Asianet Suvarna News Asianet Suvarna News

ಸೋನಿಯಾಗೆ ತಲೆಬಾಗದ್ದಕ್ಕೆ ಜೈಲಿಗೆ ಹೋಗಬೇಕಾಯ್ತು: ರೆಡ್ಡಿ

ರಾಜಕೀಯ ಸ್ವಾರ್ಥ, ಮುಖ್ಯಮಂತ್ರಿಯಾಗುವ ಆಸೆಯಿಂದ ಸಿದ್ದರಾಮಯ್ಯ ಬಳ್ಳಾರಿಗೆ ಪಾದಯಾತ್ರೆ ಮಾಡಿ ಅಧಿಕಾರ ಪಡೆದರು. ಅವರಿಗೂ ಗೊತ್ತು, ನಾನು ಏನೂ ತಪ್ಪು ಮಾಡಿಲ್ಲ ಎಂದು. ನಾನು ಕಾಂಗ್ರೆಸ್‌ ಅಧಿನಾಯಕಿ ಸೋನಿಯಾ ಗಾಂಧಿಗೆ ತಲೆಬಾಗಲಿಲ್ಲ ಎಂಬ ಕಾರಣಕ್ಕೆ ಜೈಲಿಗೆ ಹೋಗಬೇಕಾಯಿತು ಎಂದು ಶಾಸಕ ಗಾಲಿ ಜನಾರ್ದನ ರೆಡ್ಡಿ ಹೇಳಿದರು.

Gangavati MLA Janardana Reddy statement about Sonia Gandhi at gangavati rav
Author
First Published Dec 1, 2023, 6:44 AM IST

ಗಂಗಾವತಿ(ಕೊಪ್ಪಳ) (ಡಿ.1) :  ರಾಜಕೀಯ ಸ್ವಾರ್ಥ, ಮುಖ್ಯಮಂತ್ರಿಯಾಗುವ ಆಸೆಯಿಂದ ಸಿದ್ದರಾಮಯ್ಯ ಬಳ್ಳಾರಿಗೆ ಪಾದಯಾತ್ರೆ ಮಾಡಿ ಅಧಿಕಾರ ಪಡೆದರು. ಅವರಿಗೂ ಗೊತ್ತು, ನಾನು ಏನೂ ತಪ್ಪು ಮಾಡಿಲ್ಲ ಎಂದು. ನಾನು ಕಾಂಗ್ರೆಸ್‌ ಅಧಿನಾಯಕಿ ಸೋನಿಯಾ ಗಾಂಧಿಗೆ ತಲೆಬಾಗಲಿಲ್ಲ ಎಂಬ ಕಾರಣಕ್ಕೆ ಜೈಲಿಗೆ ಹೋಗಬೇಕಾಯಿತು ಎಂದು ಶಾಸಕ ಗಾಲಿ ಜನಾರ್ದನ ರೆಡ್ಡಿ ಹೇಳಿದರು.

ಕನಕದಾಸರ ಜಯಂತಿಯಲ್ಲಿ ಮಾತನಾಡಿದ ಅವರು, ನನ್ನಿಂದ ಉಪಕಾರ ಪಡೆದು ರಾಜ್ಯ ಮತ್ತು ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ಬಿಜೆಪಿ ಹೈಕಮಾಂಡ್ ಹಾಗೂ ಕೆಲ ವ್ಯಕ್ತಿಗಳು ನನ್ನ ವಿರುದ್ಧ ರಾಜ್ಯ ಸರ್ಕಾರ ದಾಖಲಿಸಿದ್ದ ಕೇಸ್‌ಗಳನ್ನು ವಾಪಸ್ ಪಡೆಯಲಿಲ್ಲ. ಪ್ರಸ್ತುತ ಉಪ ಮುಖ್ಯಮಂತ್ರಿ ಆಗಿರುವ ಡಿ.ಕೆ.ಶಿವಕುಮಾರ್‌ ಕಾಂಗ್ರೆಸ್ ಪಕ್ಷಕ್ಕಾಗಿ ದುಡಿದು ನಿಷ್ಠರಾಗಿದ್ದಾರೆ. ಅವರ ಮೇಲಿನ ಕೇಸ್‌ಗಳನ್ನು ಸರ್ಕಾರ ವಾಪಸ್ ಪಡೆದಿದೆ. ಕಾಂಗ್ರೆಸ್‌ ಗಾಗಿ ದುಡಿದ ವ್ಯಕ್ತಿಗೆ ನೀಡಿದ ಗೌರವ ಇದಾಗಿದೆ. ಈ ಬುದ್ಧಿ ಆಗ ನಮ್ಮ ಬಿಜೆಪಿಯವರಿಗೆ ಬರಲಿಲ್ಲ. ನಾನು ಜೈಲಿಗೆ ಹೋಗುವುದು ಅವರಿಗೆ ಬೇಕಿತ್ತು ಎಂದು ಬೇಸರ ವ್ಯಕ್ತಪಡಿಸಿದರು.

ಕೊನೆ ಉಸಿರು ಇರುವವರೆಗೂ ಕೆಆರ್‌ಪಿಪಿಯಲ್ಲಿರುವೆ: ಶಾಸಕ ಜನಾರ್ದನ ರೆಡ್ಡಿ

Follow Us:
Download App:
  • android
  • ios