ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಅಪರಾಧಿಗೆ ಶಿಕ್ಷೆಯಾದರೂ, ಅಪರಾಧ ಮುಚ್ಚಿಟ್ಟವರಿಗೆ ಶಿಕ್ಷೆಯಾಗದಿರುವುದನ್ನು ಪ್ರಶ್ನಿಸಿ ನಟ ಪ್ರಕಾಶ್ ರೈ ಎಕ್ಸ್ ನಲ್ಲಿ ಬರೆದುಕೊಂಡಿದ್ದಾರೆ.
ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ನಟ ಪ್ರಕಾಶ್ ರೈ ಪ್ರತಿಕ್ರಿಯಿಸಿದ್ದಾರೆ. ಈ ಕುರಿತು ಎಕ್ಸ್ ನಲ್ಲಿ ಬರೆದುಕೊಂಡಿರುವ ಪ್ರಕಾಶ್ ರೈ, ಪ್ರಜ್ವಲಿಸಲು ಸಹಕರಿಸಿದವರಿಗೆ ಶಿಕ್ಷೆಯಿಲ್ಲವೇ ಎಂದು ಪ್ರಶ್ನೆ ಮಾಡಿದ್ದಾರೆ.
ಪ್ರಕಾಶ್ ರೈ ಪ್ರತಿಕ್ರಿಯೆ ಏನು?
“ಪ್ರಜ್ವಲಿಸಲು ಸಹಕರಿಸಿದವರಿಗೆ ಶಿಕ್ಷೆಯಿಲ್ಲವೇ?” ಯುವರ್ ಆನರ್, ಪ್ರಜ್ವಲ್ ಮಾಡಿದ ಅಮಾನುಷ ಅಪರಾಧಗಳಿಗೇನೋ ತಕ್ಕ ಶಿಕ್ಷೆ ಆಗಿದೆ. ಆದರೆ ಆ ಅಪರಾಧಗಳನ್ನು ಗೊತ್ತಿದ್ದೂ ಮುಚ್ಚಿಟ್ಟ ಸಂತ್ರಸ್ತರನ್ನು ಹೆದರಿಸಿದ ಸಾಕ್ಷಿ ನಾಶ ಮಾಡಲು ಸಹಕರಿಸಿದ. ಹಾಲಿ, ಮಾಜಿಗಳಿಗೆ.. ಪ್ರಭಾವಿಗಳಿಗೆ ಶಿಕ್ಷೆಯಿಲ್ಲವೇ ಎಂದು ಪ್ರಕಾಶ್ ರೈ ಕೇಳಿದ್ದಾರೆ.
ಅತ್ಯಾ1ಚಾರ ಅಪರಾಧಕ್ಕೆ ಜೀವಾವಧಿ ಶಿಕ್ಷೆ
ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ಪ್ರಕಟಗೊಂಡಿದೆ. ಐಪಿಸಿ ಸೆಕ್ಷನ್ 376(2)(k) ಅತ್ಯಾ1ಚಾರ ಅಪರಾಧಕ್ಕೆ ಜೀವಾವಧಿ ಶಿಕ್ಷೆಯಾಗಿದೆ. ಈ ಮೂಲಕ ಜೀವನ ಪರ್ಯಂತ ಜೈಲಿನಲ್ಲೇ ಇರುವ ಶಿಕ್ಷೆ ಪ್ರಕಟವಾಗಿದೆ. 376(2)(n) ಸೆಕ್ಷನ್ ಗೆ ಜೀವಾವಧಿ. 354 ಗೆ 3 ವರ್ಷ, 354(b) 3 ವರ್ಷ ಕಠಿಣ ಕಾರಗೃಹ ಶಿಕ್ಷೆ, ಒಟ್ಟು 11.5 ಲಕ್ಷ ದಂಡ ಜೊತೆಗೆ ಒಟ್ಟು ವಿಧಿಸಲಾದ ದಂಡದ ಮೊತ್ತದಲ್ಲಿ ₹11,25,000 ಅನ್ನು ಪೀಡಿತೆಗೆ ಪರಿಹಾರವಾಗಿ ನೀಡಲು ಕೋರ್ಟ್ ಆದೇಶ ಹೊರಬಿದ್ದಿದೆ. ಈ ಮೂಲಕ ಪ್ರಜ್ವಲ್ ರೇವಣ್ಣಗೆ ಬಹುದೊಡ್ಡ ಶಿಕ್ಷೆಯಾಗಿದೆ.
