ಶರಾವತಿ ಕಣಿವೆ ಜಲವಿದ್ಯುತ್‌ ಯೋಜನೆಯ ಸಂತ್ರಸ್ತ ಕುಟುಂಬಗಳ ಪುನರ್ವಸತಿ ಉದ್ದೇಶಕ್ಕಾಗಿ ಅರಣ್ಯ ಭೂಮಿಯ ಡಿನೋಟಿಫಿಕೇಷನ್‌ ಸಂಬಂಧ ರಾಜ್ಯದಿಂದ ಕಳುಹಿಸುವ ಪ್ರಸ್ತಾವನೆಗೆ ಅನುಮತಿ ನೀಡುವಂತೆ ಕೇಂದ್ರ ಅರಣ್ಯ ಸಚಿವ ಭೂಪೇಂದ್ರ ಯಾದವ್‌ ಅವರನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ನೇತೃತ್ವದ ನಿಯೋಗ ಭೇಟಿ ಮಾಡಿ ಮನವಿ ಸಲ್ಲಿಸಿದೆ. 

ಬೆಂಗಳೂರು (ಅ.20): ಶರಾವತಿ ಕಣಿವೆ ಜಲವಿದ್ಯುತ್‌ ಯೋಜನೆಯ ಸಂತ್ರಸ್ತ ಕುಟುಂಬಗಳ ಪುನರ್ವಸತಿ ಉದ್ದೇಶಕ್ಕಾಗಿ ಅರಣ್ಯ ಭೂಮಿಯ ಡಿನೋಟಿಫಿಕೇಷನ್‌ ಸಂಬಂಧ ರಾಜ್ಯದಿಂದ ಕಳುಹಿಸುವ ಪ್ರಸ್ತಾವನೆಗೆ ಅನುಮತಿ ನೀಡುವಂತೆ ಕೇಂದ್ರ ಅರಣ್ಯ ಸಚಿವ ಭೂಪೇಂದ್ರ ಯಾದವ್‌ ಅವರನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ನೇತೃತ್ವದ ನಿಯೋಗ ಭೇಟಿ ಮಾಡಿ ಮನವಿ ಸಲ್ಲಿಸಿದೆ. 

ದೆಹಲಿಯಲ್ಲಿ ಬುಧವಾರ ಕೇಂದ್ರ ಅರಣ್ಯ ಸಚಿವರನ್ನು ಭೇಟಿ ಮಾಡಿದ ಯಡಿಯೂರಪ್ಪ ನಿಯೋಗವು, ಶರಾವತಿ ಕಣಿವೆ ಜಲವಿದ್ಯುತ್‌ ಯೋಜನೆಯ ಸಂತ್ರಸ್ತ ಕುಟುಂಬಗಳ ಪುನರ್ವಸತಿ ಉದ್ದೇಶಕ್ಕಾಗಿ ಅರಣ್ಯ ಭೂಮಿಯ ಡಿನೋಟಿಫಿಕೇಷನ್‌ ಸಂಬಂಧ ರಾಜ್ಯದಿಂದ ಕಳುಹಿಸುವ ಪ್ರಸ್ತಾವನೆಗೆ ಅನುಮತಿ ನೀಡುವಂತೆ ಹಾಗೂ ಕಸ್ತೂರಿ ರಂಗನ್‌ ವರದಿಯಿಂದ ಮಲೆನಾಡಿಗರಿಗೆ ಆಗುವ ತೊಂದರೆಗಳ ಬಗ್ಗೆ ಚರ್ಚೆ ನಡೆಸಿದೆ. ಈ ವೇಳೆ ಕೇಂದ್ರ ಸಚಿವರಿಗೆ ಯಡಿಯೂರಪ್ಪ ನೀಡಿರುವ ಮನವಿ ಪತ್ರದಲ್ಲಿ, 1958 ರಿಂದ 1969ರ ನಡುವೆ 27 ಸರ್ಕಾರಿ ಆದೇಶಗಳ ಮೂಲಕ 9,272 ಎಕರೆ ಜಮೀನನ್ನು ಡಿನೋಟಿಫಿಕೇಷನ್‌ ಮಾಡಲಾಗಿತ್ತು. 

