Asianet Suvarna News Asianet Suvarna News

ಗಣೇಶ ಹಬ್ಬದ ಪ್ರಯುಕ್ತ ಕೋಟ್ಯಂತರ ರೂ ಮೌಲ್ಯದ ನೋಟುಗಳಿಂದ ಗಣಪತಿಗೆ ವಿಶೇಷ ಅಲಂಕಾರ!

ಪ್ರತಿ ವರ್ಷ ಗಣೇಶ ಹಬ್ಬದ ಪ್ರಯುಕ್ತ ಒಂದಿಲ್ಲೊಂದು ಹೊಸತನದ ಕಾರ್ಯಕ್ರಮ ಹಮ್ಮಿಕೊಳ್ಳುವ ಜೆಪಿ ನಗರದ ಶ್ರೀ ಸತ್ಯಗಣಪತಿ ಶಿರಡಿ ಸಾಯಿ ಟ್ರಸ್ಟ್ ನಿಂದ ಈ ಬಾರಿ ಗಣೇಶೋತ್ಸವವನ್ನು ನಾಣ್ಯ ಮತ್ತು ನೋಟುಗಳಿಂದ ಅಲಂಕರಿಸಿ ವೈಭವದಿಂದ ವಿಭಿನ್ನವಾಗಿ ಆಚರಿಸಲಾಗುತ್ತಿದೆ. 

Ganesh chaturthi special special decoration for Ganapati with notes worth crores of rupees at jp nagar bengaluru rav
Author
First Published Sep 14, 2023, 4:34 PM IST

ಬೆಂಗಳೂರು (ಸೆ.14): ಪ್ರತಿ ವರ್ಷ ಗಣೇಶ ಹಬ್ಬದ ಪ್ರಯುಕ್ತ ಒಂದಿಲ್ಲೊಂದು ಹೊಸತನದ ಕಾರ್ಯಕ್ರಮ ಹಮ್ಮಿಕೊಳ್ಳುವ ಜೆಪಿ ನಗರದ ಶ್ರೀ ಸತ್ಯಗಣಪತಿ ಶಿರಡಿ ಸಾಯಿ ಟ್ರಸ್ಟ್ ನಿಂದ ಈ ಬಾರಿ ಗಣೇಶೋತ್ಸವವನ್ನು ನಾಣ್ಯ ಮತ್ತು ನೋಟುಗಳಿಂದ ಅಲಂಕರಿಸಿ ವೈಭವದಿಂದ ವಿಭಿನ್ನವಾಗಿ ಆಚರಿಸಲಾಗುತ್ತಿದೆ. 

ಗುರುಪೂರ್ಣಿಮೆಯಂದು ಶಿರಡಿ ಸಾಯಿ ಬಾಬಾ(Shiradi saibaba)ರನ್ನು  ತೆಂಗಿನ ಕಾಯಿ, ಬಾದಾಮಿ, ಖರ್ಜೂರ, ಹಣ್ಣುಗಳಿಂದ ಸಿಂಗರಿಸಿ ಗಮನ ಸೆಳೆದಿದ್ದ ಟ್ರಸ್ಟ್‌, ಈ ಬಾರಿ ಗಣೇಶೋತ್ಸ(Ganeshotsav)ಕ್ಕೆ ಲಕ್ಷ್ಮಿ ಕಟಾಕ್ಷದ ಸ್ಪರ್ಷ ನೀಡುತ್ತಿದೆ.

ಹೊಸಪೇಟೆಯ ಅಂಬಾಭವಾನಿ ದೇವಿಗೆ ಗರಿಗರಿ ನೋಟಿನ ಅಲಂಕಾರ; ಇಲ್ಲಿವೆ ನೋಡಿ ಫೋಟೊ!

