ಬೆಳಗಾವಿ(ನ.22): ಜನವರಿಯಿಂದ ಸರ್ಕಾರಿ ಆಸ್ಪತ್ರೆಗಳಲ್ಲಿ ಸಿಟಿ ಸ್ಕಾ್ಯನ್‌, ರಕ್ತ ಪರೀಕ್ಷೆ ಸೇರಿದಂತೆ ಎಲ್ಲ ರೀತಿಯ ಆರೋಗ್ಯ ಸೇವೆ ಉಚಿತವಾಗಿ ದೊರೆಯಲಿರುವುದಾಗಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಸ್ಪಷ್ಟಪಡಿಸಿದ್ದಾರೆ. ಇದು ಜಾರಿಗೊಂಡಲ್ಲಿ ಇನ್ನುಮುಂದೆ ಸರ್ಕಾರಿ ಆಸ್ಪತ್ರೆಗಳಲ್ಲಿ ಎಪಿಎಲ್‌ ಕಾರ್ಡುದಾರರಿಗೆ ಈವರೆಗೆ ವಿಧಿಸಲ್ಪಡುತ್ತಿದ್ದ ಅಲ್ಪಪ್ರಮಾಣದ ಶುಲ್ಕವೂ ರದ್ಧಾಗಲಿದೆ.

ಜನತೆ ಎಚ್ಚರ ವಹಿಸಿ ಕೊರೋನಾ 2ನೇ ಅಲೆ ತಪ್ಪಿಸಿ: ಸಚಿವ ಕೆ. ಸುಧಾಕರ್ ಮನವಿ!

ನಗರದ ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಬಿಮ್ಸ್‌)ಯ ಆವರಣದಲ್ಲಿ ಶನಿವಾರ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಿ ಅವರು ಮಾತನಾಡಿದ ಅವರು, ಜನವರಿಯಿಂದ ಎಲ್ಲ ರೀತಿಯ ಪರೀಕ್ಷೆ ಸಂಪೂರ್ಣ ಉಚಿತವಾಗಿ ನೀಡಲು ಸರ್ಕಾರ ನಿರ್ಧರಿಸಿದೆ. ಸಿಟಿ ಸ್ಕ್ಯಾ‌ನ್‌, ರಕ್ತ ಪರೀಕ್ಷೆಗಳು ಎಲ್ಲವೂ ಉಚಿತವಾಗಿ ಮಾಡಲಾಗುವುದು. ಚೀಟಿ ರಹಿತ ವ್ಯವಸ್ಥೆಯನ್ನು ಜಾರಿಗೆ ತರಲು ಎಲ್ಲ ಸೌಲಭ್ಯಗಳನ್ನು ಈಗಾಗಲೇ ಒದಗಿಸಲಾಗಿದ್ದು ಯಾವುದೇ ಔಷಧಿ ಅಗತ್ಯವಿದ್ದರೂ ಸರ್ಕಾರ ಪೂರೈಸುತ್ತಿದೆ ಎಂದು ತಿಳಿಸಿದರು.

ಇಲಾಖೆ ವಿಲೀನಕ್ಕೆ ಚಿಂತನೆ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಗಳನ್ನು ವಿಲೀನಗೊಲಿಸಿ ಒಂದೇ ಇಲಾಖೆಯಾಗಿಸಲು ಚಿಂತನೆ ಇದೆ. ಜೊತೆಗೆ ಮುಂಬರುವ ದಿನಗಳಲ್ಲಿ ರಾಜ್ಯದ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು 24/7 ಕಾರ್ಯನಿರ್ವಹಿಸುವಂತೆ ಯೋಜನೆ ರೂಪಿಸಲಾಗುತ್ತಿದೆ. ಜನಸಂಖ್ಯೆ ಅಧರಿಸಿ ಹೆಚ್ಚುವರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಆರಂಭದ ಜೊತೆಗೆ ಆ್ಯಂಬುಲೆನ್ಸ್‌ ಸೇವೆ ಬಲವರ್ಧನೆ ಮಾಡಲು ತೀರ್ಮಾನಿಸಲಾಗಿದೆ ಎಂದರು.

ಭಾರೀ ಬೆಂಕಿ ಅವಘಡ, ನಾಲ್ಕು ಮಂದಿಯ ಪ್ರಾಣ ಉಳಿಸಿ ಹೀರೋಯಿನ್ ಆದ ಶ್ವಾನ!

ಜೊತೆಗೆ ಎಲ್ಲ ಹಂತದ ವೈದ್ಯಕೀಯ ಅಧಿಕಾರಿ ಅಥವಾ ಸಿಬ್ಬಂದಿಯ ಕೌಶಲ ಅಭಿವೃದ್ಧಿಗೆ ಮುಂಬರುವ ದಿನಗಳಲ್ಲಿ ತರಬೇತಿ ನೀಡಲಾಗುವುದು. ಕೋವಿಡ್‌ ಸಂದರ್ಭದಲ್ಲಿ ಎದುರಾದ ಆಕ್ಸಿಜನ್‌ ಕೊರತೆ ಹಿನ್ನೆಲೆಯಲ್ಲಿ ಎಲ್ಲ ವೈದ್ಯಕೀಯ ಕಾಲೇಜುಗಳಲ್ಲಿ ಆಕ್ಸಿಜನ್‌ ಘಟಕ ಆರಂಭಿಸಲಾಗುತ್ತಿದೆ. ವೈದ್ಯಕೀಯ ಸೌಲಭ್ಯ ಹೆಚ್ಚಿಸಲು ಕೋವಿಡ್‌-​19 ಕೂಡ ಒಂದು ಪಾಠ ಕಲಿಸಿದಂತಾಗಿದೆ ಎಂದು ತಿಳಿಸಿದರು.