ಲೋಕಸಭೆಗೆ ಸಿದ್ದರಾಮಯ್ಯ?: ಅಂದ್ರು ಇಲ್ಲ ಕಣ್ರಯ್ಯ!
ಮಾಜಿ ಸಿಎಂ ಸಿದ್ದರಾಮಯ್ಯ ಲೋಕಸಭೆಗೆ ಸ್ಪರ್ಧೆ| ಕೇವಲ ಊಹಾಪೋಹ ಎಂದು ಅಲ್ಲಗಳೆದ ಸಿದ್ದರಾಮಯ್ಯ| ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಖಚಿತಪಡಿಸಿದ ಸಿದ್ದರಾಮಯ್ಯ| ಗಣೇಶ್ ಅವರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದ ಮಾಜಿ ಸಿಎಂ| ಪ್ರಿಯಾಂಕ ಖರ್ಗೆ ಹೇಳಿಕೆ ಬಗ್ಗೆ ತಮಗೇನು ಗೊತ್ತಿಲ್ಲ ಎಂದ ಸಿದ್ದರಾಮಯ್ಯ
ಇಳಕಲ್(ಜ.25): ಮಾಜಿ ಸಿಎಂ ಸಿದ್ದರಾಮಯ್ಯ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿದ್ದು, ಖುದ್ದು ಸಿದ್ದರಾಮಯ್ಯ ಈ ಊಹಾಪೋಹಗಳನ್ನು ತಳ್ಳಿಹಾಕಿದ್ದಾರೆ.
ಇಳಕಲ್‌ನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ತಾವು ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತಿಲ್ಲ ಎಂದು ಸ್ಪಷ್ಟಪಡಿಸಿದರು. ತಾವು ಲೋಕಸಭೆ ಚುನಾವಣೆಗೆ ಸ್ಪರ್ಧಿಸುವುದಾಗಿ ಕೇಳಿ ಬರುತ್ತಿರುವ ಮಾತುಗಳು ಕೇವಲ ಊಹಾಪೋಹ ಎಂದು ಹೇಳಿದರು.
ಇದೇ ವೇಳೆ ಶಾಸಕ ಆನಂದ್ ಸಿಂಗ್ ಮತ್ತು ಗಣೇಶ್ ನಡುವಿನ ಗಲಾಟೆ ಕುರಿತು ಪ್ರತಿಕ್ರಿಯೆ ನೀಡಿದ ಮಾಜಿ ಸಿಎಂ, ಆನಂದ್ ನೀಡುರುವ ದೂರಿನ ಆಧಾರದ ಮೇಲೆ ಪೊಲೀಸರು ತನಿಖೆ ನಡೆಸುತ್ತಾರೆ. ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದರು.
ಇದೇ ವೇಳೆ ಮಾಧ್ಯಮಗಳು ಟೆರರಿಸ್ಟ್ ಇದ್ದ ಹಾಗೆ ಎಂದು ಹೇಳಿದ್ದ ಪ್ರಿಯಾಂಕ ಖರ್ಗೆ ಹೇಳಿಕೆಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ ಸಿದ್ದರಾಮಯ್ಯ, ಈ ಕುರಿತು ಅವರನ್ನೇ ಕೇಳಿ ಎಂದು ಜಾರಿಕೊಂಡರು.