ದೇವೇಗೌಡ ಗುಣಮುಖ: ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಸಾಧ್ಯತೆ
ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ದೇವೇಗೌಡ ಅವರು ತೀವ್ರ ಓಡಾಟ ನಡೆಸಿದ್ದರಿಂದ ದೈಹಿಕವಾಗಿ ತೀವ್ರ ಆಯಾಸಗೊಂಡಿದ್ದರು. ಅಲ್ಲದೆ, ಸ್ವಲ್ಪ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅನಾರೋಗ್ಯಕ್ಕೊಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಬೆಂಗಳೂರು(ಫೆ.18): ಅನಾರೋಗ್ಯ ಹಿನ್ನೆಲೆಯಲ್ಲಿ ನಗರದ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೊಳಗಾಗಿರುವ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಗುಣಮುಖರಾಗಿದ್ದಾರೆ. ಅವರಿಗೆ ಅಗತ್ಯ ಚಿಕಿತ್ಸೆಯನ್ನು ಮುಂದುವರಿಸಲಾಗಿದ್ದು, ಆಗಾಗ್ಗೆ ತಪಾಸಣೆ ನಡೆಸಿ ಆರೋಗ್ಯದ ಮೇಲೆ ವೈದ್ಯರು ನಿಗಾವಹಿಸಿದ್ದಾರೆ.
ಶನಿವಾರ ದಿನಪತ್ರಿಕೆಗಳತ್ತ ಕಣ್ಣು ಹಾಯಿಸಿದ ದೇವೇಗೌಡ ಅವರು ಬಜೆಟ್ ಸುದ್ದಿಗಳನ್ನು ಓದಿದರು. ಎಲ್ಲರೊಂದಿಗೆ ಆರಾಮಾಗಿ ಮಾತನಾಡುತ್ತಿದ್ದಾರೆ. ಮನೆಗೆ ಕಳುಹಿಸಿದರೆ ಅಭಿಮಾನಿಗಳು, ಕಾರ್ಯಕರ್ತರು ಮುಗಿಬೀಳಲಿದ್ದಾರೆ ಎಂಬ ಕಾರಣಕ್ಕಾಗಿ ಆಸ್ಪತ್ರೆಯಲ್ಲಿಯೇ ವೈದ್ಯರು ಅವರ ಆರೋಗ್ಯದ ಮೇಲೆ ನಿಗಾವಹಿಸಿದ್ದಾರೆ.
ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಮಣಿಪಾಲ್ ಆಸ್ಪತ್ರೆಗೆ ದಾಖಲು!
ಇಂದು(ಭಾನುವಾರ) ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ದೇವೇಗೌಡ ಅವರು ತೀವ್ರ ಓಡಾಟ ನಡೆಸಿದ್ದರಿಂದ ದೈಹಿಕವಾಗಿ ತೀವ್ರ ಆಯಾಸಗೊಂಡಿದ್ದರು. ಅಲ್ಲದೆ, ಸ್ವಲ್ಪ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅನಾರೋಗ್ಯಕ್ಕೊಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.