ಐಕಿಯಾ ಮಾಲ್‌ನಲ್ಲಿ ನಡೆದುಕೊಂಡು ಹೋಗುತ್ತಿರುವಾಗ ಮಾಜಿ ಸಿಎಂ ಪತ್ನಿ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಬೆಂಗಳೂರು (ಆ.31): ಮಾಜಿ ಸಿಎಂ ಡಿವಿ ಸದಾನಂದ ಗೌಡ ಅವರ ಪತ್ನಿ ಮಾಲ್‌ನಲ್ಲಿ ಕುಸಿದು ಬಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಶನಿವಾರ ಸಂಜೆ ನಗರದ ಪ್ರತಿಷ್ಠಿತ ಮಾಲ್‌ಗೆ ಹೋದಾಗ ಈ ಘಟನೆ ಸಂಭವಿಸಿದೆ. ಇಂದು ಸಂಜೆ ನಾಗಸಂದ್ರ ಮೆಟ್ರೋ ಸ್ಟೇಷನ್‌ನ ಹಿಂಭಾಗದಲ್ಲಿಯೇ ಇರುವ ಐಕಿಯಾ ಮಾಲ್‌ಗೆ ಅವರು ಭೇಟಿ ನೀಡಿದ್ದರು. ಈ ವೇಳೆ ಮಾಲ್‌ನಲ್ಲಿ ಕುಸಿದು ಬಿದ್ದು ಪೆಟ್ಟು ಮಾಡಿಕೊಂಡಿದ್ದಾರೆ. ಕುಸಿದು ಬಿದ್ದ ಹಿನ್ನೆಲೆಯಲ್ಲಿ ಡಾಟಿ ಅವರನ್ನ ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಸದ್ಯ ಪ್ರಕ್ರಿಯ ಆಸ್ಪತ್ರೆಯಲ್ಲಿ ಡಾಟಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. 8ನೇ ಮೈಲಿಯಲ್ಲಿರುವ ಪ್ರಕ್ರಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಡಾಟಿಯವರ ಆರೋಗ್ಯದಲ್ಲಿ ಚೇತರಿಕೆ ಆಗಿದೆ ಎಂದು ಡಿ ವಿ ಸದಾನಂದಗೌಡ ಸ್ಪಷ್ಟನೆ ನೀಡಿದ್ದಾರೆ.