ಗದಗ ಜಿಲ್ಲೆಯಲ್ಲಿ, ಬಡತನ ಮತ್ತು ತಂದೆಯ ಅನಾರೋಗ್ಯದ ಕಾರಣ: ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬಿಟ್ಟು ಕೂಲಿ ಕೆಲಸಕ್ಕೆ ಹೋಗಿದ್ದ ವಿದ್ಯಾರ್ಥಿನಿಯನ್ನು ಕರೆದುಕೊಂಡು ಬಂದು ಮತ್ತೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಸಿದಂತಹ ಘಟನೆ ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಬರದೂರು ಗ್ರಾಮದಲ್ಲಿ ನಡೆದಿದೆ.

ಪರೀಕ್ಷೆ ಬಿಟ್ಟು ಕೂಲಿಗೆ ಹೋದ ವಿದ್ಯಾರ್ಥಿನಿ

ಗದಗ: ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬಿಟ್ಟು ಕೂಲಿ ಕೆಲಸಕ್ಕೆ ಹೋಗಿದ್ದ ವಿದ್ಯಾರ್ಥಿನಿಯನ್ನು ಕರೆದುಕೊಂಡು ಬಂದು ಮತ್ತೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಸಿದಂತಹ ಘಟನೆ ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಬರದೂರು ಗ್ರಾಮದಲ್ಲಿ ನಡೆದಿದೆ. ಬಾಲಕಿಯ ತಂದೆ ಅನಾರೋಗ್ಯ ಪೀಡಿತರಾಗಿದ್ದರು. ಮನೆಯಲ್ಲಿ ಬಡತನವೂ ತುಂಬಿ ತುಳುಕಾಡುತ್ತಿತ್ತು. ಈ ಹಿನ್ನೆಲೆ ಬಾಲಕಿ ಪರೀಕ್ಷೆ ತೊರೆದು ಕೂಲಿ ಕೆಲಸಕ್ಕೆಂದು ದ್ರಾಕ್ಷಿ ತೋಟದಲ್ಲಿ ಕೆಲಸಕ್ಕೆ ಹೋಗಿದ್ದಳು. ಆದರೆ ಈ ವಿಚಾರ ತಿಳಿದ ಸರ್ಕಾರಿ ಶಿಕ್ಷಣ ಇಲಾಖೆ ಅಧಿಕಾರಿಗಳು ಆಕೆಯನ್ನು ವಾಪಸ್ ಕರೆಸಿ ಆಕೆಗೆ ಮರು ಪರೀಕ್ಷೆ ಮಾಡಿದ್ದಾರೆ.

Add Asianetnews Kannada as a Preferred SourcegooglePreferred

ಎಸ್‌ಎಸ್‌ಎಲ್‌ಸಿ ವಿಜ್ಞಾನ ಪರೀಕ್ಷೆಯನ್ನು ಬಿಟ್ಟು ಬಾಲಕಿ ಕೂಲಿ ಕೆಲಸಕ್ಕೆ

ಎಸ್‌ಎಸ್‌ಎಲ್‌ಸಿ ವಿಜ್ಞಾನ ಪರೀಕ್ಷೆಯನ್ನು ಬಿಟ್ಟು ಬಾಲಕಿ ಕೂಲಿ ಕೆಲಸಕ್ಕೆ ಹೋಗಿದ್ದಳು. ಬಾಲಕಿಯನ್ನುಪಲ್ಲವಿ ಹಳ್ಳಿಕೇರಿ ಎಂದು ಗುರುತಿಸಲಾಗಿದ್ದು, ಈಕೆ ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಪೇಠಾಲೂರು ಗ್ರಾಮದ ವಿದ್ಯಾರ್ಥಿನಿಯಾಗಿದ್ದು, ಮುಂಡರಗಿ ತಾಲೂಕಿನ ಬರದೂರು ಗ್ರಾಮದ ಸರಕಾರಿ ಪ್ರೌಢ ಶಾಲೆಯಲ್ಲಿ ಎಸ್ ಎಸ್ ಎಲ್ ಸಿ ಓದುತ್ತಿದ್ದಳು. 

ಇದನ್ನೂ ಓದಿ: ಜಮೀನಿನಲ್ಲಿ ನೀರು ಕುಡಿದ ವಿಚಾರಕ್ಕೆ ಎರಡು ಸಮುದಾಯಗಳ ಮಧ್ಯೆ ಗಲಾಟೆ: ಕಲ್ಲು ತೂರಾಟ..

ಆದರೆ ಮನೆಯಲ್ಲಿದ್ದ ದುಸ್ಥಿತಿ ನೆನೆದು ಆಕೆ ಪರೀಕ್ಷೆ ಬಿಟ್ಟು ಕೂಲಿ ಕೆಲಸಕ್ಕೆ ಹೋಗಿದ್ದಳು. ಈ ವಿಚಾರ ಕ್ಷೇತ್ರ ಶಿಕ್ಷಾಧಿಕಾರಿ ಗಂಗಾಧರ ಅಣ್ಣಿಗೇರಿ ಅವರ ಗಮನಕ್ಕೆ ಬರುತ್ತಿದ್ದಂತೆ ಹುಡುಗಿಯನ್ನು ವಾಪಸ್ ಕರೆಸಿದ ಅವರು ಮುಂಡರಗಿ ಪಟ್ಟಣದ ವಿಜಿ ಲಿಂಬಿಕಾಯಿ ಶಿಕ್ಷಣ ಸಂಸ್ಥೆಯ ಪರೀಕ್ಷಾ ಕೇಂದ್ರದಲ್ಲಿ ಆಕೆಗೆ ಪರೀಕ್ಷೆ ಬರೆಸಿದ್ದಾರೆ. ವಿದ್ಯಾರ್ಥಿನಿ ಮನವೊಲಿಸಿ ವಿಜ್ಞಾನ ಪರೀಕ್ಷೆ ಬರೆಸಿದ ಕ್ಷೇತ್ರ ಶಿಕ್ಷಾಧಿಕಾರಿ ಗಂಗಾಧರ ಅಣ್ಣಿಗೇರಿ ಅವರ ಕಾರ್ಯಕ್ಕೆ ಈಗ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗ್ತಿದೆ.

ಇದನ್ನೂ ಓದಿ: ತುತ್ತು ಅನ್ನಕ್ಕಾಗಿ ಸುರಿಯುವ ಮಳೆ ಲೆಕ್ಕಿಸದೇ ಚಳಿಯಲ್ಲೇ ನಡುಗುತ್ತಾ ಸಾಲುಗಟ್ಟಿ ನಿಂತ ಪುಟ್ಟ ಪುಟ್ಟ ಮಕ್ಕಳು