Asianet Suvarna News Asianet Suvarna News

'ಕುಟೀರ’ ಫಲಾನುಭವಿಗಳಿಗೆ ಫ್ರೀ ವಿದ್ಯುತ್‌: ಸಿಎಂ ಬೊಮ್ಮಾಯಿ

*   ಭೂ ಖರೀದಿಸಲು ದಲಿತರಿಗೆ 20 ಲಕ್ಷ ಸಬ್ಸಿಡಿ
*   ಭೂ ಒಡೆತನ ಯೋಜನೆಯಡಿ ನೀಡುವ ಸಹಾಯಧನ 15ರಿಂದ 20 ಲಕ್ಷ ರು.ಗೆ ಏರಿಕೆ
*   ವಸತಿ ಯೋಜನೆಯ ಸಹಾಯಧನ 1.75 ಲಕ್ಷ ರು.ನಿಂದ 2 ಲಕ್ಷ ರುಪಾಯಿಗೆ ಹೆಚ್ಚಳ
 

Free Electricity for Kuteeara Beneficiaries in Karnataka Says CM Basavaraj Bommai grg
Author
Bengaluru, First Published Apr 6, 2022, 4:58 AM IST

ಬೆಂಗಳೂರು(ಏ.06): ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರಿಗೆ ಭೂಒಡೆತನ ಯೋಜನೆ, ವಸತಿ ಯೋಜನೆಯಡಿ ನೀಡುತ್ತಿದ್ದ ಸಹಾಯಧನದ ಮೊತ್ತ ಹೆಚ್ಚಳ ಮತ್ತು ಕುಟೀರ ಯೋಜನೆಯಡಿ 75 ಯೂನಿಟ್‌ ಉಚಿತ ವಿದ್ಯುತ್‌ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj Bommai) ಪ್ರಕಟಿಸಿದ್ದಾರೆ.

ಭೂ ಒಡೆತನ ಯೋಜನೆಯಡಿ ಭೂಖರೀದಿಗೆ(Land) ನೀಡಲಾಗುತ್ತಿದ್ದ 15 ಲಕ್ಷ ರು. ಸಹಾಯಧವನ್ನು 20 ಲಕ್ಷ ರು.ಗೆ, ವಸತಿ ಯೋಜನೆಯಡಿ ಮನೆ ನಿರ್ಮಿಸಲು ನೀಡಲಾಗುತ್ತಿದ್ದ 1.75 ಲಕ್ಷ ರು.ನಿಂದ 2 ಲಕ್ಷ ರು.ಗೆ ಹೆಚ್ಚಿಸಲಾಗುವುದು ಎಂದು ಘೋಷಿಸಿದ್ದಾರೆ. ಮುಂದಿನ ವಾರದೊಳಗೆ ಆದೇಶ ಹೊರಡಿಸಲಾಗುವುದು ಎಂದು ಹೇಳಿದ್ದಾರೆ.

ಕರ್ನಾಟಕದಲ್ಲಿ ಆಝಾನ್ ಸೌಂಡ್: ಸರ್ಕಾರ ಯಾವುದೇ ಹೊಸ ಅದೇಶ ಹೊರಡಿಸಿಲ್ಲ ಎಂದ ಸಿಎಂ

ಮಂಗಳವಾರ ವಿಧಾನಸೌಧದಲ್ಲಿ ನಡೆದ ಉಪಪ್ರಧಾನಿ ಡಾ.ಬಾಬು ಜಗಜೀವನ್‌ ರಾಮ್‌ ಅವರ 115ನೇ ಜನ್ಮ ದಿನಾಚರಣೆ ಮತ್ತು ಬಾಬು ಜಗಜೀವನ ರಾಂ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಪರಿಶಿಷ್ಟರಿಗೆ ಉದ್ಯೋಗ ತರಬೇತಿ:

ಸ್ವಯಂ ಉದ್ಯೋಗ(Job) ಮಾಡುವ ಎಸ್‌ಸಿ/ಎಸ್‌ಟಿ ಸಮುದಾಯಕ್ಕೆ ಪ್ರತಿ ತಾಲೂಕಿನಲ್ಲಿ ಬಾಬು ಜಗಜೀವನ ರಾಂ ಸ್ವಯಂ ಉದ್ಯೋಗ ತರಬೇತಿ ಕೇಂದ್ರ ಪ್ರಾರಂಭಿಸುವ ನಿರ್ಣಯ ಕೈಗೊಂಡಿದ್ದೇವೆ. ಈ ಯೋಜನೆಯ ರೂಪುರೇಷೆಯನ್ನು ಸಿದ್ಧಪಡಿಸಿ ಕೂಡಲೇ ಒಂದು ತಿಂಗಳಲ್ಲಿ ಯೋಜನೆಯನ್ನು ಜಾರಿಗೆ ತರಲಾಗುವುದು ಎಂದರು.

