Coronavirus: ಮಂಡ್ಯದಲ್ಲಿ ಮತ್ತೆ ಕೊರೋನಾ ಅಟ್ಟಹಾಸ: ನಾಲ್ವರಿಗೆ ಸೋಂಕು

ಸಕ್ಕರೆ ನಾಡಿನಲ್ಲಿ ಮತ್ತೆ ಕೊರೋನಾ ರಣಕೇಕೆ ಹಾಕಿದ್ದು, ಒಂದೇ ಕಾಲೇಜಿನ ನಾಲ್ವರು ವಿದ್ಯಾರ್ಥಿಗಳಿಗೆ ಕೊರೋನಾ ಸೋಂಕು ತಗುಲಿದೆ. ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನಲ್ಲಿರುವ ಆದಿಚುಂಚನಗಿರಿ ನರ್ಸಿಂಗ್ ಕಾಲೇಜಿನ 4 ವಿದ್ಯಾರ್ಥಿಗಳಿಗೆ ಕೊರೋನಾ ದೃಢಪಟ್ಟಿದೆ. 

four students tested corona positive in mandya gvd

ಮಂಡ್ಯ (ಜ. 1): ಸಕ್ಕರೆ ನಾಡಿನಲ್ಲಿ ಮತ್ತೆ ಕೊರೋನಾ (Corona) ರಣಕೇಕೆ ಹಾಕಿದ್ದು, ಒಂದೇ ಕಾಲೇಜಿನ ನಾಲ್ವರು ವಿದ್ಯಾರ್ಥಿಗಳಿಗೆ ಕೊರೋನಾ ಸೋಂಕು ತಗುಲಿದೆ. ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನಲ್ಲಿರುವ ಆದಿಚುಂಚನಗಿರಿ ನರ್ಸಿಂಗ್ ಕಾಲೇಜಿನ 4 ವಿದ್ಯಾರ್ಥಿಗಳಿಗೆ ಕೊರೋನಾ (Covid positive) ದೃಢಪಟ್ಟಿದೆ. 

ಡಿ.20ರಂದು ಕೋಲ್ಕತ್ತಾದಿಂದ ಆಗಮಿಸಿದ್ದ 67 ವಿದ್ಯಾರ್ಥಿಗಳಿಗೆ 1 ವಾರದ ಹೋಂ ಕ್ವಾರಂಟೈನ್‌ (Home Quarantine) ಬಳಿಕ ಸಾಮೂಹಿಕ ಪರೀಕ್ಷೆಯನ್ನು ನಡೆಸಲಾಯಿತು. 67 ವಿದ್ಯಾರ್ಥಿಗಳ ಪೈಕಿ ನಾಲ್ವರಿಗೆ ಕೊರೋನಾ ಸೋಂಕು ಪತ್ತೆಯಾಗಿದೆ. ಸೋಂಕಿತ ವಿದ್ಯಾರ್ಥಿಗಳ ಸಂಪರ್ಕದಲ್ಲಿದ್ದ 137 ಜನರಿಗೂ ಪರೀಕ್ಷೆಯನ್ನು ನಡೆಸಲಾಗಿದ್ದು, ಇಂದು ಸಂಜೆ ಸಂಪರ್ಕಿತರ ರಿಪೋರ್ಟ್ (Report) ಬರುವ ಸಾಧ್ಯತೆ ಇದೆ. 

4 ಸೋಂಕಿತ ವಿದ್ಯಾರ್ಥಿಗಳಲ್ಲಿ ಒಮಿಕ್ರಾನ್ (Omicron) ಪತ್ತೆಗೆ ಜಿನೋ ಸಿಕ್ವೆನ್ಸಿ ಟೆಸ್ಟ್‌ ನಡೆಸಲಾಗಿದ್ದು, ಸದ್ಯ ವಿದ್ಯಾರ್ಥಿಗಳಿಗೆ ಆದಿಚುಂಚನಗಿರಿ ಆಸ್ಪತ್ರೆಯ ಕೊವಿಡ್ ಕೇರ್ ಸೆಂಟರ್‌ನಲ್ಲಿ ಪ್ರತ್ಯೇಕವಾಗಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಆದಿಚುಂಚನಗಿರಿ ಆಸ್ಪತ್ರೆ ಸರ್ಜನ್ ಹಾಗೂ ಬೆಳ್ಳೂರು ಆರೋಗ್ಯ ಕೇಂದ್ರದ ಇಬ್ಬರೂ ವೈದ್ಯರಿಗೂ ಮಹಾಮಾರಿ ಕೊರೋನಾ ಸೋಂಕು ದೃಢಪಟ್ಟಿದೆ. 

