ಹಿಂದುಳಿದ ವರ್ಗಗಳ ವಸತಿ ಶಾಲೆಗಳ 7 ಕೋಟಿ ರು. ಬಿಲ್ ಅನ್ನು ಇದೇ ಇಲಾಖೆಯ ನಿರ್ವಹಣಾ ಲೆಕ್ಕ ಶೀರ್ಷಿಕೆಯಡಿ ಒದಗಿಸಲಾಗುವ ಅನುದಾನದಲ್ಲಿ ತ್ರೈಮಾಸಿಕವಾರು ಇಂಧನ ಇಲಾಖೆಗೆ ಮರುಪಾವತಿಸಬೇಕು ಎಂದು ಆದೇಶದಲ್ಲಿ ತಿಳಿಸಿದ ಸಮಾಜ ಕಲ್ಯಾಣ ಇಲಾಖೆ  

ಬೆಂಗಳೂರು(ಡಿ.17): ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ 821 ವಸತಿ ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ಉಚಿತ ವಿದ್ಯುತ್ ಪೂರೈಸಲು ಅಂದಾಜು ವೆಚ್ಚ ನಿಗದಿಪಡಿಸಿ ಸಮಾಜ ಕಲ್ಯಾಣ ಇಲಾಖೆ ಆದೇಶ ಹೊರಡಿಸಿದೆ. 

ಸಂಘದ ವ್ಯಾಪ್ತಿಯಲ್ಲಿ ಪರಿಶಿಷ್ಟ ಜಾತಿಯ 503 ವಸತಿ ಶಾಲೆ ಗಳು, ಪರಿಶಿಷ್ಟ ಪಂಗಡದ 144, ಹಿಂದುಳಿದ ವರ್ಗದ 174 ಸೇರಿ ಒಟ್ಟಾರೆ 821 ವಸತಿ ಶಾಲಾ, ಕಾಲೇಜುಗಳಿವೆ. ಇವುಗಳಿಗೆ ಉಚಿತ ವಿದ್ಯುತ್ ಪೂರೈಸಲು ವಾರ್ಷಿಕ ಅಂದಾಜು 36 ಕೋಟಿ ರು. ಬೇಕಾಗುತ್ತದೆ. 3 ಇಲಾಖೆಗಳು ಕ್ರಮವಾಗಿ 23 ಕೋಟಿ ರು., 6 ಕೋಟಿ ರು. ಮತ್ತು 7 ಕೋಟಿ ರು. ಭರಿಸಬೇಕಾಗುತ್ತದೆ. ಎಸ್ಸಿ, ಎಸ್ಟಿ ವಸತಿ ಶಾಲೆಗಳ 29 ಕೋಟಿ ರು. ವಿದ್ಯುತ್ ಬಿಲ್ ಅನ್ನು ಎಸ್‌ಸಿಎಸ್‌ಪಿ / ಟಿಎಸ್‌ಪಿ ಯೋಜನೆಯಡಿ ಒದಗಿಸುವ ಅನುದಾನದ ಮೂಲಕ ಭರಿಸಬೇಕು. 

ಪಿಎಂ ಸೂರ್ಯಘರ್ ಯೋಜನೆಯಲ್ಲಿ ಭರ್ಜರಿ ಸಬ್ಸಿಡಿ, ಫ್ರಿ ವಿದ್ಯುತ್ ಜೊತೆ ಆದಾಯಕ್ಕೆ ಅರ್ಜಿ ಸಲ್ಲಿಕೆ ಹೇಗೆ?

ಹಿಂದುಳಿದ ವರ್ಗಗಳ ವಸತಿ ಶಾಲೆಗಳ 7 ಕೋಟಿ ರು. ಬಿಲ್ ಅನ್ನು ಇದೇ ಇಲಾಖೆಯ ನಿರ್ವಹಣಾ ಲೆಕ್ಕ ಶೀರ್ಷಿಕೆಯಡಿ ಒದಗಿಸಲಾಗುವ ಅನುದಾನದಲ್ಲಿ ತ್ರೈಮಾಸಿಕವಾರು ಇಂಧನ ಇಲಾಖೆಗೆ ಮರುಪಾವತಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ. 

ಉಚಿತ ವಿದ್ಯುತ್‌ ಸೌಲಭ್ಯವನ್ನು ಮಿತವಾಗಿ, ಅಗತ್ಯಕ್ಕೆ ತಕ್ಕಂತೆ ಮಾತ್ರ ಬಳಕೆ ಮಾಡಬೇಕೆಂದು ಪ್ರಾಂಶುಪಾಲರು, ಅಧಿಕಾರಿಗಳಿಗೆ ಸಮಾಜ ಕಲ್ಯಾಣ ಇಲಾಖೆಯ ಆದೇಶದಲ್ಲಿ ತಿಳಿಸಲಾಗಿದೆ.

ಗೃಹ ಜ್ಯೋತಿ ಯೋಜನೆಯ ವಿದ್ಯುತ್ ಕದ್ದ ಕಾಂಗ್ರೆಸ್ ನಾಯಕಿ; 1 ಲಕ್ಷ ರೂ. ದಂಡ ವಿಧಿಸಿದ ಮೆಸ್ಕಾಂ!

