ಕೆಂಪೇಗೌಡ ಉತ್ಸವ: ದುಬೈಗೆ ತೆರಳಿದ ಕುಮಾರಸ್ವಾಮಿ
ಭಾನುವಾರ ಯುಎಇ ಒಕ್ಕಲಿಗರ ಸಂಘದ ವತಿಯಿಂದ ನಾಡಪ್ರಭು ಕೆಂಪೇಗೌಡ ಉತ್ಸವ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಎಚ್.ಡಿ.ಕುಮಾರಸ್ವಾಮಿ ಅವರನ್ನು ಆಹ್ವಾನಿಸಲಾಗಿದೆ. ಈ ಆಹ್ವಾನದ ಮೇರೆಗೆ ದುಬೈಗೆ ಪ್ರವಾಸ ಕೈಗೊಂಡಿದ್ದಾರೆ.

ಬೆಂಗಳೂರು(ಅ.28): ನಾಡಪ್ರಭು ಕೆಂಪೇಗೌಡ ಉತ್ಸವದಲ್ಲಿ ಭಾಗಿಯಾಗಲು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇಂದು(ಶನಿವಾರ) ದುಬೈಗೆ ತೆರಳಿದ್ದಾರೆ.
ಭಾನುವಾರ ಯುಎಇ ಒಕ್ಕಲಿಗರ ಸಂಘದ ವತಿಯಿಂದ ನಾಡಪ್ರಭು ಕೆಂಪೇಗೌಡ ಉತ್ಸವ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಎಚ್.ಡಿ.ಕುಮಾರಸ್ವಾಮಿ ಅವರನ್ನು ಆಹ್ವಾನಿಸಲಾಗಿದೆ. ಈ ಆಹ್ವಾನದ ಮೇರೆಗೆ ದುಬೈಗೆ ಪ್ರವಾಸ ಕೈಗೊಂಡಿದ್ದಾರೆ. ಕಾರ್ಯಕ್ರಮ ಮುಗಿದ ಬಳಿಕ ಕೆಲವು ದಿನ ದುಬೈ ಪ್ರವಾಸ ಮುಂದುವರಿಸಲಿದ್ದಾರೆ ಎಂದು ತಿಳಿದುಬಂದಿದೆ.
ಸಿದ್ದರಾಮಯ್ಯ ಸಂಜೆ 6 ಗಂಟೆ ಮೇಲೆ ಎಲ್ ಹೋಗ್ತಾರೆ? ಹೆಚ್‌ಡಿಕೆ ತಿರುಗೇಟು!
ಕೆಂಪೇಗೌಡ ಉತ್ಸವದಲ್ಲಿ ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಕುಮಾರಸ್ವಾಮಿ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ.