Asianet Suvarna News Asianet Suvarna News

ಬರ ಪರಿಹಾರ ಕೊಡದೇ, ಆಧಾರ ಜೋಡಣೆ ಕುಂಟು ನೆಪ ಹೇಳಿದ ಸರ್ಕಾರಕ್ಕೆ ಛೀಮಾರಿ ಹಾಕಿದ ಮಾಜಿ ಸಿಎಂ!

ರಾಜ್ಯ ಸರ್ಕಾರ ರೈತರಿಗೆ ಬರ ಪರಿಹಾರ ನೀಡದೇ ಬ್ಯಾಂಕ್‌ ಖಾತೆಗಳಿಗೆ ಆಧಾರ್ ಜೋಡಣೆಯಾಗಿಲ್ಲ ಎಂದು ಕುಟುಂಬ ನೆಪ ಹೇಳುತ್ತಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಸರ್ಕಾರಕ್ಕೆ ಛೀಮಾರಿ ಹಾಕಿದ್ದಾರೆ.

Former CM Basavaraja Bommai has urged government to provide drought relief to Karnataka farmers sat
Author
First Published Jan 4, 2024, 9:02 PM IST

ಬೆಂಗಳೂರು (ಜ.04): ರಾಜ್ಯ ಸರ್ಕಾರ ಬರ ಪರಿಹಾರ ನೀಡಲು ಆಧಾರ ಜೋಡಣೆಯ ಕುಂಟು ನೆಪ ಹೇಳುತ್ತಿದೆ. ಈಗಾಗಲೇ ಫ್ರುಟ್ ಸಾಫ್ಟವೇರ್ ನಲ್ಲಿ 69 ಲಕ್ಷ ರೈತರ ಬ್ಯಾಂಕ್ ಖಾತೆಗಳಿಗೆ ಆಧಾರ್ ಜೋಡಣೆಯಾಗಿದ್ದು, ಮುಖ್ಯಮಂತ್ರಿಗಳು ಸರ್ಕಾರದ ಆರ್ಥಿಕ ದುಸ್ಥಿತಿ ಮರೆ ಮಾಚಲು ತಾಂತ್ರಿಕ ಕಾರಣ ನೆಪ ಹೇಳುತ್ತಿದ್ದಾರೆ. ಸರ್ಕಾರ ತಕ್ಷಣ ರೈತರ ಖಾತೆಗಳಿಗೆ 2000. ರೂ. ಹಣ ವರ್ಗಾವಣೆ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬಹುತೆಕ ತಾಲುಕುಗಳು ಬರ ಅಂತ ಘೊಷಣೆ ಆಗಿದೆ. ಮುಂಗಾರು, ಹಿಂಗಾರು ವಿಫಲವಾಗಿದೆ. ರಾಜ್ಯ ಸರ್ಕಾರ ಬರ ನಿರ್ವಹಣೆಗೆ ಯಾವುದೇ ಹಣ ಬಿಡುಗಡೆ ಮಾಡಿಲ್ಲ. ಯಾವುದೇ ಕಾಮಗಾರಿ ಆರಂಭಿಸಿಲ್ಲ. 6 ತಿಂಗಳು ಕಳೆದರೂ ಯಾವುದೇ ಕೆಲಸ ಮಾಡದ ಸಿದ್ದರಾಮಯ್ಯ ಸರ್ಕಾರ ಈಗ ಆಧಾರ ಜೋಡಣೆಯ ನೆಪ ಹೇಳಿ ರೈತರಿಗೆ ವಂಚನೆ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದರು.

ರಾಮ ಮಂದಿರ ಉದ್ಘಾಟನೆಗೆ ಸಿಎಂ ಸಿದ್ದರಾಮಯ್ಯಗೇ ಆಹ್ವಾನ ಸಿಗದಿದ್ದರೂ, ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಸಿಕ್ಕಿದ್ಹೇಗೆ?

