Asianet Suvarna News Asianet Suvarna News

ಬೆಂಗಳೂರು: ಮಾಜಿ ಸಿಎಂ ಎಸ್.ಎಂ.ಕೃಷ್ಣ ಆಸ್ಪತ್ರೆಗೆ ದಾಖಲು

ತೀವ್ರ ಜ್ವರದಿಂದ ಬಳಲುತ್ತಿರುವ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಆಸ್ಪತ್ರೆಗೆ ದಾಖಲು

Former CM SM Krishna Admitted to Hospital in Bengaluru grg
Author
First Published Sep 25, 2022, 8:36 AM IST

ಬೆಂಗಳೂರು(ಸೆ.25): ತೀವ್ರ ಜ್ವರದಿಂದ ಬಳಲುತ್ತಿರುವ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರನ್ನ ನಗರದ ವಿಮಾನ ನಿಲ್ದಾಣ ರಸ್ತೆಯ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಎಸ್. ಎಂ. ಕೃಷ್ಣ ಮೊದಲು ವಿಠ್ಠಲ್ ಮಲ್ಯ‌ ರಸ್ತೆಯಲ್ಲಿರುವ ವೈದೇಹಿ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಬಳಿಕ ಮಣಿಪಾಲ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ ಅಂತ ತಿಳಿದು ಬಂದಿದೆ. ಆಸ್ಪತ್ರೆಯಲ್ಲಿ ಡಾ.ಸತ್ಯನಾರಾಯಣ್ ನೇತೃತ್ವದಲ್ಲಿ ಎಸ್‌ಎಂಕೆಗೆ ಚಿಕಿತ್ಸೆ ಕೊಡಿಸಲಾಗುತ್ತಿದೆ. ಶ್ವಾಸ್ವಕೋಶದಲ್ಲಿ ಸೋಂಕು ಕಂಡುಬಂದಿದೆ.

ಎಸ್‌ಎಂಕೆಗೆ ಉಸಿರಾಟದ ಸಮಸ್ಯೆ ಹಿನ್ನೆಲೆಯಲ್ಲಿ ಮಣಿಪಾಲ್ ದಾಖಲು ಮಾಡಲಾಗಿದೆ. ಎಸ್‌ಎಂಕೆ ಆರೋಗ್ಯದ ಬಗ್ಗೆ ಸಚಿವ ಡಾ.ಕೆ.ಸುಧಾಕರ್ ಅವರು ನಿಗಾ ವಹಿಸಿದ್ದಾರೆ ಅಂತ ಮಣಿಪಾಲ್ ಆಸ್ಪತ್ರೆಯಿಂದ ಮಾಹಿತಿ ಲಭ್ಯವಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

ಮೋದಿ ಇನ್ನಷ್ಟು ವರ್ಷ ಪ್ರಧಾನಿಯಾಗಿರಬೇಕು, ಇವರಿಂದ ದೇಶದ ಸಮಸ್ಯೆಗೆ ಪರಿಹಾರ ಸಾಧ್ಯ: ಎಸ್‌.ಎಂ.ಕೃಷ್ಣ

 

Follow Us:
Download App:
  • android
  • ios