ರೇಣುಕಾಸ್ವಾಮಿ ಮನೆಗೆ ಮಾಜಿ ಸಚಿವ ಬಿ.ಸಿ.ಪಾಟೀಲ್ ಭೇಟಿ, ಸಾಂತ್ವನ

ರೇಣುಕಾಸ್ವಾಮಿ ಅಶ್ಲೀಲ ಸಂದೇಶ ಹಾಗೂ ಫೋಟೋ ಕಳುಹಿಸುತ್ತಿದ್ದರೆ ಸಂಬಂಧಪಟ್ಟ ಪೊಲೀಸರಿಗೆ ದೂರು ನೀಡಬಹುದಿತ್ತು. ಆದರೆ ದೊಡ್ಡ ಶಿಕ್ಷೆ ಕೊಡುವಷ್ಟು ಅಪರಾಧ ಅದಾಗಿರಲಿಲ್ಲ ಎಂದು ಮಾಜಿ ಸಚಿವ ಹಾಗೂ ಬಿಜೆಪಿ ಮುಖಂಡ ಬಿ.ಸಿ.ಪಾಟೀಲ್ ಹೇಳಿದರು.

Former minister BC Patil visits Renukaswamy house at chitradurga gvd

ಚಿತ್ರದುರ್ಗ (ಜು.06): ರೇಣುಕಾಸ್ವಾಮಿ ಅಶ್ಲೀಲ ಸಂದೇಶ ಹಾಗೂ ಫೋಟೋ ಕಳುಹಿಸುತ್ತಿದ್ದರೆ ಸಂಬಂಧಪಟ್ಟ ಪೊಲೀಸರಿಗೆ ದೂರು ನೀಡಬಹುದಿತ್ತು. ಆದರೆ ದೊಡ್ಡ ಶಿಕ್ಷೆ ಕೊಡುವಷ್ಟು ಅಪರಾಧ ಅದಾಗಿರಲಿಲ್ಲ ಎಂದು ಮಾಜಿ ಸಚಿವ ಹಾಗೂ ಬಿಜೆಪಿ ಮುಖಂಡ ಬಿ.ಸಿ.ಪಾಟೀಲ್ ಹೇಳಿದರು. ನಟ ದರ್ಶನ್ ಮತ್ತು ಗ್ಯಾಂಗ್‍ನಿಂದ ಹತ್ಯೆಗೀಡಾದ ರೇಣುಕಸ್ವಾಮಿ ನಿವಾಸಕ್ಕೆ ಶುಕ್ರವಾರ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದ ಅವರು ಸಣ್ಣ ವಿಚಾರಕ್ಕೆ ಕೊಲೆಯಂಥ ಕೃತ್ಯ ನಡೆಯಬಾರದಿತ್ತು ಎಂದರು.

ಈ ವಯಸ್ಸಿನಲ್ಲಿ ನಿಮಗೆ ಈ ಸ್ಥಿತಿ ನಿರ್ಮಾಣ ಆಗಬಾರದಿತ್ತು ಎಂದು ರೇಣುಕಾಸ್ವಾಮಿ ಕುಟುಂಬಕ್ಕೆ ಸಾಂತ್ವನ ಹೇಳಿದ ಅವರು, 50 ಸಾವಿರ ರು. ವೈಯಕ್ತಿಕ ನೆರವು ನೀಡಿದರು. ಜತೆಗೆ ಅಧಿವೇಶನದಲ್ಲಿ ಈ ವಿಚಾರವಾಗಿ ಧ್ವನಿ ಎತ್ತುವ ಭರವಸೆ ನೀಡಿದರು. ಇದೇ ವೇಳೆ ಸುದ್ದಿಗಾರೊಂದಿಗೆ ಮಾತನಾಡಿ ರೇಣುಕಾಸ್ವಾಮಿ ಹತ್ಯೆ ಪ್ರಕರಣ ನಿಷ್ಪಕ್ಷಪಾತ ತನಿಖೆ ಆಗಬೇಕು. 

