ಸಿಎಂರನ್ನು ಅವಾಚ್ಯ ಪದಗಳಿಂದ ನಿಂದಿಸಿದ ವ್ಯಕ್ತಿ ಮೇಲೆ ಹಲ್ಲೆ: ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಉಮೇಶ್ ಶೆಟ್ಟಿ ದೂರು
ಸಿಎಂ ಸಿದ್ದರಾಮಯ್ಯ ವಿರುದ್ಧ ಸೋಷಿಯಲ್ ಮೀಡಿಯಾದಲ್ಲಿ ಸಿದ್ರಾಮುಲ್ಲಾಖಾನ್ ಎಂದು ಅವಾಚ್ಯ ಪದಗಳಿಂದ ನಿಂದಿಸಿದ ವ್ಯಕ್ತಿಯನ್ನು 3 ದಿನಗಳ ಹಿಂದೆ ಹಿಡಿದು ಕಾಂಗ್ರೆಸ್ ಕಾರ್ಯಕರ್ತರು ಮನಸೋ ಇಚ್ಚೆ ಹಲ್ಲೆ ಮಾಡಿದ್ದರು.
ಬೆಂಗಳೂರು (ಜೂ.07): ಸಿಎಂ ಸಿದ್ದರಾಮಯ್ಯ ವಿರುದ್ಧ ಸೋಷಿಯಲ್ ಮೀಡಿಯಾದಲ್ಲಿ ಸಿದ್ರಾಮುಲ್ಲಾಖಾನ್ ಎಂದು ಅವಾಚ್ಯ ಪದಗಳಿಂದ ನಿಂದಿಸಿದ ವ್ಯಕ್ತಿಯನ್ನು 3 ದಿನಗಳ ಹಿಂದೆ ಹಿಡಿದು ಕಾಂಗ್ರೆಸ್ ಕಾರ್ಯಕರ್ತರು ಮನಸೋ ಇಚ್ಚೆ ಹಲ್ಲೆ ಮಾಡಿದ್ದರು. ಅಲ್ಲದೇ ಫ್ಲೆಕ್ಸ್‌ನಲ್ಲಿದ್ದ ಸಿದ್ದರಾಮಯ್ಯ ಕಾಲಿಗೆ ಬೀಳುವಂತೆ ಒತ್ತಾಯ ಮಾಡಿ ವ್ಯಕ್ತಿಯಿಂದ ಕ್ಷಮಾಪಣೆ ಕೇಳಿಸಿದ್ದರು ಈ ವಿಷಯ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿತ್ತು. ಇದೀಗ ಈ ವಿಚಾರವಾಗಿ ಬಿಬಿಎಂಪಿ ಮಾಜಿ ಸದಸ್ಯ ಉಮೇಶ್ ಶೆಟ್ಟಿ ವಿಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ನೈತಿಕ ಪೊಲೀಸ್ ಗಿರಿ ತೋರಿಸಿದ್ದಾರೆ ಎಂದು ಬಿಜೆಪಿ ಲೀಗಲ್ ಸೆಲ್‌ನಿಂದ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಕೇಸ್ ದಾಖಲಿಸಿದ್ದಾರೆ. ಸಮಾಜದಲ್ಲಿ ಶಾಂತಿ ಕಾಪಾಡಬೇಕು. ಹೀಗಾಗಿ ಹಲ್ಲೆ ನಡೆಸಿದವರ ವಿರುದ್ಧ ದೂರು ದಾಖಲಿಸಿದ್ದೇವೆ. ವಿಜಯನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲು ಗಡುವು ನೀಡಲಾಗಿದ್ದು, ವಿಡಿಯೋ ಹಾಗೂ ದಾಖಲೆಗಳನ್ನ ಪೊಲೀಸರು ಪರೀಶೀಲಿಸುತ್ತಿದ್ದು, ಘಟನೆ ಸಂಬಂಧ ಬಹುತೇಕ ಎಫ್ಐಆರ್ ದಾಖಲಾಗುವ ಸಾಧ್ಯತೆಯಿದೆ.
