ವಾಲ್ಮೀಕಿ ನಿಗಮ ಹಗರಣ: ಮಾಜಿ ಸಚಿವ ನಾಗೇಂದ್ರ ಈಗ ಖೈದಿ ನಂ. 7140..!

ನ್ಯಾಯಾಂಗ ವಶಕ್ಕೆ ನೀಡಿದ ಹಿನ್ನೆಲೆಯಲ್ಲಿ ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಲಾಯಿತು. ಈ ವೇಳೆ ವಿಚಾರಣಾಧೀನ ಕೈದಿ ಸಂಖ್ಯೆ 7140 ಅನ್ನು ಅವರಿಗೆ ನೀಡಲಾಗಿದೆ. ಜೈಲಿನ ಕ್ವಾರಂಟೈನ್ ಕೊಠಡಿಯಲ್ಲಿ ಇರಲು ವ್ಯವಸ್ಥೆ ಮಾಡಲಾಗಿದೆ.

Former minister b nagendra is now prisoner no. 7140 in parappana agrahara jail in bengaluru grg

ಬೆಂಗಳೂರು(ಜು.23):  ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ.ನಾಗೇಂದ್ರ ಅವರನ್ನು ಜನಪ್ರತಿ ನಿಧಿಗಳ ವಿಶೇಷ ನ್ಯಾಯಾಲಯ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ನ್ಯಾಯಾಂಗ ವಶಕ್ಕೆ ನೀಡಿದ ಹಿನ್ನೆಲೆಯಲ್ಲಿ ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಲಾಯಿತು. ಈ ವೇಳೆ ವಿಚಾರಣಾಧೀನ ಕೈದಿ ಸಂಖ್ಯೆ 7140 ಅನ್ನು ಅವರಿಗೆ ನೀಡಲಾಗಿದೆ. ಜೈಲಿನ ಕ್ವಾರಂಟೈನ್ ಕೊಠಡಿಯಲ್ಲಿ ಇರಲು ವ್ಯವಸ್ಥೆ ಮಾಡಲಾಗಿದೆ.

ವಾಲ್ಮೀಕಿ ನಿಗಮ ಹಗರಣ: ವಿಪಕ್ಷ ಗದ್ದಲ, ಉತ್ತರ ಓದಲಾಗದೆ ಮಂಡಿಸಿದ ಸಿಎಂ

ಸೋಮವಾರ ತಮ್ಮ ವಶದಲ್ಲಿರುವ ಅವಧಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಇಡಿ ಅಧಿಕಾರಿ ಗಳು ನಾಗೇಂದ್ರರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಆ.3ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತು. ಇಡಿ ಅಧಿಕಾರಿಗಳು ಮತ್ತೆ ತಮ್ಮ ವಶಕ್ಕೆ ಕೇಳದ ಹಿನ್ನೆಲೆಯಲ್ಲಿ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಯಿತು. 

ಪ್ರಕರಣಕ್ಕೆ ಸಂಬಂಧಿಸಿ ದಂತೆ ಸುಧೀರ್ಘ ವಿಚಾರಣೆ ನಡೆಸಿದ ಇಡಿ ಅಧಿ ಕಾರಿಗಳು ಜು.12ರಂದು ನಾಗೇಂದ್ರ ಅವರನ್ನು ಬಂಧಿಸಿದ್ದರು. ಬಳಿಕ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಾಗೇಂದ್ರ ಅವರನ್ನು ಜು.18ರ ವರೆಗೆ ಇಡಿ ವಶಕ್ಕೆ ನೀಡಲಾಗಿತ್ತು. ನಂತರ ಇಡಿ ಅಧಿಕಾರಿಗಳ ಮನವಿಯ ಮೇರೆಗೆ ಜು.22ರ ವರೆಗೆ ಇಡಿ ವಶದ ಅವಧಿಯನ್ನು ವಿಸ್ತರಿಸಲಾಯಿತು. ಇದೀಗ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ.

ಈ ನಡುವೆ, ನ್ಯಾಯಾಂಗ ಬಂಧ ನದಲ್ಲಿರುವ ಪ್ರಕರಣದ ಮತ್ತೊಬ್ಬ ಆರೋಪಿ ಹೈದರಾಬಾದ್‌ನ ಸತ್ಯನಾರಾಯಣ ವರ್ಮ ಅವರನ್ನು ಬಾಡಿ ವಾರಂಟ್ ಮುಖಾಂತರ ವಶಕ್ಕೆ ನೀಡುವಂತೆ ಇಡಿ ನ್ಯಾಯಾಲಯಕ್ಕೆ ಮನವಿ ಮಾಡಿತು. ಈ ಮನವಿಯನ್ನು ಪುರಸ್ಕರಿಸಿದ ನ್ಯಾಯಾಲಯ ಒಂದು ದಿನದ ಮಟ್ಟಿಗೆ ಇಡಿ ವಶಕ್ಕೆ ನೀಡಲಾಯಿತು. ಮಂಗಳವಾರ ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಸೂಚನೆ ನೀಡಲಾಯಿತು.

Latest Videos
Follow Us:
Download App:
  • android
  • ios