈಲಿನಿಂದ ಜಾಮೀನಿನ ಮೇಲೆ ಹೊರಗಡೆ ಬಂದಿರುವ ಭ್ರಷ್ಟಾಚಾರಿ ಆರೋಪಿ ಮಹಾ ನಾಯಕನ ಕೈವಾಡ ಇದೆ ಎಂಬ ಸುದ್ದಿ ಇದೆ.

"

ಆ ಮಹಾನಾಯಕ ಕೂಡಾ ತನ್ನನ್ನು ಸಿಲುಕಿಸುವ ಕುತಂತ್ರ ನಡೆಯುತ್ತಿದೆ ಎಂದು ಹೇಳುವ ಮೂಲಕ ಹೆಗಲು ಮುಟ್ಟಿ ನೋಡಿಕೊಂಡಿದ್ದಾರೆ.

ರಾಹುಲ್‌ ಗಾಂಧಿ ಏಕೆ ಸುಕನ್ಯಾ ದೇವಿಯ ಪರವಾಗಿ ಒಮ್ಮೆಯೂ ಧ್ವನಿ ಎತ್ತಿಲ್ಲ? ಎನ್ನುವುದರೊಂದಿಗೆ, ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಬಗ್ಗೆಯೂ ಪ್ರಶ್ನಿಸಿ ಒಂದೇ ಬಾಣದಲ್ಲಿ ಎರಡು ಹಕ್ಕಿಗೆ ಗುರಿ ಇಟ್ಟಿದೆ. 

Scroll to load tweet…

ಇನ್ನು ಬಿಜೆಪಿಯ ಈ ಟ್ವೀಟ್‌ಗೆ ಕಾಂಗ್ರೆಸ್‌ ಹೇಗೆ ಪ್ರತಿಕ್ರಿಯಿಸುತ್ತದೆ ಎಂದು ಕಾದು ನೊಡಬೇಕಿದೆ.