ಈ ವರ್ಷ ಬರಗಾಲದ ಹಿನ್ನೆಲೆಯಲ್ಲಿ ಆಹಾರ ಉತ್ಪಾದನೆ ಕಡೆಮೆಯಾಗಲಿದೆ ಅಂತ ಕೃಷಿ ಇಲಾಖೆ ವರದಿ ಹೇಳುತ್ತಿದೆ. ಹೀಗಿದ್ದಾಗೂ ಯಾವುದೇ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುತ್ತಿಲ್ಲ. ಮಾತೆತ್ತಿದರೆ ಕೇಂದ್ರ ಸರ್ಕಾರದ ಕಡೆ ಬೆರಳು ತೋರಿಸುತ್ತಾರೆ. ಹಿಂದೆ ಎಲ್ಲ ಸರ್ಕಾರಗಳು ಕೇಂದ್ರದ ದಾರಿ ಕಾಯದೇ ಮೊದಲು ಜನರ ಸಂಕಷ್ಟಕ್ಕೆ ಸ್ಪಂದಿಸುವ‌ ಕೆಲಸ ಮಾಡುತ್ತಿದ್ದವು. ಬೆಳಗಾವಿ ಅಸೆಂಬ್ಲಿ ಅಧಿವೇಶನಕ್ಕೆ ಮುಂಚೆ  ರೈತರ ಬ್ಯಾಂಕ್ ಖಾತೆಗೆ ಪ್ರತಿ ಹೆಕ್ಟೇರ್ ಗೆ 2000 ರೂ. ಹಾಕುವುದಾಗಿ ಹೇಳಿದ್ದೀರಿ, ಈಗ ಆಧಾರ ಲಿಂಕ್ ಮಾಡುವುದಾಗಿ ಹೇಳುತ್ತಿದ್ದೀರಿ. ಈಗಾಗಲೇ ಫ್ರುಟ್ಸ್ ಸಾಪ್ಟ್ ವೇರ್ ನಲ್ಲಿ ಸುಮಾರು 69 ಲಕ್ಷ ರೈತರ ಆಧಾರ ಲಿಂಕ್ ಆಗಿದೆ. ಅದನ್ನು ಮರೆ ಮಾಚಿ ಸರ್ಕಾರದ ಆರ್ಥಿಕ ದುಸ್ಥಿತಿ ಮರೆ ಮಾಚಲು ತಾಂತ್ರಿಕ ಕಾರಣ ಹೇಳುತ್ತಿದ್ದೀರಿ. ನಿಮಗೆ ರೈತರ ಬಗ್ಗೆ ಕಾಳಜಿ ಇದ್ದರೆ‌ ತಕ್ಷಣ 2000 ರೂ. ರೈತರ ಖಾತೆಗೆ ಜಮಾ ಮಾಡಬೇಕು. ರೈತರು ತಿರುಗಿ ಬಿದ್ದರೆ ಯಾವ ಸರ್ಕಾರವೂ ನಡೆಯುವುದು ಕಷ್ಟವಾಗಲಿದೆ ಎಂದು ಎಚ್ಚರಿಕೆ ನೀಡಿದರು.

ಕಾಂಗ್ರೆಸ್ ನಿಂದ ರಾಜಕಾರಣ: 
ರಾಮ ಮಂದಿರ ನಿರ್ಮಾಣ ಮಾಡುವುದರಲ್ಲಿ ಹಿಂದೂ ಮುಸ್ಲೀಂಮರು ಸೇರಿದಂತೆ ಯಾವುದೇ ಸಾಮಾನ್ಯ ಜನರು ರಾಜಕಾರಣ ಮಾಡುತ್ತಿಲ್ಲ.‌ ತಲೆ‌ಕೆಡಿಸಿಕೊಂಡಿಲ್ಲ. ಕಾಂಗ್ರೆಸ್ ‌ನವರು ಮಾತ್ರ ರಾಜಕಾರಣ ಮಾಡುತ್ತಿದ್ದಾರೆ. ರಾಮಮಂದಿರ ಉದ್ಘಾಟನೆಗೆ ಕೇವಲ ಪ್ರಧಾನಿ ಮೋದಿ ಒಬ್ಬರೇ  ಹೊಗುತ್ತಿಲ್ಲ. ರಾಮ ಮಂದಿರಕ್ಕಾಗಿ ಯಾರು ಸೇವೆ, ಸಹಾಯ ಮಾಡಿದ್ದಾರೊ ಅವರನ್ನು ರಾಮ ಮಂದಿರ ಸಮಿತಿಯವರು ಕರೆದಿದ್ದಾರೆ. ಕಾಂಗ್ರೆಸ್ ನವರು ಅದರಲ್ಲಿ ರಾಜಕಾರಣ ಮಾಡುತ್ತಿದ್ದಾರೆ ಎಂದರು.

ಕಾಂಗ್ರೆಸ್‌ನಿಂದ ಉದ್ದುದ್ದ ಭಾರತ ಜೋಡೋ ಯಾತ್ರೆ ಆಯ್ತು, ಜ.14ರಿಂದ ಅಡ್ಡಡ್ಡ ಯಾತ್ರೆ ಆರಂಭ: ಇದು ಪಕ್ಕಾ ಬಸ್‌ ಯಾತ್ರೆ!

ಗುಜರಾತಿನ ಸೋಮನಾಥ ಮಂದಿರ ಉದ್ಘಾಟನೆಗೆ ಅಂತಿನ ಪ್ರಧಾನಿ ಜವಾಹರಲಾಲ್ ನೆಹರು ಭಾಗವಹಿಸದಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಸೋಮನಾಥ ಮಂದಿರ ಅತ್ಯಂತ ಅದ್ಬುತ ಮಂದಿರ ಆಗಿನ ಪ್ರಧಾನಿ ಜವಾಹರ ಲಾಲ್ ನೆಹರು ಹೋಗಿರಲಿಲ್ಲ. ಹಾಗಾಗಿ ಗೃಹ ಸಚಿವರಾಗಿದ್ದ ವಲ್ಲಭಬಾಯಿ ಪಟೇಲರು ಹೋಗಿದ್ದರು. ಈಗಿನ ಪ್ರಧಾನಿಗಳು ಆಸ್ತಿಕರಿದ್ದಾರೆ. ರಾಮನ ಭಕ್ತರಿದ್ದಾರೆ‌. ಹೀಗಾಗಿ ಅವರು ಉದ್ಘಾಟನೆ ಮಾಡುತ್ತಿದ್ದಾರೆ ಎಂದು ಹೇಳಿದರು.

Follow Us:
Download App:
  • android
  • ios