Asianet Suvarna News Asianet Suvarna News

ಎಂ.ಎಂ.ಕಲ್ಬುರ್ಗಿ ಮತ್ತು ಗೌರಿ ಲಂಕೇಶ್ ಪ್ರಕರಣ ವಿಚಾರಣೆಗೆ ವಿಶೇಷ ಕೋರ್ಟ್!

ಸಂಶೋಧಕ ಎಂ.ಎಂ. ಕಲಬುರ್ಗಿ ಹಾಗೂ ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯಾ ಪ್ರಕರಣಗಳ ತ್ವರಿತ ವಿಚಾರಣೆಗೆ ರಾಜ್ಯದಲ್ಲಿ ವಿಶೇಷ ಕೋರ್ಟ್  ಸ್ಥಾಪನೆಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

Gauri Lankesh and MM Kalburgi murder cases set up special court sat
Author
First Published Dec 6, 2023, 12:44 PM IST

ಬೆಳಗಾವಿ (ಡಿ.06): ರಾಜ್ಯದಲ್ಲಿ ಸಂಶೋಧಕ ಎಂ.ಎಂ. ಕಲಬುರ್ಗಿ ಹಾಗೂ ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯಾ ಪ್ರಕರಣಗಳ ತ್ವರಿತ ವಿಚಾರಣೆಗೆ ರಾಜ್ಯದಲ್ಲಿ ವಿಶೇಷ ಕೋರ್ಟ್  ಸ್ಥಾಪನೆಗೆ ರಾಜ್ಯ ಸರ್ಕಾರ ತೀರ್ಮಾನಿಸಿದೆ. ಈ ಬಗ್ಗೆ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಅಧಿಕಾರಿಗಳೊಂದಿಗೆ ಚರ್ಚೆ ಮಾಡಿ ಆದೇಶವನ್ನು ಹೊರಡಿಸಿದ್ದಾರೆ.

ಹೌದು, ಇಡೀ ರಾಜ್ಯದಲ್ಲಿ ಬಲಪಂಥೀಯ ಹೇಳಿಕೆಗಳನ್ನು ವಿರೋಧಿಸುತ್ತಾ ತಮ್ಮದೇ ಸಾಮಾಜಿಕ ಹೋರಾಟಗಳನ್ನು ಮಾಡುತ್ತಿದ್ದ ಪತ್ರಕರ್ತೆ ಗೌರಿ ಲಂಕೇಶ್ ಹಾಗೂ ಕನ್ನಡ ಸಾಹಿತ್ಯ ಸಂಶೋಧಕ ಎಂ.ಎಂ. ಕಲಬುರ್ಗಿ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಇನ್ನು ಹತ್ಯೆ ಮಾಡಿದ ಆರೋಪಿಗಳನ್ನು ಪೊಲೀಸರು ಬಂಧಿಸಲಾಗಿದ್ದರೂ, ಹತ್ಯೆಗೆ ಯಾರು ಸುಪಾರಿ ಕೊಟ್ಟಿದ್ದು ಯಾವ ಉದ್ದೇಶಕ್ಕಾಗಿ ಕೊಲೆ ಮಾಡಲಾಗಿದೆ ಎಂಬುದರ ಬಗ್ಗೆ ಪೂರ್ಣ ಮಾಹಿತಿ ಲಭ್ಯವಾಗಿಲ್ಲ. ಹಲವು ವರ್ಷಗಳಿಂದ ಈ ಪ್ರಕರಣಗಳು ನಿಧಾನಗತಿಯಲ್ಲಿ ವಿಚಾರಣೆ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಎರಡು ಪ್ರಕರಣಗಳ ತ್ವರಿತ ವಿಚಾರಣೆಗೆ ವಿಶೇಷ ನ್ಯಾಯಾಲಯ ರಚಿಸಲು ಸರ್ಕಾರ ಆದೇಶ ಹೊರಡಿಸಿದೆ.

'ನಾನು ನಂದಿನಿ ತಿರುಪತಿಗೆ ಬರ್ತೀನಿ..' ಎಂದ ಕೆಎಂಎಫ್‌, ನೋ ವೇ ಚಾನ್ಸೇ ಇಲ್ಲ ಎಂದ ತಿಮ್ಮಪ್ಪ!

ಡಾ. ಎಂ.ಎಂ. ಕಲಬುರ್ಗಿ, ಹಿರಿಯ ಸಾಹಿತಿ ಹಾಗೂ ಕನ್ನಡ ಸಂಶೋಧನಾ ಕ್ಷೇತ್ರದ ದಿಗ್ಗಜರು ದಿನಾಂಕ: 31.08.2015 ರಂದು ಧಾರವಾಡದ ಅವರ ಸ್ವಗೃಹದಲ್ಲಿ ಹತ್ಯೆಯಾಗಿ ಏಳು ವರ್ಷಗಳು ಪೂರ್ಣಗೊಂಡಿವೆ. ಪ್ರಕರಣದ ಸಂಬಂಧ 2018-1950 ನ್ಯಾಯಾಲಯಕ್ಕೆ ಚಾರ್ಜ್‌ ಶೀಟ್ ಸಲ್ಲಿಕೆಯಾಗಿದ್ದು, ಮೃತರ ಕುಟುಂಬದವರ ವಿಚಾರಣೆಗಳು ಪೂರ್ಣಗೊಂಡಿದ್ದರೂ ನ್ಯಾಯಾಲಯದಲ್ಲಿ ವಿಚಾರಣೆಗಳು ಮುಂದುವರೆದಿವೆ. ಈಗಾಗಲೇ ಸಾಕಷ್ಟು ಸಮಯ ಆಗಿರುವುದರಿಂದ ವಿಶೇಷ ನ್ಯಾಯಾಲಯ ರಚಿಸುವಂತೆ ಮೃತರ ಪತ್ನಿ ಶ್ರೀಮತಿ ಉಮಾದೇವಿ ಎಂ. ಕಲಬುರ್ಗಿ ರವರು ಕೋರಿದ್ದು, ಈ ಬಗ್ಗೆ ಜರೂರು ಅಗತ್ಯ ಕ್ರಮವಹಿಸಲು ಸೂಚಿಸಿದೆ.

