ಇಂದು ವಿಧಾನಸೌಧ ಚಲೋ; ನ.26ರಿಂದ ದೆಹಲಿ ಗಡಿಯಲ್ಲಿ ಮತ್ತೆ ಹೋರಾಟ!

ಕನಿಷ್ಠ ಬೆಂಬಲ ಬೆಲೆ ಖಾತರಿ ನೀಡಲು ಕೇಂದ್ರ ಸರ್ಕಾರ ರಚಿಸಿರುವ ಸಮಿತಿಯಲ್ಲಿ ರೈತ ಮುಖಂಡರನ್ನು ಹೊರಗಿಟ್ಟಿರುವುದನ್ನು ವಿರೋಧಿಸಿ ಹಾಗೂ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಯಿಸಿ ನ.26ರಿಂದ ದೆಹಲಿಯ ಸಿಂಘೂ ಗಡಿಯಲ್ಲಿ ಪುನಃ ಹೋರಾಟ ನಡೆಸಲು ರೈತ ಸಂಘಟನೆಗಳ ನಿರ್ಧಾರ.

From November 26 the farmers struggle again  Delhi border says Kuruburu rav

ಬೆಂಗಳೂರು (ಸೆ.26) : ಕನಿಷ್ಠ ಬೆಂಬಲ ಬೆಲೆ ಖಾತರಿ ನೀಡಲು ಕೇಂದ್ರ ಸರ್ಕಾರ ರಚಿಸಿರುವ ಸಮಿತಿಯಲ್ಲಿ ರೈತ ಮುಖಂಡರನ್ನು ಹೊರಗಿಟ್ಟಿರುವುದನ್ನು ವಿರೋಧಿಸಿ ಹಾಗೂ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಯಿಸಿ ನ.26ರಿಂದ ದೆಹಲಿಯ ಸಿಂಘೂ ಗಡಿಯಲ್ಲಿ ಪುನಃ ಹೋರಾಟ ನಡೆಸಲು ರೈತ ಸಂಘಟನೆಗಳು ನಿರ್ಧರಿಸಿವೆ. ಗಾಂಧಿ ಭವನದಲ್ಲಿ ನಡೆದ ಸಂಯುಕ್ತ ಕಿಸಾನ್‌ ಮೋರ್ಚಾ ರಾಷ್ಟ್ರೀಯ ರೈತ ಮುಖಂಡರ ದುಂಡು ಮೇಜಿನ ಅಧಿವೇಶನದಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ.

ಸೆ.26ರಂದು ರೈತ ಸಂಘಟನೆಗಳ ಒಕ್ಕೂಟದಿಂದ ವಿಧಾನಸೌಧ ಚಲೋ: ಕುರುಬೂರು ಶಾಂತಕುಮಾರ್‌

ಸಭೆಯ ನಿರ್ಣಯಗಳನ್ನು ಸುದ್ದಿಗಾರರಿಗೆ ತಿಳಿಸಿದ ರೈತ ಮುಖಂಡ ಕುರುಬೂರು ಶಾಂತಕುಮಾರ್‌, ಕನಿಷ್ಠ ಬೆಂಬಲ ಬೆಲೆ ಖಾತರಿ ನೀಡಲು ಕೇಂದ್ರ ಸರ್ಕಾರ ರಚಿಸಿದ್ದ ಸರ್ಕಾರದ ಕೃಪಾಪೋಷಿತ ಸಮಿತಿಯಲ್ಲಿ ರೈತರಿಗೆ ಸ್ಥಾನ ನೀಡಿಲ್ಲ. ಕೇಂದ್ರ ಸರ್ಕಾರ ಕಣ್ಣೊರೆಸುವ ನಾಟಕವಾಡುತ್ತಿದ್ದು ಇದನನ್ನು ವಿರೋಧಿಸಿ ದೆಹಲಿಯಲ್ಲಿ ನ.26ರಿಂದ ಪುನಃ ಹೋರಾಟ ಮುಂದುವರೆಸಲಾಗುವುದು ಎಂದರು.

ಕೃಷಿ ಉತ್ಪನ್ನಗಳ ಕನಿಷ್ಠ ಬೆಂಬಲ ಬೆಲೆ ಖಾತರಿ ಕಾನೂನು ಜಾರಿಗೆ ತರಬೇಕು. ಡಾ.ಸ್ವಾಮಿನಾಥನ್‌ ವರದಿಯಂತೆ ಬೆಂಬಲ ಬೆಲೆ ನಿಗದಿಯಾಗಬೇಕು. 2022ರ ವಿದ್ಯುತ್‌ ಕಾಯ್ದೆ ಖಾಸಗಿಕರಣ ತಿದ್ದುಪಡಿ ಕೈಬಿಡಬೇಕು. ಕಬ್ಬಿನ ಎಫ್‌ಆರ್‌ಪಿ ದರ ಪುನರ್‌ ಪರಿಶೀಲನೆ ನಡೆಸಿ ವೈಜ್ಞಾನಿಕವಾಗಿ ನ್ಯಾಯಯುತ ದರ ನಿಗದಿ ಮಾಡಬೇಕು. ಕೃಷಿ ಉತ್ಪನ್ನ ಹಾಗೂ ಉಪಕರಣಗಳ ಮೇಲಿನ ಜಿಎಸ್‌ಟಿ ರದ್ದುಪಡಿಸಬೇಕು. ರೈತರ ಸಾಲ ಮನ್ನಾ ಮಾಡಬೇಕು. ಬೆಳೆ ವಿಮೆ ಯೋಜನೆ ಮಾನದಂಡ ಬದಲಾಯಿಸಬೇಕು ಎಂಬ ಕೇಂದ್ರ ಸರ್ಕಾರವನ್ನು ಆಗ್ರಹಿಸಿ ಹೋರಾಟ ನಡೆಸಲಾಗುವುದು ಎಂದು ವಿವರಿಸಿದರು.

