Asianet Suvarna News Asianet Suvarna News

ಕನ್ನಡ ಏನು ತಬ್ಬಲಿ ಮಕ್ಕಳ ಭಾಷೆಯೇ?: ಎಚ್‌ಡಿಕೆ ಕಿಡಿ

ಕೇಂದ್ರದಿಂದ ಕನ್ನಡಕ್ಕೆ ಆಗುತ್ತಿರುವ ಅನುದಾನದ ಅನ್ಯಾಯದ ವಿರುದ್ಧ ನಾನು ಅನೇಕ ಬಾರಿ ದನಿ ಎತ್ತಿದ್ದೇನೆ. ಬಿಜೆಪಿ-ಕಾಂಗ್ರೆಸ್‌ ಪಕ್ಷಗಳ ಆಡಳಿತಕ್ಕೆ ಅದು ಕೇಳಲೇ ಇಲ್ಲ. ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಬಂದ ಮೇಲೆ ಸಂಸ್ಕೃತ, ಹಿಂದಿ ತುಷ್ಟೀಕರಣದಿಂದ ಕನ್ನಡಕ್ಕೆ ಅದೆಷ್ಟು ವಂಚನೆ ಆಗಿದೆ ಎನ್ನುವುದಕ್ಕೆ ಅನುದಾನದ ತಾರತಮ್ಯವೇ ಸಾಕ್ಷಿ: ಕುಮಾರಸ್ವಾಮಿ

Former CM HD Kumaraswamy Talks Over Kannada grg
Author
First Published Jan 8, 2023, 3:00 AM IST

ಬೆಂಗಳೂರು(ಜ.08):  ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ಸಿಕ್ಕಿ 15 ವರ್ಷಗಳೇ ಕಳೆದಿದ್ದು, 13 ವರ್ಷಗಳಲ್ಲಿ ಕನ್ನಡಕ್ಕೆ ಸಿಕ್ಕಿದ ಅನುದಾನ ಕೇವಲ ಮೂರು ಕೋಟಿ ರು.! ತಮಿಳಿಗೆ ಸಿಕ್ಕಿದ್ದು 43 ಕೋಟಿ ರು. ಆದರೆ, ಸಂಸ್ಕೃತಕ್ಕೆ ಇವರು ಕೊಟ್ಟಿದ್ದು ಬರೋಬ್ಬರಿ 643 ಕೋಟಿ!! ಕನ್ನಡದ ಕಣ್ಣಿಗೆ ಸುಣ್ಣ, ಬೇರೆ ಭಾಷೆಗಳಿಗೆ ಬೆಣ್ಣೆ. ಕನ್ನಡ ತಬ್ಬಲಿ ಮಕ್ಕಳ ಭಾಷೆಯೇ? ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಈ ಸಂಬಂಧ ಟ್ವೀಟ್‌ ಮಾಡಿರುವ ಅವರು, ಕೇಂದ್ರದಿಂದ ಕನ್ನಡಕ್ಕೆ ಆಗುತ್ತಿರುವ ಅನುದಾನದ ಅನ್ಯಾಯದ ವಿರುದ್ಧ ನಾನು ಅನೇಕ ಬಾರಿ ದನಿ ಎತ್ತಿದ್ದೇನೆ. ಬಿಜೆಪಿ-ಕಾಂಗ್ರೆಸ್‌ ಪಕ್ಷಗಳ ಆಡಳಿತಕ್ಕೆ ಅದು ಕೇಳಲೇ ಇಲ್ಲ. ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಬಂದ ಮೇಲೆ ಸಂಸ್ಕೃತ, ಹಿಂದಿ ತುಷ್ಟೀಕರಣದಿಂದ ಕನ್ನಡಕ್ಕೆ ಅದೆಷ್ಟು ವಂಚನೆ ಆಗಿದೆ ಎನ್ನುವುದಕ್ಕೆ ಅನುದಾನದ ತಾರತಮ್ಯವೇ ಸಾಕ್ಷಿ ಎಂದು ವಾಗ್ದಾಳಿ ನಡೆಸಿದ್ದಾರೆ.

ನಾಯಿ, ನರಿ ಅನ್ನೋರಿಗೆ ಜನರ ಚಿಂತೆಯಿಲ್ಲ: ಎಚ್‌.ಡಿ.ಕುಮಾರಸ್ವಾಮಿ

ಈಗ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾದ ಡಾ.ದೊಡ್ಡರಂಗೇಗೌಡ ಅವರೇ ಸಮ್ಮೇಳನದ ತಮ್ಮ ಭಾಷಣದಲ್ಲಿ ಅನುದಾನದ ಅನ್ಯಾಯವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಎದುರೇ ಬಿಜೆಪಿ ಸರ್ಕಾರದ ಮುಖಕ್ಕೆ ರಾಚುವಂತೆ ಹೇಳಿದ್ದಾರೆ. ಈ ವಿಷಯ ಪ್ರಸ್ತಾಪ ಮಾಡಿದ ಅವರನ್ನು ಮನಸಾರೆ ಅಭಿನಂದಿಸುತ್ತೇನೆ ಎಂದಿದ್ದಾರೆ.

ಹಿಂದಿ ಹೇರಿಕೆ ಮೂಲಕ ಸದಾ ಕನ್ನಡದ ಮೇಲೆ ಪ್ರಹಾರ ನಡೆಸುತ್ತಲೇ ಇರುವ ಬಿಜೆಪಿ ಸರ್ಕಾರ ಅವಕಾಶ ಸಿಕ್ಕಾಗಲೆಲ್ಲಾ ಕನ್ನಡದ ಬೇರುಗಳಿಗೆ ಕೊಡಲಿ ಪೆಟ್ಟು ಕೊಡುತ್ತಿದೆ. ನೆಲ,ಜಲ, ಭಾಷೆ ವಿಷಯದಲ್ಲಿ ಕರ್ನಾಟಕಕ್ಕೆ ಆ ಪಕ್ಷವು ಅನ್ಯಾಯದ ಸರಣಿಯನ್ನೇ ಮುಂದುವರಿಸಿದೆ. ಬೆಳಗಾವಿ ವಿಷಯದಲ್ಲಿ ಬಿಜೆಪಿ ಸರ್ಕಾರ ವರ್ತಿಸುತ್ತಿರುವ ರೀತಿ ಕಳವಳಕಾರಿಯಾಗಿದೆ ಎಂದು ಟೀಕಿಸಿದ್ದಾರೆ.

ಒಕ್ಕೂಟ ಭಾಷೆಗಳ ನಡುವೆ ಅನುದಾನದಲ್ಲಿ ಮಾತ್ರವಲ್ಲ, ಯಾವ ವಿಷಯದಲ್ಲಿಯೂ ತಾರತಮ್ಯ ಎಸಗಬಾರದು. ಈವ್ಯವಸ್ಥೆಯಲ್ಲಿ ಆಡಳಿತ ನಡೆಸುವವರಿಗೆ ರಾಜಧರ್ಮ ಪಾಲನೆ ಅತ್ಯಗತ್ಯ. ದೇಶಕ್ಕೆ ಅತಿಹೆಚ್ಚು ತೆರಿಗೆ ತೆರುತ್ತಿರುವ ಕರ್ನಾಟಕದ ವಿಷಯದಲ್ಲಿ ಇಂತಹ ರಾಜಧರ್ಮ ಪಾಲನೆ ಆಗುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Follow Us:
Download App:
  • android
  • ios