ಎಸ್‌ಸಿ/ಎಸ್‌ಟಿ ವಿದ್ಯಾರ್ಥಿಗಳಿಗೆ(SC ST Students) ವಸತಿ ಶಾಲೆಗಳಲ್ಲಿ ವಿಶೇಷ ತರಬೇತಿ ನೀಡುವ ವಿನೂತನ ಯೋಜನೆಯನ್ನು ಈ ವರ್ಷ ಪ್ರಾರಂಭ ಮಾಡಲಾಗುವುದು. ಮುಖ್ಯಮಂತ್ರಿ ಮಾರ್ಗದರ್ಶಿನಿ ವೇದಿಕೆಯ ಮೂಲಕ 8 ರಿಂದ 12ನೇ ತರಗತಿಯ ವಿದ್ಯಾರ್ಥಿಗಳಿಗೆ ವಿಶೇಷ ತರಬೇತಿ ನೀಡುವ ವಿಶೇಷ ಕಾರ್ಯಕ್ರಮವನ್ನು ರೂಪಿಸಲಾಗುವುದು. ಎಸ್‌ಸಿ/ಎಸ್‌ಟಿ ಸಮುದಾಯಗಳಿಗಾಗಿ ಸ್ಟಾರ್ಟ್‌ಆಪ್‌ ಯೋಜನೆಯಡಿ 50 ಲಕ್ಷ ರು. ಸಹಾಯಧನ ನೀಡುವ ಯೋಜನೆಯನ್ನು ಬಜೆಟ್‌ನಲ್ಲಿ(Budget) ತಿಳಿಸಲಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಇದೇ ವೇಳೆ ಹಲವು ವರ್ಷಗಳಿಂದ ಬಾಕಿ ಇದ್ದ ಬಾಬು ಜಗಜೀವನರಾಂ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್‌ ಇತರರು ಉಪಸ್ಥಿತರಿದ್ದರು.

ಇದೇನಾ ನೀವು ಆಡಳಿತ ನಡೆಸುವ ರೀತಿ, ಸಿಎಂ ಬೊಮ್ಮಾಯಿ ವಿರುದ್ಧ ಎಚ್‌ಡಿಕೆ ಕೆಂಡ

ಕೇಂದ್ರ ಸರ್ಕಾರಕ್ಕೆ ಸಿಎಂ ಬೊಮ್ಮಾಯಿ ಜಲಾಗ್ರಹ

ನವದೆಹಲಿ: ರಾಜ್ಯ ರಾಜಧಾನಿ ಬೆಂಗಳೂರು(Bengaluru) ನಗರ ಸೇರಿದಂತೆ ಸುತ್ತಮುತ್ತಲ ಪ್ರದೇಶಗಳಿಗೆ ಕುಡಿಯುವ ನೀರು ಒದಗಿಸುವ ರಾಜ್ಯ ಸರ್ಕಾರದ(Government of Karnataka) ಮಹತ್ವಾಕಾಂಕ್ಷಿ ಮೇಕೆದಾಟು ಯೋಜನೆಯ(Mekedatu Project) ವಿಸ್ತೃತ ಯೋಜನಾ ವರದಿಗೆ ಒಪ್ಪಿಗೆ ನೀಡುವಂತೆ ಒತ್ತಾಯಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೇಂದ್ರ ಸರ್ಕಾರದೊಂದಿಗೆ ಮಾತುಕತೆ ನಡೆಸಿದ್ದು, ಶೀಘ್ರ ಕ್ರಮ ಕೈಗೊಳ್ಳುವ ಭರವಸೆ ದೊರೆತಿದೆ. ಇದೇ ವೇಳೆ ಕಳಸಾ-ಬಂಡೂರಿ ಯೋಜನೆಗೆ ಅನುಮತಿ ನೀಡಬೇಕು ಎಂಬ ರಾಜ್ಯದ ಮನವಿಗೂ ಕೇಂದ್ರ ಸಚಿವರಿಂದ ಸಕಾರಾತ್ಮಕವಾಗಿ ಸ್ಪಂದನೆ ದೊರಕಿದೆ.

ಮೇಕೆದಾಟು ಯೋಜನೆ ತ್ವರಿತ ಅನುಷ್ಠಾನಗೊಳಿಸುವಂತೆ ಒತ್ತಾಯಿಸಿ ಪ್ರತಿಪಕ್ಷ ಕಾಂಗ್ರೆಸ್‌ ಎರಡು ಹಂತಗಳಲ್ಲಿ ಪಾದಯಾತ್ರೆ ನಡೆಸಿತ್ತು. ಈ ನಡುವೆ ಯೋಜನೆಗೆ ಸಂಬಂಧಿಸಿ ಎರಡು ರಾಜ್ಯಗಳ ಮಧ್ಯೆ ಮಧ್ಯಸ್ಥಿಕೆ ವಹಿಸಲು ತಾನು ಸಿದ್ಧ ಎಂದು ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್‌ ಶೆಖಾವತ್‌ ತಿಳಿಸಿದ್ದರು. ಇದು ಪ್ರತಿಪಕ್ಷಗಳಾದ ಕಾಂಗ್ರೆಸ್‌(Congress) ಮತ್ತು ಜೆಡಿಎಸ್‌(JDS) ಕಣ್ಣು ಕೆಂಪಗಾಗಿಸಿತ್ತು. ನಂತರದ ಬೆಳವಣಿಗೆಯಲ್ಲಿ ಕಳೆದ ತಿಂಗಳಷ್ಟೇ ಮುಖ್ಯಮಂತ್ರಿಗಳು ಸರ್ವಪಕ್ಷಗಳ ಸಭೆ ನಡೆಸಿ ಅಭಿಪ್ರಾಯಗಳನ್ನು ಪಡೆದಿದ್ದರು. ಇದೀಗ ನವದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬೊಮ್ಮಾಯಿ ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿ ಮಾಡಿರುವ ಮುಖ್ಯಮಂತ್ರಿ ಬೊಮ್ಮಾಯಿ ಮೇಕೆದಾಟು ಡಿಪಿಆರ್‌ಗೆ ಒಪ್ಪಿಗೆ ನೀಡುವಂತೆ ಒತ್ತಡ ಹೇರಿದ್ದಾರೆ.
 

Follow Us:
Download App:
  • android
  • ios