Asianet Suvarna News Asianet Suvarna News

ಖಾಸಗಿ ಶಾಲಾ ಶಿಕ್ಷಕರಿಗೆ ನೆರವು ನೀಡಿ: ಸರ್ಕಾರಕ್ಕೆ ಎಚ್‌.ಡಿ.ಕುಮಾರಸ್ವಾಮಿ ಆಗ್ರಹ

ರಾಜ್ಯಾದ್ಯಂತ 20 ಸಾವಿರಕ್ಕೂ ಹೆಚ್ಚು ಖಾಸಗಿ ಶಾಲೆಗಳ ಶಿಕ್ಷಕರಿಗೆ ಕಳೆದ ಏಪ್ರಿಲ್‌ನಿಂದ ವೇತನ ಸಿಗದೆ ಜೀವನ ಸಾಗಿಸಲು ಪರದಾಡುತ್ತಿದ್ದಾರೆ| ಅತಿಥಿ ಉಪನ್ಯಾಸಕರ ನೋವು ಇದಕ್ಕಿಂತ ಭಿನ್ನವಾಗಿಲ್ಲ| ಸರ್ಕಾರ ಈ ಬಗ್ಗೆ ಖಾಸಗಿ ಶಾಲಾ ಆಡಳಿತ ಮಂಡಳಿಯೊಂದಿಗೆ ಚರ್ಚಿಸಿ ಅತಂತ್ರರಾಗಿರುವ ಶಿಕ್ಷಕರ ನೆರವಿಗೆ ತಕ್ಷಣ ಧಾವಿಸಬೇಕು ಎಂದ ಹೆಚ್.ಡಿ.ಕುಮಾರಸ್ವಾಮಿ| 

Former CM H D Kumaraswamy Provide assistance to private teachers due to Coronavirus
Author
Bengaluru, First Published Aug 9, 2020, 3:38 PM IST

ಬೆಂಗಳೂರು(09): ಕೊರೋನಾ ಸಂಕಷ್ಟ ಕಾಲದಲ್ಲಿ ವೇತನವಿಲ್ಲದೆ ಕಂಗೆಟ್ಟಿರುವ ರಾಜ್ಯದ ಸುಮಾರು ಎರಡೂವರೆ ಲಕ್ಷ ಖಾಸಗಿ ಶಾಲಾ ಶಿಕ್ಷಕರು ಮತ್ತು ಅತಿಥಿ ಉಪನ್ಯಾಸಕರ ನೆರವಿಗೆ ಸರ್ಕಾರ ತಕ್ಷಣವೇ ಮುಂದಾಗಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ. 

ರಾಜ್ಯಾದ್ಯಂತ 20 ಸಾವಿರಕ್ಕೂ ಹೆಚ್ಚು ಖಾಸಗಿ ಶಾಲೆಗಳ ಶಿಕ್ಷಕರಿಗೆ ಕಳೆದ ಏಪ್ರಿಲ್‌ನಿಂದ ವೇತನ ಸಿಗದೆ ಜೀವನ ಸಾಗಿಸಲು ಪರದಾಡುತ್ತಿದ್ದಾರೆ. ಅತಿಥಿ ಉಪನ್ಯಾಸಕರ ನೋವು ಇದಕ್ಕಿಂತ ಭಿನ್ನವಾಗಿಲ್ಲ. ಸರ್ಕಾರ ಈ ಬಗ್ಗೆ ಖಾಸಗಿ ಶಾಲಾ ಆಡಳಿತ ಮಂಡಳಿಯೊಂದಿಗೆ ಚರ್ಚಿಸಿ ಅತಂತ್ರರಾಗಿರುವ ಶಿಕ್ಷಕರ ನೆರವಿಗೆ ತಕ್ಷಣ ಧಾವಿಸಬೇಕು ಎಂದು ಟ್ವಿಟ್ಟರ್‌ನಲ್ಲಿ ಆಗ್ರಹಿಸಿದ್ದಾರೆ. 

ಸರ್ಕಾರದ ಮನೆಹಾಳು ನಿರ್ಧಾರ ಎಂದ ಕುಮಾರಸ್ವಾಮಿಯಿಂದ ಎಚ್ಚರಿಕೆ ಸಂದೇಶ

ವಿದ್ಯಾರ್ಥಿಗಳು ಶುಲ್ಕ ಕಟ್ಟುತ್ತಿಲ್ಲ ಎಂಬ ಕಾರಣ ಹೇಳಿ ಶಿಕ್ಷಕರನ್ನು ಕೆಲಸದಿಂದ ತೆಗೆಯಲು ಆಡಳಿತ ಮಂಡಳಿಗಳು ಮುಂದಾಗುತ್ತಿರುವುದನ್ನು ತಪ್ಪಿಸಲು ಸರ್ಕಾರ ತಡಮಾಡದೆ ತಕ್ಷಣ ಮಧ್ಯೆ ಪ್ರವೇಶಿಸಬೇಕು ಎಂದಿದ್ದಾರೆ.

Follow Us:
Download App:
  • android
  • ios