ಬಿಜೆಪಿ ಸರ್ಕಾರದಲ್ಲಿ ಹಂಚಿಕೆ ಮಾಡಿ ಅಪೂರ್ಣಗೊಂಡ ಕಾಮಗಾರಿಗಳಿಗೆ ಹೊಸ ಟೆಂಡರ್: ಸಿಎಂ ಸಿದ್ದರಾಮಯ್ಯ
ಬಿಜೆಪಿ ಸರ್ಕಾರದಲ್ಲಿ ಹಂಚಿಕೆ ಮಾಡಿ ಅಪೂರ್ಣಗೊಂಡಿದ್ದ ಕಾಮಗಾರಿಗಳಿಗೆ ಹೊಸದಾಗಿ ಟೆಂಡರ್ ಕರೆದು ಕಾಮಗಾರಿ ನಡೆಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶಿಸಿದ್ದಾರೆ.
ಬೆಂಗಳೂರು (ಜೂ.18): ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕ್ರೀಡಾಂಗಣಗಳ ನಿರ್ಮಾಣವನ್ನು 2 ಕೋಟಿ ರೂ.ಗೆ ಸೀಮಿತಗೊಳಿಸಿ ಕೆಆರ್‌ಐಡಿಎಲ್ ಸಂಸ್ಥೆಗೆ ಕಾಮಗಾರಿ ಹಂಚಿಕೆ ಮಾಡಿದ್ದು, ಕಾಮಗಾರಿಗಳು ಅಪೂರ್ಣಗೊಂಡಿವೆ. ಹೀಗಾಗಿ, ಅಪೂರ್ಣ ಕಾಮಗಾರಿಗಳನ್ನು ಗುರುತಿಸಿ ಹೊಸದಾಗಿ ಯೋಜನೆ ರೂಪಿಸಿ ಹೊಸ ಟೆಂಡರ್ ಕರೆದು ಕ್ರೀಡಾಂಗಣಗಳ ಕಾಮಗಾರಿ ನಡೆಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆ ನಡೆಸಿ, ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲಿಸಿದ ಸಿಎಂ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಟೆಂಡರ್ ಇಲ್ಲದೇ ನಡೆಯುತ್ತಿರುವ ಎಲ್ಲ ಕಾಮಗಾರಿಗಳನ್ನು ಸ್ಥಗಿತಗೊಳಿಸಿ ಕೂಡಲೇ ಅವುಗಳಿಗೆ ಟೆಂಡರ್ ಕರೆದು ಬಿಡ್ ಮೂಲಕ ಹಂಚಿಕೆ ಮಾಡಿ ಕಾಮಗಾರಿ ಮಾಡುವಂತೆ ಸೂಚಿಸಿದರು. ವಿಜಯನಗರ ಜಿಲ್ಲೆಯ ಹೊಸಪೇಟೆ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕೇಂದ್ರ ಸೇರಿದಂತೆ 120 ತಾಲೂಕುಗಳಲ್ಲಿ ಕ್ರೀಡಾಂಗಣಗಳೇ ಇಲ್ಲ. ಆದರೆ, ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಶೇ.95 ರಷ್ಟು ಕ್ರೀಡಾಂಗಣಗಳ ಅಭಿವೃದ್ಧಿ ಕಾಮಗಾರಿಗಳನ್ನು ಮಾಡಲು ಯಾವುದೇ ಟೆಂಡರ್ ಕರೆಯದೇ ಕೆಆರ್‌ಐಡಿಎಲ್ ಮೂಲಕ ಕಾಮಗಾರಿ ಮಾಡುತ್ತಿದ್ದಾರೆ. ಇದಕ್ಕಾಗಿ ಎಲ್ಲ ಕಾಮಗಾರಿಗಳನ್ನು 2 ಕೋಟಿ ರೂ.ಗೆ ಸೀಮಿತವಾಗುವಂತೆ ಮಾಡಿದ್ದಾರೆ. ಶೇ.95ಕ್ಕೂ ಅಧಿಕ ಕಾಮಗಾರಿಗಳನ್ನು ಇದೇ ರೀತಿ ಹಂಚಿಕೆ ಮಾಡಲಾಗಿದ್ದು, ಬಹುತೇಕ ಕಾಮಗಾರಿಗಳು ಅಪೂರ್ಣವಾಗಿದೆ.