ಡಬಲ್ ಶಾಕ್, ಕರ್ನಾಟಕದಲ್ಲಿ ಕೊರೋನಾ ಮಧ್ಯೆ ಒಮಿಕ್ರಾನ್ ಸ್ಫೋಟ

ಇನ್ನು, ಕರ್ನಾಟಕದಲ್ಲಿ ಮಹಾಮಾರಿ ಕೊರೋನಾ ಸೋಂಕಿತರ (Coronavirus) ಸಂಖ್ಯೆ ಮತ್ತೆ ಏರಿಕೆಯಾಗಿದೆ. ಕಳೆದ ಒಂದುವಾರದಿಂದ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಇದರಿಂದ ರಾಜ್ಯ ಸರ್ಕಾರವೂ ಸಹ ಅಲರ್ಟ್ ಆಗಿದೆ. ರಾಜ್ಯದಲ್ಲಿ ಶುಕ್ರವಾರ ಒಂದೇ ದಿನ 832 ಕೊರೋನಾ ಪಾಸಿಟಿವ್ ಕೇಸ್ ಪತ್ತೆಯಾಗಿದ್ದು, 8 ಮಂದಿ ಸಾವನ್ನಪ್ಪಿದ್ದಾರೆ.  335 ಜನರು ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಕರ್ನಾಟಕದಲ್ಲಿ ಕೊವಿಡ್ ಪಾಸಿಟಿವಿಟಿ ಪ್ರಮಾಣ ಶೇ 0.70 ರಷ್ಟಿದ್ರೆ, ಸಾವಿನ  ಪ್ರಮಾಣ ಶೇ 0.96% ಇದೆ. 

ರಾಜ್ಯದಲ್ಲಿ ಈವರೆಗೆ 30,07,337 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, ಈವರೆಗೆ 38,335 ಮಂದಿ ಕೊವಿಡ್ ಸೋಂಕಿನಿಂದ ಮೃತಪಟ್ಟಿದ್ದಾರೆ.   29,60,261 ಮಂದಿ ಚೇತರಿಸಿಕೊಂಡಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಪ್ರಸ್ತುತ 8712 ಸಕ್ರಿಯ ಪ್ರಕರಣಗಳಿದ್ದು ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಇನ್ನು ಬೆಂಗಳೂರು ನಗರದಲ್ಲಿ ಶುಕ್ರವಾರ 656 ಜನರಲ್ಲಿ ಸೋಂಕು ದೃಢಪಟ್ಟಿದ್ದು, ಐವರು ಮೃತಪಟ್ಟಿದ್ದಾರೆ. 211 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ನಗರದಲ್ಲಿ ಈವರೆಗೆ ಒಟ್ಟು 12,63,618 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, ಈವರೆಗೆ 16,400 ಮಂದಿ ಮೃತಪಟ್ಟಿದ್ದಾರೆ. ಹಾಗೇ12,39,931 ಜನರು ಚೇತರಿಸಿಕೊಂಡಿದ್ದಾರೆ. ನಗರದಲ್ಲಿ ಪ್ರಸ್ತುತ 7286 ಸಕ್ರಿಯ ಪ್ರಕರಣಗಳಿವೆ.

Massive jump in COVID 19 case: 16764 ಕೋವಿಡ್‌ ಕೇಸ್‌, 64 ದಿನಗಳ ಗರಿಷ್ಠ

ಯಾವ ಜಿಲ್ಲೆಯಲ್ಲಿ ಎಷ್ಟು ಕೇಸ್?: ಬೆಂಗಳೂರು ನಗರ 656, ಬಳ್ಳಾರಿ 6, ಬೆಳಗಾವಿ 12, ಬೆಂಗಳೂರು ಗ್ರಾಮಾಂತರ 5, ಚಾಮರಾನಗರ, ಚಿಕ್ಕಬಳ್ಳಾಪುರ, ರಾಮನಗರ, ಗದಗ, ಉತ್ತರ ಕನ್ನಡ, ವಿಜಯಪುರ 1, ಚಿಕ್ಕಮಗಳೂರು 3, ದಕ್ಷಿಣ ಕನ್ನಡ 30, ಧಾರವಾಡ, ಮೈಸೂರು 9, ಹಾಸನ 11, ಕಲಬುರಗಿ 9, ಕೊಡಗು 21, ಕೋಲಾರ 8, ಮಂಡ್ಯ 7, ಶಿವಮೊಗ್ಗ 2, ತುಮಕೂರು 3, ಉಡುಪಿ 35.

Latest Videos
Follow Us:
Download App:
  • android
  • ios