ಸರ್ಕಾರ ಸರಿಯಾಗಿ ಕಾನೂನು ಅನುಷ್ಠಾನ ಮಾಡದಿರುವುದಕ್ಕೆ ಕನ್ನಡಪರ ಸಂಘಟನೆಗಳು ಹೋರಾಟದ ಹಾದಿ ಹಿಡಿಯಬೇಕಾಗುತ್ತದೆ. ನಾಮ ಫಲಕಗಳಲ್ಲಿ ಕಡ್ಡಾಯ ಕನ್ನಡ ಅನುಷ್ಠಾನ ಮಾಡದಿರುವುದರಿಂದ ಈ ಪರಿಸ್ಥಿತಿ ಬಂದಿದೆ. ಈ ವಿಚಾರದಲ್ಲಿ ಆಡಳಿತಗಾರರಿಗೆ ಸೂಕ್ಷ್ಮತೆ ಇರಬೇಕು. ನಾನು ಮುಖ್ಯಮಂತ್ರಿಯಾಗಿದ್ದಾಗ ಸುಮಾರು 2 ಸಾವಿರ ಕನ್ನಡ ಹೋರಾಟಗಾರರ ಪ್ರಕರಣಗಳನ್ನು ವಾಪಸ್ ಪಡೆದಿದ್ದೆವು: ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 

ಬೆಂಗಳೂರು(ಡಿ.30):  ಕರ್ನಾಟಕ ರಕ್ಷಣಾ ವೇದಿಕೆ(ಕರವೇ) ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಸೇರಿದಂತೆ ಕನ್ನಡ ಹೋರಾಟಗಾರರನ್ನು ಜೈಲಿಗೆ ಹಾಕಿದ್ದರಿಂದ ದುಃಖವಾಗಿದೆ. ಹೋರಾಟಗಾರ ರನ್ನು ನಾವು ಬೆಂಬಲಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟರು.

ಶುಕ್ರವಾರ ಕನ್ನಡ ಸಾಹಿತ್ಯ ಪರಿಷತ್ತು ಏರ್ಪಡಿಸಿದ್ದ ರಾಷ್ಟ್ರಕವಿ ಕುವೆಂಪು ಅವರ ನವೀಕೃತ ಸಭಾಂಗಣ ಹಾಗೂ ಕುವೆಂಪು ಜನ್ಮದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. 

ಹೋರಾಟಗಾರರ ಕೇಸ್ ವಾಪಸ್‌ಗೆ ಸರ್ಕಾರ ಹಿಂದೇಟು

ಸರ್ಕಾರ ಸರಿಯಾಗಿ ಕಾನೂನು ಅನುಷ್ಠಾನ ಮಾಡದಿರುವುದಕ್ಕೆ ಕನ್ನಡಪರ ಸಂಘಟನೆಗಳು ಹೋರಾಟದ ಹಾದಿ ಹಿಡಿಯಬೇಕಾಗುತ್ತದೆ. ನಾಮ ಫಲಕಗಳಲ್ಲಿ ಕಡ್ಡಾಯ ಕನ್ನಡ ಅನುಷ್ಠಾನ ಮಾಡದಿರುವುದರಿಂದ ಈ ಪರಿಸ್ಥಿತಿ ಬಂದಿದೆ. ಈ ವಿಚಾರದಲ್ಲಿ ಆಡಳಿತಗಾರರಿಗೆ ಸೂಕ್ಷ್ಮತೆ ಇರಬೇಕು. ನಾನು ಮುಖ್ಯಮಂತ್ರಿಯಾಗಿದ್ದಾಗ ಸುಮಾರು 2 ಸಾವಿರ ಕನ್ನಡ ಹೋರಾಟಗಾರರ ಪ್ರಕರಣಗಳನ್ನು ವಾಪಸ್ ಪಡೆದಿದ್ದೆವು ಎಂದು ತಿಳಿಸಿದ್ದಾರೆ.