ಮೊಕದ್ದಮೆ ವಾಪಸ್‌: ವಿಶ್ವ ವ್ಯಾಪಾರ ಒಪ್ಪಂದದಿಂದ ಭಾರತ ಹೊರಬರಬೇಕು. ದೆಹಲಿ ಹೋರಾಟದಲ್ಲಿ ಮಾಡಿದ 750 ರೈತ ಕುಟುಂಬಗಳಿಗ ಭರವಸೆ ನೀಡಿದಂತೆ ಪರಿಹಾರ ನೀಡಬೇಕು. ರೈತರ ಮೇಲೆ ದಾಖಲಾಗಿರುವ ಮೊಕದ್ದಮೆಗಳನ್ನು ವಾಪಸ್‌ ಪಡೆಯಬೇಕು. ರಾಜ್ಯದಲ್ಲಿ ಜಾರಿ ಮಾಡಿರುವ ಎಪಿಎಂಸಿ ಕಾಯ್ದೆಯನ್ನು ವಾಪಸ್‌ ಪಡೆಯಬೇಕು ಎಂಬುದು ಸೇರಿದಂತೆ ಹಲವು ಬೇಡಿಕೆ ಈಡೇರಿಸಲು ಆಗ್ರಹಿಸಿ ಹೋರಾಟ ಮುಂದುವರೆಸಲಾಗುವುದು ಎಂದು ವಿವರಿಸಿದರು.

ದುಂಡು ಮೇಜಿನ ಅಧಿವೇಶನದಲ್ಲಿ ಪಂಜಾಬ್‌ನ ಜಗಜೀತಸಿಂಗ್‌ ದಲ್ಲೇವಾಲ, ಮಧ್ಯಪ್ರದೇಶದ ಶಿವಕುಮಾರ ಕಕ್ಕಾಜಿ, ತಮಿಳುನಾಡಿನ ದೈವಸಿಗಾಮಣಿ, ಕೇರಳದ ಕೆ.ವಿ.ಬಿಜು, ಹರಿಯಾಣದ ಅಭಿಮನ್ಯುಕೊಹಾರ, ಬಲದೇವಸಿಂಗ್‌ ಸಿರ್ಸಾ, ತಮಿಳುನಾಡಿನ ರಾಮನ ಗೌಂಡರ್‌, ಉತ್ತರ ಪ್ರದೇಶದ ಸೇವಾಸಿಂಗ್‌, ಒರಿಸ್ಸಾದ ಸಚಿನ್‌ ಮಹಾಪಾತ್ರ, ಮಹಾರಾಷ್ಟ್ರದ ಶಂಕರ ಧರೀಕರ್‌, ಗುಜರಾತ್‌ನ ಜೆ.ಕೆ.ಪಟೇಲ್‌, ತೆಲಂಗಾಣದ ವೆಂಕಟೇಶ್ವರ, ಕರ್ನಾಟಕ ರಾಜ್ಯ ರೈತ ಸಂಘದ ನಾರಾಯಣ ರೆಡ್ಡಿ ಸೇರಿದಂತೆ ವಿವಿಧ ರಾಜ್ಯಗಳಿಂದ ಆಗಮಿಸಿದ್ದ ನೂರಕ್ಕೂ ಅಧಿಕ ರೈತರು ಪಾಲ್ಗೊಂಡಿದ್ದರು.

 

ಗದಗ: ಕಬ್ಬಿನ ದರ ನಿಗದಿಗಾಗಿ 26ರಂದು ರೈತರಿಂದ ವಿಧಾನಸೌಧ ಚಲೋ

ಇಂದು ವಿಧಾನಸೌಧ ಚಲೋ: ರೈತರ ಪಂಪ್‌ಸೆಟ್‌ಗಳಿಗೆ ಮೀಟರ್‌ ಅಳವಡಿಸಬಾರದು, ರೈತರ ಸಾಲ ಮನ್ನಾ ಮಾಡಬೇಕು ಎಂಬುದು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸೆ.26 ರಂದು ವಿಧಾನಸೌಧ ಚಲೋ ಹಮ್ಮಿಕೊಳ್ಳಲಾಗಿದೆ ಎಂದು ಕುರುಬೂರು ಶಾಂತಕುಮಾರ್‌ ತಿಳಿಸಿದರು. ರಾಜ್ಯದ ಹಲವು ಭಾಗಗಳಿಂದ ಆಗಮಿಸುವ ಅಪಾರ ಸಂಖ್ಯೆಯ ರೈತರು ಬೆಳಿಗ್ಗೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ಜಮಾಯಿಸಿ ಪ್ರತಿಭಟನೆ ನಡೆಸಲಿದ್ದಾರೆ. ಬಳಿಕ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಾಗುವುದು ಎಂದರು.

Latest Videos
Follow Us:
Download App:
  • android
  • ios