ಯಡಿಯೂರಪ್ಪ ರಾಜ್ಯದ ಜನಪ್ರಿಯ ನಾಯಕ: ಅರುಣ್‌ ಸಿಂಗ್‌

ಕೇಂದ್ರ ಅರಣ್ಯ ಇಲಾಖೆಯ ಪೂರ್ವಾನುಮತಿ ಕಡ್ಡಾಯ ನಿಯಮಗಳ ಹಿನ್ನೆಲೆಯಲ್ಲಿ ಸಂತ್ರಸ್ತ ಕುಟುಂಬಗಳಿಗೆ ಈವರೆಗೆ ನ್ಯಾಯ ದೊರೆತಿಲ್ಲ. ಈ ಬಗ್ಗೆ ರಾಜ್ಯ ಸರ್ಕಾರ ಕಳುಹಿಸುವ ಡಿನೋಟಿಫಿಕೇಷನ್‌ ಪ್ರಸ್ತಾವನೆಗೆ ಕೇಂದ್ರದಿಂದ ಅನುಮತಿ ನೀಡಬೇಕು ಎಂದು ಮನವಿ ಮಾಡಿದ್ದಾರೆ. ಈ ವೇಳೆ ನಿಯೋಗದ ಮನವಿಗೆ ಸ್ಪಂದಿಸಿದ ಸಚಿವ ಭೂಪೇಂದ್ರ ಯಾದವ್‌, ಸಂತ್ರಸ್ತರ ಹಾಗೂ ಮಲೆನಾಡಿಗರ ಹಿತ ಕಾಯಲು ಸೂಕ್ತ ನಿರ್ಧಾರ ಕೈಗೊಳ್ಳುವುದಾಗಿ ಭರವಸೆ ನೀಡಿದರು ಎಂದು ತಿಳಿದುಬಂದಿದೆ. ನಿಯೋಗದಲ್ಲಿ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್‌ ಜೋಶಿ, ಗೃಹ ಸಚಿವ ಆರಗ ಜ್ಞಾನೇಂದ್ರ, ಸಂಸದ ಬಿ.ವೈ. ರಾಘವೇಂದ್ರ, ಸಾಗರ ಶಾಸಕ ಹರತಾಳು ಹಾಲಪ್ಪ ಹಾಜರಿದ್ದರು.

ಅಡಿಕೆ ಬೆಳೆಗೆ ಪರಿಹಾರಕ್ಕೆ ಮನವಿ: ಇದೇ ವೇಳೆ ಕೇಂದ್ರದ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ನರೇಂದ್ರ ಸಿಂಗ್‌ ತೋಮರ್‌ ಅವರನ್ನು ಭೇಟಿ ಮಾಡಿದ ಬಿ.ಎಸ್‌. ಯಡಿಯೂರಪ್ಪ ನೇತೃತ್ವದ ನಿಯೋಗವು, ಕರ್ನಾಟಕದಲ್ಲಿ ಅಡಿಕೆ ಸಂಶೋಧನೆ ಸಂಸ್ಥೆ ಸ್ಥಾಪಿಸಲು ಹಾಗೂ ಎಲೆ ಚುಕ್ಕೆ ರೋಗದಿಂದ ಹಾನಿಗೊಳಗಾದ ಅಡಿಕೆ ಬೆಳೆಗೆ ಪರಿಹಾರ ನೀಡುವಂತೆ ಮನವಿ ಮಾಡಿತು. 

ಪ್ರಧಾನಿ ಮೋದಿ ಕುರಿತ ಪ್ರಶ್ನೆಗಳಿಗೆ ಉತ್ತರ ನೀಡಿ: ಬಿಎಸ್‌ವೈಗೆ ಸಿದ್ದು ಸವಾಲು

ಕೇಂದ್ರ ಸಚಿವರೊಂದಿಗೆ ಚರ್ಚಿಸಿದ ಯಡಿಯೂರಪ್ಪ, ದೇಶದಲ್ಲೇ ಅತಿ ಹೆಚ್ಚು ಪ್ರಮಾಣದಲ್ಲಿ ಅಡಿಕೆ ಉತ್ಪಾದನೆ ಮಾಡುವ ರಾಜ್ಯವಾಗಿದ್ದು, ದೇಶದ ಒಟ್ಟು ಉತ್ಪಾದನೆಯ ಶೇ.80 ರಷ್ಟು ಅಡಿಕೆಯನ್ನು ಕರ್ನಾಟಕದಲ್ಲಿ ಉತ್ಪಾದಿಸಲಾಗುತ್ತದೆ. ಕರ್ನಾಟಕದಲ್ಲಿ 5.02 ಲಕ್ಷ ಹೆಕ್ಟೇರ್‌ನಲ್ಲಿ ಬೆಳೆಯಲಾಗುತ್ತಿದ್ದು, 50 ಲಕ್ಷ ಮಂದಿಯಷ್ಟುಜನ ಇದನ್ನು ಅವಲಂಬಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯಲ್ಲಿ 1.02 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆಯುತ್ತಿದ್ದು ಶೇ.60 ರಷ್ಟುಆರ್ಥಿಕತೆ ಅಡಿಕೆ ಅವಲಂಬಿಸಿದೆ. ಇತ್ತೀಚೆಗೆ ಸುರಿದ ತೀವ್ರ ಮಳೆಯಿಂದಾಗಿ ಎಲೆ ಚುಕ್ಕೆ ರೋಗ ಉಂಟಾಗಿ ತೀವ್ರ ಬೆಳೆ ಹಾನಿಯಾಗಿದೆ. ಈ ಬಗ್ಗೆ ಸೂಕ್ತ ಪರಿಹಾರ ಕಲ್ಪಿಸುವಂತೆ ಮನವಿ ಸಲ್ಲಿಸಿದರು.