ಜೆಡಿಎಸ್‌ ಪಕ್ಷವು ಎಂದೆಂದಿಗೂ ರೈತರ ಪರ. ಇದರಲ್ಲಿ ಯಾವುದೇ ಗೊಂದಲ ಬೇಡ| ಜ್ಯಾತ್ಯತೀತ ಜನತಾದಳ ಪಕ್ಷವು ಸದಾ ರೈತರೊಂದಿಗೆ ಮತ್ತು ರೈತರ ಅಭಿವೃದ್ಧಿಗಾಗಿ ದುಡಿಯುವ ಪಕ್ಷ| ಎಚ್‌.ಡಿ.ದೇವೇಗೌಡ ಮತ್ತು ಎಚ್‌.ಡಿ.ಕುಮಾರಸ್ವಾಮಿ ಸದಾ ರೈತರ ಪರವಾಗಿ ಹೋರಾಟ ಮಾಡುತ್ತಾ ಬಂದಿದ್ದಾರೆ: ಶರವಣ| 

ಬೆಂಗಳೂರು(ಡಿ.11): ಭೂ ಸುಧಾರಣಾ ಕಾಯ್ದೆಯಲ್ಲಿ ರೈತರಿಗೆ ಮತ್ತು ಕೃಷಿಭೂಮಿಗೆ ಅನ್ಯಾಯವಾಗುವಂತೆ ಇದ್ದಂಥ ಅಂಶಗಳನ್ನು ತೆಗೆದ ನಂತರವೇ ಜೆಡಿಎಸ್‌ ಪಕ್ಷವು ಕಾಯ್ದೆಗೆ ಬೆಂಬಲ ಸೂಚಿಸಿದೆ ಎಂದು ವಿಧಾನಪರಿಷತ್‌ ಮಾಜಿ ಸದಸ್ಯ ಟಿ.ಎ.ಶರವಣ ತಿಳಿಸಿದ್ದಾರೆ.

ಜೆಡಿಎಸ್‌ ಪಕ್ಷವು ಎಂದೆಂದಿಗೂ ರೈತರ ಪರ. ಇದರಲ್ಲಿ ಯಾವುದೇ ಗೊಂದಲ ಬೇಡ. ಜ್ಯಾತ್ಯತೀತ ಜನತಾದಳ ಪಕ್ಷವು ಸದಾ ರೈತರೊಂದಿಗೆ ಮತ್ತು ರೈತರ ಅಭಿವೃದ್ಧಿಗಾಗಿ ದುಡಿಯುವ ಪಕ್ಷವಾಗಿದೆ ಎಂದು ಹೇಳಿದ್ದಾರೆ. 

ರಾಜ್ಯದಲ್ಲಿ ಉಪಚುನಾವಣೆ ಶಾಂತಿಯುತವಾಗಿ ಮುಕ್ತಾಯ: ಕಾರ್ಯಕರ್ತರಿಗೆ ಧನ್ಯವಾದ ತಿಳಿಸಿದ ಶರವಣ

ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಮತ್ತು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಸದಾ ರೈತರ ಪರವಾಗಿ ಹೋರಾಟವನ್ನು ಮಾಡುತ್ತಾ ಬಂದಿದ್ದಾರೆ. ವಾಸ್ತವಾಂಶವನ್ನು ತಿರುಚಿ ರೈತರ ದಿಕ್ಕು ತಪ್ಪಿಸುವ ಪ್ರಯತ್ನವನ್ನು ಯಾರೂ ಸಹ ಮಾಡಬಾರದು ಎಂದು ಪ್ರಕಟಣೆಯಲ್ಲಿ ಹೇಳಿದ್ದಾರೆ.