Asianet Suvarna News Asianet Suvarna News

ಮಾಜಿ ಮುಖ್ಯ ನ್ಯಾಯಮೂರ್ತಿ, ರಾಜ್ಯಸಭಾ ಸದಸ್ಯ, ಗವರ್ನರ್ ರಾಮ ಜೋಯಿಸ್ ಇನ್ನಿಲ್ಲ!

|ಪಂಜಾಬ್- ಹರ್ಯಾಣ ಹೈಕೋರ್ಟ್ ನ ಮಾಜಿ ಮುಖ್ಯ ನ್ಯಾಯಮೂರ್ತಿ| ಜಾರ್ಖಂಡ್ ಮತ್ತು ಬಿಹಾರ ರಾಜ್ಯದ ಮಾಜಿ ರಾಜ್ಯಪಾಲ, ಮಾಜಿ ರಾಜ್ಯ ಸಭಾ ಸದಸ್ಯ| ಮಾಜಿ ರಾಜ್ಯ ಸಭಾ ಸದಸ್ಯ ರಾಮ ಜೋಯಿಸ್ ನಿಧನ

Former Governor RS Member And Chief Justice of Haryana Punjab HC Rama Jois dies at 89 pod
Author
Bangalore, First Published Feb 16, 2021, 9:34 AM IST

ಬೆಂಗಳೂರು(ಫೆ.16): ಪಂಜಾಬ್- ಹರ್ಯಾಣ ಹೈಕೋರ್ಟ್ ನ ಮಾಜಿ ಮುಖ್ಯ ನ್ಯಾಯಮೂರ್ತಿ, ಜಾರ್ಖಂಡ್ ಮತ್ತು ಬಿಹಾರ ರಾಜ್ಯದ ಮಾಜಿ ರಾಜ್ಯಪಾಲ ಹಾಗೂ ಮಾಜಿ ರಾಜ್ಯ ಸಭಾ ಸದಸ್ಯ ರಾಮ ಜೋಯಿಸ್ ಮಂಗಳವಾರ ಬೆಳಗ್ಗೆ ನಿಧನರಾಗಿದ್ದಾರೆ. 

ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮಂಗಳವಾರ ಬೆಳಗ್ಗೆ 7.30ಕ್ಕೆ ನಿಧನರಾಗಿದ್ದಾರೆ. ಶಿಕ್ಷಣ ಸಚಿವ ಸುರೇದಶ್ ಕುಮಾರ್ ಈ ಬಗ್ಗೆ ಪೋಸ್ಟ್‌ ಮಾಡಿದ್ದು, ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

ರಾಮ ಜೋಯಿಸ್ ಅವರು 1932ರ ಜುಲೈ 27ರಂದು ಶಿವಮೊಗ್ಗದ ತೀರ್ಥಹಳ್ಳಿ ತಾಲೂಕಿನ ಮಂಡಗದ್ದೆ ಅರಗ ಗ್ರಾಮದಲ್ಲಿ ಜನಿಸಿದ್ದರು. 89 ವರ್ಷದ ಪ್ರಾಯದ ರಾಮ ಜೋಯಿಸ್ ಕೆಲ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು.

1992ರಲ್ಲಿ ಹರ್ಯಾಣ ಮತ್ತು ಪಂಜಾಬ್ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಯಾಗಿ ರಾಮ ಜೋಯಿಸ್ ಅವರು ಕಾರ್ಯ ನಿರ್ವಹಿಸಿದ್ದರು. 2002ರಲ್ಲಿ ಜಾರ್ಖಂಡ್ ರಾಜ್ಯದ ರಾಜ್ಯಪಾಲರಾಗಿ, 2003ರಲ್ಲಿ ಬಿಹಾರ ರಾಜ್ಯದ ರಾಜ್ಯಪಾಲರಾಗಿ ರಾಮ ಜೋಯಿಸ್ ಅವರು ಸೇವೆ ಸಲ್ಲಿಸಿದ್ದಾರೆ.

ರೈಲ್ವೆ ಯೋಜನೆಗೆ ರಾಜ್ಯಕ್ಕೆ ಕೇಂದ್ರದಿಂದ ಭರ್ಜರಿ ಕೊಡುಗೆ

1975-77ರ ತುರ್ತು ಪರಿಸ್ಥಿತಿಯ ಸಮಯದಲ್ಲಿ ಅಟಲ್ ಬಿಹಾರಿ ವಾಜಪೇಯಿ, ಲಾಲ್ ಕೃಷ್ಣ ಅಡ್ವಾಣಿ ಅವರೊಂದಿಗೆ ಬೆಂಗಳೂರು ಕೇಂದ್ರ ಕಾರಾಗೃಹದಲ್ಲಿ ಸೆರೆಮನೆ ವಾಸ ಅನುಭವಿಸಿದ್ದರು. ಬಿಜೆಪಿ ಪಕ್ಷದತ್ತ ಒಲವು ತೋರಿಸಿದ್ದ ಅವರು,  ರಾಜ್ಯಸಭೆಗೆ ಕರ್ನಾಟಕದಿಂದ ಆಯ್ಕೆಯಾಗಿದ್ದರು.

ಬಿಜೆಪಿ ಮತ್ತು ಸಂಘಪರಿವಾರದ ಚಿಂತಕರ ಚಾವಡಿಯ ಪ್ರಭಾವಿ ನಾಯಕರಾಗಿದ್ದ ಅವರು, ಸಾಮಾಜಿಕ ಹೋರಾಟದ ಮುಖಂಡರಿಗೆ ಕಾನೂನು ಸಲಹೆ ನೀಡುವ ಮೂಲಕ ದೊಡ್ಡ ಸಂಖ್ಯೆಯ ಅಭಿಮಾನಿಗಳನ್ನು ಹೊಂದಿದ್ದರು. ಗ್ರಾಮೀಣ ಭಾಗದ ಯುವ ವಕೀಲರು ಸೇರಿದಂತೆ ರಾಜ್ಯದಲ್ಲಿ ದೊಡ್ಡ ಸಂಖ್ಯೆಯ  ಯುವ ವಕೀಲರಿಗೆ ಮಾರ್ಗದರ್ಶನ ಮಾಡಿದ ಕೀರ್ತಿ ಅವರದ್ದು. 

Follow Us:
Download App:
  • android
  • ios