* ಆಸ್ಪತ್ರೆಯಿಂದ ಪ್ರತಿಪಕ್ಷ ನಾಯಕ‌ ಸಿದ್ದರಾಮಯ್ಯ ಬಿಡುಗಡೆ* ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಣಿಪಾಲ್‌ ಆಸ್ಪತ್ರೆಗೆ ದಾಖಲಾಗಿದ್ದ ಸಿದ್ದರಾಮಯ್ಯ* ಸಂಪೂರ್ಣ ಗುಣಮುಖರಾಗಿದ ಸಿದ್ದು

ಬೆಂಗಳೂರು(ಜೂ.07): ಜ್ವರದಿಂದ ಬಳಲುತ್ತಿದ್ದ ಮಾಜಿ ಮುಖ್ಯಮಂತ್ರಿ ಹಾಗೂ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸಂಪೂರ್ಣವಾಗಿ ಗುಣಮುಖರಾದ ಹಿನ್ನೆಲೆಯಲ್ಲಿ ಇಂದು(ಸೋಮವಾರ) ನಗರದ ಮಣಿಪಾಲ್‌ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿದ್ದಾರೆ. 

ಜೂ. 01 ರಂದು ಜ್ವರ ಕಾಣಿಸಿಕೊಂಡಿದ್ದರಿಂದ ಸಿದ್ದರಾಮಯ್ಯ ಅವರು ಮಣಿಪಾಲ್‌ ಆಸ್ಪತ್ರೆಗೆ ದಾಖಲಾಗಿದ್ದರು. ಆಪ್ತ ವೈದ್ಯ ಡಾ.ರವಿ ಕುಮಾರ್ ಸಲಹೆ ಮೇರೆಗೆ ಸಿದ್ದರಾಮಯ್ಯ ಅಸ್ಪತ್ರೆಗೆ ದಾಖಲಾಗಿ ಚಿಕತ್ಸೆ ಪಡೆದುಕೊಂಡಿದ್ದರು.

ಸಿದ್ದರಾಮಯ್ಯಗೆ ಅನಾರೋಗ್ಯ, ಆಸ್ಪತ್ರೆಗೆ ದಾಖಲು

ಇದೀಗ ಸಿದ್ದರಾಮಯ್ಯ ಅವರು ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ. ಹೀಗಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಮಾಡಲಾಗಿದೆ. ಆಸ್ಪತ್ರೆಯಿಂದ ಹೊರಟ ಸಿದ್ದರಾಮಯ್ಯ ಅವರನ್ನು ಮಣಿಪಾಲ್ ಆಸ್ಪತ್ರೆ ಸಿಬ್ಬಂದಿಗಳು ಮತ್ತು ವೈದ್ಯರು ಬೀಳ್ಕೊಟ್ಟಿದ್ದಾರೆ.