ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಹಾಗೂ ವೃತ್ತಿಪರ, ಪದವಿ, ಸ್ನಾತಕೋತ್ತರ ಪದವಿ ಪರೀಕ್ಷೆ| ವಿದ್ಯಾರ್ಥಿಗಳಿಗೆ ಪರೀಕ್ಷೆ ದಿನ BMTC ಬಸ್‌ಗಳಲ್ಲಿ ಉಚಿತ ಪ್ರಯಾಣ| ಈ ಬಾರಿ ರಿಯಾಯಿತಿ ದರದ ವಿದ್ಯಾರ್ಥಿ ಬಸ್‌ ಪಾಸ್‌ ವಿತರಿಸಿಲ್ಲ| 

ಬೆಂಗಳೂರು(ಸೆ.05): 2019-20ನೇ ಸಾಲಿನ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಹಾಗೂ ವೃತ್ತಿಪರ, ಪದವಿ, ಸ್ನಾತಕೋತ್ತರ ಪದವಿ ಪರೀಕ್ಷೆ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷೆ ದಿನ ನಿಗಮದ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಬಿಎಂಟಿಸಿ ಅವಕಾಶ ಕಲ್ಪಿಸಿದೆ.

ವಿದ್ಯಾರ್ಥಿಗಳು ಪರೀಕ್ಷೆಯ ದಿನ ಕಳೆದ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ಬಸ್‌ ಪಾಸ್‌ ಹಾಗೂ ಪರೀಕ್ಷೆಯ ಪ್ರವೇಶಪತ್ರ ತೋರಿಸಿ ನಿಗಮ ಬಸ್‌ಗಳಲ್ಲಿ ವಾಸಸ್ಥಳದಿಂದ ಪರೀಕ್ಷಾ ಕೇಂದ್ರಗಳಿಗೆ ಉಚಿತವಾಗಿ ಪ್ರಯಾಣಿಸಬಹುದು ಎಂದು ನಿಗಮ ತಿಳಿಸಿದೆ.

ಲಾಕ್‌ಡೌನ್‌ ಅವಧಿಯಲ್ಲಿ ಸೇವೆ ಸಲ್ಲಿಸದಿದ್ದರೂ ಬಿಎಂಟಿಸಿ ಎಲ್ಲ ಸಿಬ್ಬಂದಿಗೂ ವೇತನ!

ಕೊರೋನಾ ಹಿನ್ನೆಲೆಯಲ್ಲಿ ಶಾಲಾ-ಕಾಲೇಜುಗಳು ಇನ್ನೂ ಆರಂಭವಾಗಿಲ್ಲ. ಹೀಗಾಗಿ ನಿಗಮವು ಈ ಬಾರಿ ರಿಯಾಯಿತಿ ದರದ ವಿದ್ಯಾರ್ಥಿ ಬಸ್‌ ಪಾಸ್‌ ವಿತರಿಸಿಲ್ಲ. ಈ ನಡುವೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಸೇರಿದಂತೆ ಹಲವು ಪರೀಕ್ಷೆಗಳು ಜರುಗಲಿವೆ. ಹೀಗಾಗಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಬಿಎಂಟಿಸಿ ಬಸ್‌ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿದೆ.