ದ್ವಿತೀಯ ಪಿಯು ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಫೆ. 28ರಿಂದ ಮಾ. 17ರವರೆಗೆ ಕೆಎಸ್ಸಾರ್ಟಿಸಿ ಬಸ್‌ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಲಾಗುತ್ತಿದೆ. ರಾಜ್ಯದಲ್ಲಿ ಫೆ. 28ರಿಂದ ದ್ವಿತೀಯ ಪಿಯು ಪರೀಕ್ಷೆಗಳು ಆರಂಭವಾಗುತ್ತಿದೆ.

ಬೆಂಗಳೂರು: ದ್ವಿತೀಯ ಪಿಯು ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಫೆ. 28ರಿಂದ ಮಾ. 17ರವರೆಗೆ ಕೆಎಸ್ಸಾರ್ಟಿಸಿ ಬಸ್‌ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಲಾಗುತ್ತಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ರಾಜ್ಯದಲ್ಲಿ ಫೆ. 28ರಿಂದ ದ್ವಿತೀಯ ಪಿಯು ಪರೀಕ್ಷೆ

ರಾಜ್ಯದಲ್ಲಿ ಫೆ. 28ರಿಂದ ದ್ವಿತೀಯ ಪಿಯು ಪರೀಕ್ಷೆಗಳು ಆರಂಭವಾಗುತ್ತಿದೆ. ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ವಾಸಸ್ಥಳದಿಂದ ಪರೀಕ್ಷಾ ಕೇಂದ್ರಕ್ಕೆ ತೆರಳಲು ಮತ್ತು ಹಿಂದಿರುಗಲು ಪರೀಕ್ಷಾ ಪ್ರವೇಶ ಪತ್ರ ತೋರಿಸಿ ಕೆಎಸ್ಸಾರ್ಟಿಸಿ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಲಾಗಿದೆ.

ಕೋರಿಕೆಯ ನಿಲುಗಡೆ ನೀಡಬೇಕು

ಜತೆಗೆ ಪರೀಕ್ಷಾ ಪ್ರವೇಶ ಪತ್ರದ ಆಧಾರದಲ್ಲಿ ನಿರ್ವಾಹಕರು ಪರೀಕ್ಷಾ ಕೇಂದ್ರದ ಸಮೀಪ ಕೋರಿಕೆಯ ನಿಲುಗಡೆ ನೀಡಬೇಕು ಎಂದು ಕೆಎಸ್ಸಾರ್ಟಿಸಿ ಮುಖ್ಯ ಸಂಚಾರ ವ್ಯವಸ್ಥಾಪಕರು ಆದೇಶಿಸಿದ್ದಾರೆ.