ದರ್ಶನ್‌ ಭೇಟಿಗೆ ಕುಟುಂಬ ಹೋಗ್ತಿದೆ, ನಾವು ಎಲ್ಲಿಗೆ ಹೋಗ್ಬೇಕು: ರೇಣುಕಾಸ್ವಾಮಿ ತಾಯಿ

ಆರೋಪಿಗಳಿಗೆ ಶಿಕ್ಷೆ ಆಗಲಿ. ಪ್ರಕರಣದಲ್ಲಿ ಯಾರೇ ಭಾಗಿಯಾಗಿ ತಪ್ಪಿತಸ್ಥರೆಂದು ಸಾಬೀತಾದಲ್ಲಿ ಕಾನೂನಿನಿಂದ ತಪ್ಪಿಸಿಕೊಳ್ಳಬಾರದು. ಮೃತನ ಪತ್ನಿಗೆ ಸರ್ಕಾರ ಉದ್ಯೋಗ ಕೊಡಬೇಕು ಎಂದರು. ದರ್ಶನ್ ಒಳ್ಳೆಯ ನಟ. ರೇಣುಕಾಸ್ವಾಮಿ ಹತ್ಯೆ ಬಗ್ಗೆ ದರ್ಶನ್ ಮೇಲೆ ಆಪಾದನೆ ಇದೆ. ಪ್ರಕರಣದ ತನಿಖೆ ಬಳಿಕ ಸತ್ಯಾಸತ್ಯತೆ ಗೊತ್ತಾಗಲಿದೆ. ನಟ ದರ್ಶನ್ ಬ್ಯಾನ್ ಮಾಡುವ ವಿಚಾರ ಫಿಲ್ಮ್ ಚೇಂಬರ್ ಗೆ ಬಿಟ್ಟಿದ್ದೆಂದು ಬಿ.ಸಿ.ಪಾಟೀಲ್ ಹೇಳಿದರು.

ನಾನು ಮಗನ ಭೇಟಿ ಮಾಡಲು ಸಾಧ್ಯವೇ?: ನಟ ದರ್ಶನ್ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆಯಾಗಿದ್ದು ಆರೋಪಿಗಳಿಗೆ ತಕ್ಕ ಶಿಕ್ಷೆ ಆಗಲಿ ಎಂದು ರೇಣುಕಸ್ವಾಮಿ ತಾಯಿ ರತ್ನಪ್ರಭ ಇದೇ ವೇಳೆ ಆಗ್ರಹಿಸಿದರು. ಶುಕ್ರವಾರ ಸುದ್ದಿಗಾರರ ಜತೆಗೆ ಮಾತನಾಡಿ ನಟ ದರ್ಶನ್ ಭೇಟಿಗೆ ಅವರ ತಾಯಿ, ಕುಟುಂಬಸ್ಥರು ಹೋಗುತ್ತಿದ್ದಾರೆ. ಆದರೆ ನಾವು ನಮ್ಮ ಮಗನ ಭೇಟಿ ಮಾಡಲು ಸಾಧ್ಯವೇ? ಎಂದು ನೋವು ತೋಡಿಕೊಂಡರು. ವೃದ್ಧರಾದ ನಮಗೆ ನಮ್ಮ ಮಗ ಮಣ್ಣು ಹಾಕಬೇಕಿತ್ತು. ಆದರೆ ನಮ್ಮ ಕಣ್ಣ ಮುಂದೆಯೇ ಮಗ ಹೋದರೆ ಶೋಕ ಯಾರ ಬಳಿ ಹಂಚಿಕೊಳ್ಳಲಿ. 

ಅಂಥ ತಂದೆಯ ಮುಖವನ್ನು ಆ ಮಗು ನೋಡದಿರುವುದೇ ಒಳ್ಳೆಯದು: ದರ್ಶನ್‌ ಸರ್ ನನ್ನ Inspiration ಎಂದ ತನಿಷಾ ಕುಪ್ಪಂಡ!

ನಾವು ಸಾಯೋತನಕ ಮನಗನ್ನು ನೋಡಲಾರೆವು ಎಂದರು. ರೇಣುಕಾಸ್ವಾಮಿ ಅಶ್ಲೀಲ ಮೆಸೇಜ್ ಕಳಿಸಿದ್ದ ಎಂದು ಕೆಲ ಸೆಲೆಬ್ರಿಟಿಗಳ ಆರೋಪಿಸಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು ಅಶ್ಲೀಲ ಮೆಸೇಜ್ ವಿಷಯದಲ್ಲಿ ಮೊದಲೇ ಹೇಳಿದ್ದರೆ ಶಿಕ್ಷೆ ಕೊಡಿಸಬಹುದಿತ್ತು. ಈಗ ಏಕೆ ಏಳುತ್ತಿದ್ದಾರೆ ಎಂಬುದು ಅರ್ಥವಾಗುತ್ತಿಲ್ಲವೆಂದರು. ಇದೇ ವೇಳೆ ನನ್ನ ಸೊಸೆಗೆ ಸರ್ಕಾರ ಸರ್ಕಾರಿ ನೌಕರಿ ಕೊಡಲಿ ಎಂದು ರೇಣುಕಾಸ್ವಾಮಿ ತಂದೆ ಮನವಿ ಮಾಡಿದರು.

Latest Videos
Follow Us:
Download App:
  • android
  • ios