Former Karnataka Minister Hartalu Halappa's Mother Manjamma Passes Away at 94 ಕರ್ನಾಟಕದ ಮಾಜಿ ಸಚಿವ ಮತ್ತು ಬಿಜೆಪಿ ಹಿರಿಯ ನಾಯಕ ಹರತಾಳು ಹಾಲಪ್ಪ ಅವರ ತಾಯಿ ಮಂಜಮ್ಮ (94) ಅವರು ಬೆಂಗಳೂರಿನಲ್ಲಿ ವಯೋಸಹಜ ಕಾರಣಗಳಿಂದ ನಿಧನರಾಗಿದ್ದಾರೆ.
ಬೆಂಗಳೂರು (ಸೆ.20): ಕರ್ನಾಟಕದ ಮಾಜಿ ಸಚಿವ ಮತ್ತು ಬಿಜೆಪಿ ಪಕ್ಷದ ಹಿರಿಯ ರಾಜಕಾರಣಿ ಹರತಾಳು ಹಾಲಪ್ಪ ಅವರ ತಾಯಿ ಮಂಜಮ್ಮ (94) ಅವರು ಇಂದು ಬೆಂಗಳೂರಿನ ತಮ್ಮ ನಿವಾಸದಲ್ಲಿ ವಯೋಸಹಜ ಕಾರಣಗಳಿಂದ ನಿಧನರಾದರು.
ಮಂಜಮ್ಮ ಅವರು 12 ಮಕ್ಕಳನ್ನು ಹೊಂದಿದ್ದರು, ಅದರಲ್ಲಿ 9 ಗಂಡು ಮಕ್ಕಳು ಮತ್ತು 3 ಹೆಣ್ಣು ಮಕ್ಕಳಿದ್ದರು. ತಮ್ಮ ತಾಯಿಯ ನಿಧನದಿಂದ ಹರತಾಳು ಹಾಲಪ್ಪ ಅವರು ತೀವ್ರ ದುಃಖಿತರಾಗಿದ್ದಾರೆ. ಮಂಜಮ್ಮ ಅವರ ಅಂತಿಮ ಸಂಸ್ಕಾರವು ಸಾಗರದಲ್ಲಿ ನಾಳೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ರಾಜಕೀಯ ಗಣ್ಯರು ಮತ್ತು ಸ್ಥಳೀಯ ನಾಯಕರು ಸಂತಾಪ ಸೂಚಿಸಿದ್ದಾರೆ.