ಪೆಟ್ರೋಲ್ ಡೀಸೆಲ್ ದರ ಹೆಚ್ಚಿಸಿದರೂ ಬಿಜೆಪಿ ಆಡಳಿತದ ರಾಜ್ಯಗಳಿಗಿಂತ ಕಡಿಮೆ ಬೆಲೆಯಿದೆ: ಸಿಎಂ ಸಿದ್ದರಾಮಯ್ಯ
ಈ ಹಿನ್ನೆಲೆಯಲ್ಲಿ ಲೋಕೋಪಯೋಗಿ ಇಲಾಖೆಯಿಂದ ತಲಾ ಇಬ್ಬರು ಇಂಜಿನಿಯರುಗಳ ಸೇವೆಯನ್ನು ಪಡೆದು ಕ್ರೀಡಾಂಗಣಗಳ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕಾಮಗಾರಿಗಳೋನ್ನು ಪೂರ್ಣಗೊಳಿಸಲು ಯೋಜನೆ ರೂಪಿಸಬೇಕು. ಜೊತೆಗೆ, ಅವರಿಂದಲೇ ಕಾಮಗಾರಿಗಳ ಪ್ರಗತಿಯ ಬಗ್ಗೆಯೂ ಮೇಲ್ವಿಚಾರಣೆ ಮಾಡಿಸಬೇಕು. ಎಲ್ಲ ಕಾಮಗಾರಿಗಳನ್ನು ಟೆಂಡರ್ ಆಹ್ವಾನಿಸಿಯೇ ಅನುಷ್ಠಾನಗೊಳಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು.
ರಾಜ್ಯಕ್ಕೆ 174 ಕೋಚ್‌ಗಳ ನೇಮಕಕ್ಕೆ ಸರ್ಕಾರ ಅನುಮೋದನೆ ನೀಡಿದ್ದಯ, ವೃಂದ ಮತ್ತು ನೇಮಕಾತಿ ನಿಯಮ ಅಂತಿಮಗೊಳಿಸುವ ಪ್ರಕ್ರಿಯೆ ಪ್ರಗತಿಯಲ್ಲಿದೆ. 1,486 ಕ್ರೀಡಾಪಟುಗಳಿಗೆ ಕ್ರೀಡಾ ಪ್ರೋತ್ಸಾಹಧನ ನೀಡಲಾಗಿದೆ ಎಂದು ಅಧಿಕಾರಿಗಳು ಸಿಎಂ ಸಿದ್ದರಾಮಯ್ಯಗೆ ಮಾಹಿತಿ ನೀಡಿದರು.
ಸಿಎಂ ಸಿದ್ದರಾಮಯ್ಯ ನುಂಗಣ್ಣನಂತೆ ಎಲ್ಲವನ್ನೂ ನುಂಗುತ್ತಿದ್ದಾರೆ: ಅಶೋಕ್ ವಾಗ್ದಾಳಿ
ಬೆಂಗಳೂರಿನಲ್ಲಿ ಬಾಸ್ಕೆಟ್ ಬಾಲ್ ಹಾಗೂ ಮೈಸೂರಿನಲ್ಲಿ ಸೈಕ್ಲಿಂಗ್ ವೆಲೋಡ್ರೋಂ ಘೋಷಣೆ ಬಗ್ಗೆ ಭೂಮಿ ಗುರುತಿಸಲಾಗಿದೆ. ಕಂಠೀರವ ಕ್ರೀಡಾಂಗಣದಲ್ಲಿ ವಸ್ತು ಸಂಗ್ರಹಾಲಯ ನಿರ್ಮಾಣ ಕುರಿತಂತೆ ಕೂಡಲೇ ಕ್ರಮ ಕೈಗೊಳ್ಳಬೇಕು. ಆಯವ್ಯಯದ ಘೋಷಣೆಗಳ ಕುರಿತಂತೆ ಕೂಡಲೇ ಆದೇಶ ಹೊರಡಿಸಬೇಕು. ಪ್ರಸಕ್ತ ಆಯವ್ಯಯದ ಘೋಷಣೆಗಳಿಗೆ ಸಂಬಂಧಿಸಿದಂತೆ 9 ಘೋಷಣೆಗಳ ಪೈಕಿ 8 ಘೋಷಣೆಗಳ ಕುರಿತು ಸರ್ಕಾರಿ ಆದೇಶ ಮಾಡಲಾಗಿದೆ. ಒಂದು ಆದೇಶ ಅನುಮೋದನೆಗೆ ಕಡತನವನ್ನು ಸಲ್ಲಿಕೆ ಮಾಡಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.