'ಗೃಹಜ್ಯೋತಿ' ಫಲಾನುಭವಿಯಾಗಲು ಮೊದಲು ಬಾಕಿ ಇರುವ ಬಿಲ್ ಕಟ್ಟಿ: ಗ್ರಾಹಕರಿಗೆ ಎಸ್ಕಾಂಗಳಿಂದ ಬಿಗ್ ಶಾಕ್
ಕಾಂಗ್ರೆಸ್ ಕಾರ್ಯಕರ್ತರು ನೈತಿಕ ಪೊಲೀಸ್ ಗಿರಿ ತೋರಿಸಿದ್ದಾರೆ: ವ್ಯಕ್ತಿಯೊಬ್ಬ ಸಾಮಾಜಿಕ ಜಾಲತಾಣದಲ್ಲಿ ಸಿದ್ದರಾಮಯ್ಯರವರಿಗೆ ಬೈದಿದ್ದ ಅಂತ ಹಲ್ಲೆ ಮಾಡಲಾಗಿದೆ. 500 ಜನ ಇರೋ ಜಾಗದಲ್ಲಿ ಈ ಘಟನೆ ನಡೆದಿದೆ. ಬಿಜೆಪಿ ಕಾರ್ಯಕರ್ತನಿಗೆ ಹಲ್ಲೆ ನಡೆಸಿ, ಕಾಲಿನಿಂದ ಒದ್ದು ತುಳಿದಿದ್ದಾರೆ. ನಂತರ ಸಿಎಂ ಸಿದ್ದರಾಮಯ್ಯರವರ ಬ್ಯಾನರ್‌ನ ಬಳಿ ಕರೆದೊಯ್ದಿದ್ದಾರೆ. ಅಲ್ಲೂ ಹಲ್ಲೆ ನಡೆಸಿ, ಸಿದ್ದರಾಮಯ್ಯ ಇರುವ ಬ್ಯಾನರ್ ಕಾಲು ಇಡಿಸಿದ್ದಾರೆ. ಕ್ಷಮಾಪಣೆ ಕೇಳುವಂತೆ ಹಲ್ಲೆ ಮಾಡಿದ್ದಾರೆ.
ಉಡುಪಿ ಜಿಲ್ಲಾ ಪೊಲೀಸ್ ಮಹತ್ವದ ಸಭೆ ನಡೆಸಿದ ಗೃಹ ಸಚಿವ ಪರಮೇಶ್ವರ್
ಕಾಂಗ್ರೆಸ್ ಕಾರ್ಯಕರ್ತರು ನೈತಿಕ ಪೊಲೀಸ್ ಗಿರಿ ತೋರಿಸಿದ್ದಾರೆ. ಹಲ್ಲೆಗೊಳಗಾದ ವ್ಯಕ್ತಿಯ ವಿರುದ್ದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಬಹುದಿತ್ತು. ಆದ್ರೆ ಹಲ್ಲೆ ಮಾಡಿದ್ದು ಸರಿ ಇಲ್ಲ. ಸದ್ಯ ವಿಜಯನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದೇವೆ. ಎಫ್ ಐಆರ್ ಮಾಡಿ ಅರೆಸ್ಟ್ ಮಾಡ್ತಿವಿ ಅಂತ ಹೇಳಿದ್ದಾರೆ. ಅರೆಸ್ಟ್ ಮಾಡಿಲ್ಲ ಅಂದ್ರೆ ಸ್ಟೇಷನ್ ಮುಂದೆ ಧರಣಿ ಮಾಡ್ತಿವಿ ಎಂದು ಬಿಬಿಎಂಪಿ ಮಾಜಿ ಸದಸ್ಯ ಉಮೇಶ್ ಶೆಟ್ಟಿ ಹೇಳಿದ್ದಾರೆ.