ಐವತ್ತು ಲಕ್ಷ ರೂಪಾಯಿ ಮೊತ್ತದ ನಾಣ್ಯಗಳು, ಕೋಟ್ಯಂತರ ರೂಪಾಯಿ ಮೌಲ್ಯದ ನೋಟುಗಳಿಂದ ಅಲಂಕರಿಸುವ ಪ್ರಕ್ರಿಯೆ ಒಂದು ವಾರದ ಹಿಂದೆಯೇ ಆರಂಭವಾಗಿದೆ. 150 ಕ್ಕೂ ಹೆಚ್ಚು ಜನರ ತಂಡ ಹಬ್ಬಕ್ಕೂ ಹದಿನೈದು ದಿನಗಳ ಹಿಂದಿನಿಂದಲೇ ನೋಟುಗಳ ಅಲಂಕಾರದಲ್ಲಿ ನಿರತವಾಗಿದೆ. ವಿಕ್ರಂ ಲ್ಯಾಂಡರ್‌(Vikram lander), ಚಂದ್ರಯಾನ - 3 (Chandrayan 3), ಜೈ ಕರ್ನಾಟಕ, ಜೈ ಜವಾನ್‌ ಜೈ ಕಿಸಾನ್‌, ಮೇರಾ ಭಾರತ್‌ ಮಹಾನ್‌ ಥೀಮ್‌ ಅಳವಡಿಸಿಕೊಂಡಿದ್ದು  ಎಲ್ಲರ ಗಮನ ಸೆಳೆಯಲು ಸಿದ್ಧವಾಗುತ್ತಿವೆ.

ಶ್ರೀ ಸತ್ಯಗಣಪತಿ ಶಿರಡಿ ಸಾಯಿ ಟ್ರಸ್ಟ್ ನ ಟ್ರಸ್ಟಿ ರಾಮಮೋಹನ್‌ ರಾಜ್‌ ಮಾತನಾಡಿ, ಐದು, ಹತ್ತು, ಇಪ್ಪತ್ತು ರೂಪಾಯಿ ಮೊತ್ತದ ತಲಾ ಒಂದೂವರೆ ಲಕ್ಷ ನಾಣ್ಯಗಳು, ಐದು, ಹತ್ತು, ಇಪ್ಪತ್ತು, 100, 500 ರೂ ಮೊತ್ತದ ನೋಟುಗಳಿಂದ ಗಣೇಶ ಮೂರ್ತಿಯನ್ನು ಸಿಂಗರಿಸಲಾಗುತ್ತಿದೆ. ನೋಟುಗಳ ಮೌಲ್ಯ ಇನ್ನೂ ನಿಗದಿ ಮಾಡಿಲ್ಲ. ಭಕ್ತಾದಿಗಳು ಗಣೇಶನ ಅಲಂಕಾರಕ್ಕಾಗಿ ಲಕ್ಷಾಂತರ ರೂ ಮೊತ್ತದ ನೋಟುಗಳನ್ನು ಪ್ರತಿನಿತ್ಯ ಕಾಣಿಕೆಯಾಗಿ ನೀಡುತ್ತಿದ್ದಾರೆ. ಹಬ್ಬದ ವೇಳೆಗೆ ನೋಟುಗಳ ಮೌಲ್ಯ ತಿಳಿಯಲಿದೆ ಎಂದರು.

ಆನೆ ಮುಖದ ಗಣಪನ ಜನನವೇ ಗಣೇಶ ಚತುರ್ಥಿ: ಮಹತ್ವ ತಿಳಿದು ಹಬ್ಬ ಮಾಡಿ

ಸೆಪ್ಟಂಬರ್ 18 ರಂದು ಬೆಳಿಗ್ಗೆಯಿಂದ ವಿಶೇಷ ಪೂಜೆಯನ್ನು ಆಯೋಜಿಸಲಾಗಿದ್ದು, ಎಲ್ಲರೂ ದೇವರ ದರ್ಶನ ಪಡೆಯಬಹುದಾಗಿದೆ

Follow Us:
Download App:
  • android
  • ios