18+ ಲಸಿಕೆ ವಿತರಣೆಯಲ್ಲಿ ಕನ್ನಡಿಗರಿಗೆ ಅನ್ಯಾಯ: ಕೇಂದ್ರದ ವಿರುದ್ಧ ಎಚ್‌ಡಿಕೆ ಕೆಂಡಾಮಂಡಲ

ಗುಜರಾತಿನಲ್ಲಿ 1.61 ಲಕ್ಷ, ರಾಜ್ಯದಲ್ಲಿ 3475 ಮಂದಿಗೆ ಲಸಿಕೆ| ಕೇಂದ್ರದ ಈ ಪಕ್ಷಪಾತ ವಿರುದ್ಧ ರಾಜ್ಯ ದನಿ ಎತ್ತುತ್ತಿಲ್ಲವೇಕೆ?| ಈ ತಾರತಮ್ಯ, ವೈಫಲ್ಯಗಳನ್ನು ರಾಜ್ಯದ ಜನರೂ ಪ್ರಶ್ನೆ ಮಾಡಬೇಕಾಗಿದೆ. ಇಲ್ಲವಾದಲ್ಲಿ ಅಪಾಯದ ದಿನಗಳು ಮುಂದಿವೆ ಎಂದ ಎಚ್‌ಡಿಕೆ| 

Former CM HD Kumarswamy Slams Central Government grg

ಬೆಂಗಳೂರು(ಮೇ.07): ಲಸಿಕೆ ಹಾಕುವ ಅಭಿಯಾನದಲ್ಲಿ ಕರ್ನಾಟಕ ಮತ್ತು ಕನ್ನಡಿಗರಿಗೆ ತಾರತಮ್ಯವಾಗುತ್ತಿರುವುದು, ಗುಜರಾತ್‌ ಮೇಲೆ ಅತಿಯಾದ ಪ್ರೀತಿ ತೋರುತ್ತಿರುವುದು ಕೇಂದ್ರ ಆರೋಗ್ಯ ಇಲಾಖೆ ನೀಡಿರುವ ಅಂಕಿ-ಅಂಶಗಳಿಂದಲೇ ಬಹಿರಂಗವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಗುರುವಾರ ಈ ಕುರಿತು ಟ್ವಿಟ್‌ ಮಾಡಿರುವ ಅವರು, 18ರಿಂದ 44 ವಯೋಮಾನದವರಿಗೆ ಲಸಿಕೆ ಹಾಕುವ ಅಭಿಯಾನ ಮೇ 1ರಿಂದ ಆರಂಭವಾಗಿದೆ. ದೇಶದಲ್ಲಿ ಮಂಗಳವಾರದ ಹೊತ್ತಿಗೆ ಆರು ಲಕ್ಷಕ್ಕೂ ಹೆಚ್ಚು ಮಂದಿಗೆ ಲಸಿಕೆ ನೀಡಲಾಗಿದೆ. ಈ ಪೈಕಿ ಗುಜರಾತ್‌ನಲ್ಲಿ 1.61 ಲಕ್ಷ ಜನರಿಗೆ ಲಸಿಕೆ ಹಾಕಿದ್ದರೆ, ಕರ್ನಾಟಕದಲ್ಲಿ ಕೇವಲ 3475 ಜನರಿಗೆ ಮಾತ್ರ ಲಸಿಕೆ ನೀಡಲಾಗಿದೆ. ಇದು ಕೇಂದ್ರದ ತಾರತಮ್ಯವೋ, ರಾಜ್ಯದ ವೈಫಲ್ಯವೋ ಎಂದು ಪ್ರಶ್ನಿಸಿದ್ದಾರೆ.

ಈ ಸಂಕಷ್ಟದ ಪರಿಸ್ಥಿತಿಯಲ್ಲಿಯೂ ಕೇಂದ್ರದಿಂದ ಆಗುತ್ತಿರುವ ಈ ತಾರತಮ್ಯ ಮನುಷ್ಯತ್ವ ವಿರೋಧಿ. ಕನ್ನಡಿಗರಿಗಾಗಿ ಸೊಲ್ಲೆತ್ತದ ರಾಜ್ಯ ಸರ್ಕಾರದ ಪರಮ ವೈಫಲ್ಯ. ರಾಜ್ಯಕ್ಕೆ ಕೇಂದ್ರ ಸರ್ಕಾರ ಲಸಿಕೆ ನೀಡುತ್ತಿಲ್ಲವೇ? ರಾಜ್ಯಕ್ಕೆ ಏನು ಬೇಕೋ ಅದನ್ನು ಕೇಳಿ ಪಡೆಯಲು ರಾಜ್ಯಸರ್ಕಾರಕ್ಕೆ ಶಕ್ತಿ ಇಲ್ಲವೇ? ಎಂದು ಪ್ರಶ್ನಿಸಿದ್ದಾರೆ.

"

ಮೋದಿಗೆ ಕುಮಾರಸ್ವಾಮಿ ಪತ್ರ: ರಾಜ್ಯದ ಪರಿಸ್ಥಿತಿ ಬಿಚ್ಚಿಟ್ಟ ಎಚ್‌ಡಿಕೆ

ಇತರ ರಾಜ್ಯಗಳಿಗೆ ಹೆಚ್ಚಿನ ಆದ್ಯತೆ ನೀಡುತ್ತಿರುವುದನ್ನು ಪ್ರಶ್ನಿಸಲು ನಮ್ಮವರಿಗೆ ಬಾಯಿಲ್ಲವೇ? ಇದೆಲ್ಲಾ ಗಮನಿಸುತ್ತಿದ್ದರೆ, ಕನ್ನಡಿಗರನ್ನು ಈ ಸರ್ಕಾರಗಳು ಹಣೆಬರಹಕ್ಕೆ ಬಿಟ್ಟಂತೆ ಕಾಣುತ್ತಿದೆ. ರಾಜ್ಯದ ಬಿಜೆಪಿ ಸರ್ಕಾರ, ಸಂಸದರು ಮೊದಲು ಈ ತಾರತಮ್ಯದ ವಿರುದ್ಧ ಹೋರಾಡಬೇಕು. ಜನರ ಜೀವ ಉಳಿಸಲು ಬೇಕಾಗಿರುವುದನ್ನು ಕೇಂದ್ರದಿಂದ ಕೇಳಿ ಪಡೆದುಕೊಳ್ಳಬೇಕಾದದ್ದು ಈ ಹೊತ್ತಿನ ಅಗತ್ಯ. ಲಸಿಕೆ ಅಭಿಯಾನದಲ್ಲಿ ಆಗುತ್ತಿರುವ ಈ ತಾರತಮ್ಯ, ವೈಫಲ್ಯಗಳನ್ನು ರಾಜ್ಯದ ಜನರೂ ಪ್ರಶ್ನೆ ಮಾಡಬೇಕಾಗಿದೆ. ಇಲ್ಲವಾದಲ್ಲಿ ಅಪಾಯದ ದಿನಗಳು ಮುಂದಿವೆ ಎಂದು ಅವರು ಎಚ್ಚರಿಸಿದ್ದಾರೆ.

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ನ್ಯೂಸ್‌ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

Latest Videos
Follow Us:
Download App:
  • android
  • ios