ಉಚಿತ ವಿದ್ಯುತ್‌ನಿಂದ ಸಾಲದಲ್ಲಿ ಸಿಲುಕುತ್ತೀರಿ: ರಾಜ್ಯಗಳಿಗೆ ಕೇಂದ್ರ ಸರ್ಕಾರದ ಎಚ್ಚರಿಕೆ

ನವದೆಹಲಿ: ಸಾಲ ಮಾಡಿ ಜನರಿಗೆ ಉಚಿತ ವಿದ್ಯುತ್‌ ನೀಡುವ ರಾಜ್ಯಗಳು ಸಾಲದ ಸುಳಿಗೆ ಸಿಲುಕಲಿವೆ ಎಂದು ಕೇಂದ್ರ ಸರ್ಕಾರ ಎಚ್ಚರಿಕೆ ನೀಡಿತ್ತು. ಈ ಕುರಿತು ಸಂದರ್ಶನವೊಂದರಲ್ಲಿ ಮಾತನಾಡಿದ ಕೇಂದ್ರ ಇಂಧನ ಸಚಿವ ಆರ್‌.ಕೆ.ಸಿಂಗ್‌, ಪಂಜಾಬ್‌ನಂತಹ ರಾಜ್ಯಗಳು ಸಾಲದ ಹಣದಲ್ಲಿ ವಿದ್ಯುತ್‌ ಖರೀದಿಸಿ ಜನರಿಗೆ ಉಚಿತವಾಗಿ ನೀಡುತ್ತಿವೆ. ರಾಜ್ಯ ಸರ್ಕಾರದ ಬಳಿಯೇ ಸಾಕಷ್ಟು ಹಣವಿದ್ದರೆ ಇಂತಹ ಜನಪ್ರಿಯ ಯೋಜನೆಗಳನ್ನು ಜಾರಿಗೊಳಿಸುವುದು ಸರಿ. 
ಆದರೆ, ಸಾಲ ಮಾಡಿ ವಿದ್ಯುತ್‌ ನೀಡಿದರೆ ಅದಕ್ಕೆ ಸರ್ಕಾರಗಳು ಬೆಲೆ ತೆರಬೇಕಾಗುತ್ತದೆ. ಏಕೆಂದರೆ ವಿದ್ಯುತ್‌ ತಯಾರಿಸಲು ಖರ್ಚು ತಗಲುತ್ತದೆ’ ಎಂದು ಹೇಳಿದ್ದಾರೆ. ಅವರು ಪಂಜಾಬ್‌ ಹೆಸರು ಪ್ರಸ್ತಾಪಿಸಿ ಈ ಎಚ್ಚರಿಕೆ ನೀಡಿದ್ದರೂ, ಕರ್ನಾಟಕ ಕೂಡ ಜನರಿಗೆ ಉಚಿತ ವಿದ್ಯುತ್‌ ನೀಡುತ್ತಿರುವುದರಿಂದ ಕರ್ನಾಟಕಕ್ಕೂ ಅವರು ಪರೋಕ್ಷ ಎಚ್ಚರಿಕೆ ನೀಡಿದಂತಾಗಿದೆ. ‘ಬೇರೆಲ್ಲಾ ಉತ್ಪನ್ನಗಳಂತೆ ವಿದ್ಯುತ್‌ ತಯಾರಿಸಲು ಕೂಡ ಹಣ ಬೇಕು. ಜನರಿಗೆ ಅದನ್ನು ಯಾವುದೇ ರಾಜ್ಯ ಸರ್ಕಾರ ಉಚಿತವಾಗಿ ನೀಡುತ್ತದೆಯಾದರೆ ಅಷ್ಟು ಹಣ ರಾಜ್ಯ ಸರ್ಕಾರದ ಬಳಿಯೇ ಇರಬೇಕು. 

ಅದಿಲ್ಲದೆ ಸಾಲ ಮಾಡಿ ಹಣ ತಂದು ಜನರಿಗೆ ಉಚಿತ ವಿದ್ಯುತ್‌ ನೀಡಿದರೆ ಖಂಡಿತ ಸಾಲದ ಸುಳಿಯಲ್ಲಿ ಸಿಲುಕಬೇಕಾಗುತ್ತದೆ. ವಿದ್ಯುತ್‌ ಉಚಿತವಲ್ಲ ಎಂದು ನಾನು ರಾಜ್ಯಗಳಿಗೆ ಹೇಳುತ್ತಲೇ ಬಂದಿದ್ದೇನೆ. ಆದರೂ ಅವು ವಿದ್ಯುತ್ತನ್ನು ಉಚಿತವಾಗಿ ನೀಡುತ್ತವೆಯಾದರೆ ಅದಕ್ಕೆ ಬೆಲೆ ತೆರಬೇಕಾಗುತ್ತದೆ’ ಎಂದು ತೀಕ್ಷ್ಣವಾಗಿ ಹೇಳಿದ್ದಾರೆ. ಈಗಾಗಲೇ ಸಾಲದಲ್ಲಿರುವ ರಾಜ್ಯಗಳು ಉಚಿತ ವಿದ್ಯುತ್‌ನಂತಹ ಜನಪ್ರಿಯ ಯೋಜನೆಗಳಿಗಾಗಿ ಇನ್ನಷ್ಟು ಸಾಲ ಮಾಡುತ್ತಿವೆ. ಹೀಗೆ ಸಾಲದ ಸುಳಿಗೆ ರಾಜ್ಯವನ್ನು ಸಿಲುಕಿಸಬಾರದು. ಉಚಿತಗಳಿಂದಾಗಿಯೇ ಅನೇಕ ರಾಜ್ಯ ಸರ್ಕಾರಗಳು ಸಾಲದ ಸುಳಿಯಲ್ಲಿ ಸಿಲುಕುತ್ತಿವೆ ಎಂದೂ ಅಭಿಪ್ರಾಯಪಟ್ಟಿದ್ದರು.