ಸರ್ಕಾರ ಉಪ್ಪೂ ಕೊಡದಷ್ಟು ಪಾಪರ್‌ ಆಗಿದೆಯಾ?: ಸಿದ್ದು ಸರ್ಕಾರದ ವಿರುದ್ಧ ಹರಿಹಾಯ್ದ ಅಶೋಕ್‌

ಖ್ಯಾತ ಪತ್ರಕರ್ತೆ ಹಾಗೂ ಸಾಮಾಜಿಕ ಕಾರ್ಯಕರ್ತೆಯಾಗಿದ್ದ ಗೌರಿ ಲಂಕೇಶ್ ರವರು ಸೆಪ್ಟೆಂಬರ್ 05, 2017 ರಂದು ಹತ್ಯೆಗೀಡಾಗಿದ್ದು, ಈ ಸಂಬಂಧ ವಿಶೇಷ ತನಿಖಾ ದಳ ರಚಿಸಲಾಗಿದೆ. ಇದುವರೆಗೂ 18 ಆರೋಪಿಗಳು ಬಂಧನಕ್ಕೊಳಗಾಗಿದ್ದು, 1200 ಪುರಾವೆ ಹಾಗೂ 500 ಕ್ಕೂ ವಿವಿಧ ಬಗೆಯ ಸಾಕ್ಷ್ಯಗಳನ್ನೊಳಗೊಂಡ ಚಾರ್ಜ್‌ ಶೀಟ್‌ನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ. ಪ್ರಕರಣದ ವಿಚಾರಣೆಯು ನ್ಯಾಯಾಲಯದಲ್ಲಿ ಜುಲೈ, 2022 ರಿಂದ ಪ್ರಾರಂಭಗೊಂಡಿದ್ದು, ನ್ಯಾಯಾಲಯದ ಅನುದಿನದ ಪ್ರಕರಣಗಳು ಸಾಕಷ್ಟು ಸಂಖ್ಯೆಯಲ್ಲಿ ಇರುವುದರಿಂದ ವಿಚಾರಣೆಯು ನಿಧಾನಗತಿಯಲ್ಲಿ ಸಾಗಿದೆ. ಆದ್ದರಿಂದ, ಈ ಪ್ರಕರಣದ ವಿಚಾರಣೆಗೆ ವಿಶೇಷ ನ್ಯಾಯಾಲಯ ರಚಿಸಿ, ಪೂರ್ಣಾವಧಿ ನ್ಯಾಯಾಧೀಶರನ್ನು ನೇಮಕ ಮಾಡುವಂತೆ ಮೃತರ ಸಹೋದರಿ ಕವಿತಾ ಲಂಕೇಶ್ ರವರು ಕೋರಿದ್ದು. ಈ ಬಗ್ಗೆ ಜರೂರು ಅಗತ್ಯ ಕ್ರಮವಹಿಸಲು ಸೂಚಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ.

Gauri Lankesh and MM Kalburgi murder cases set up special court sat

ಪತ್ರಕರ್ತೆ ಗೌರಿ ಲಂಕೇಶ್ ಮತ್ತು ಹಿರಿಯ ಸಾಹಿತಿ ಎಂ.ಎಂ. ಕಲಬುರ್ಗಿ ಹತ್ಯೆ ಪ್ರಕರಣದ ವಿಚಾರಣೆಗೆ ವಿಶೇಷ ನ್ಯಾಯಾಲಯ ರಚಿಸಲು ಮತ್ತು ಪೂರ್ಣಾವಧಿ ನ್ಯಾಯಾಧೀಶರನ್ನ ನೇಮಿಸಲು ಸಿಎಂ ಸಿದ್ದರಾಮಯ್ಯ ಅವರು ಸರ್ಕಾರದ ಒಳಾಡಳಿತ ಇಲಾಖೆಯ ಎಸಿಎಸ್ ಗೆ ಸೂಚನೆ ನೀಡಿದ್ದಾರೆ. ಈಗ ಎರಡೂ ಪ್ರಕರಣಗಳ ವಿಚಾರಣೆ ಶೀಘ್ರವೇ ಅಂತಿಮ ಹಂತಕ್ಕೆ ತಲುಪಲಿದ್ದು, ಆರೋಪಿಗಳಿಗೆ ಶಿಕ್ಷೆಯಾಗಲಿದೆ. 

Gauri Lankesh and MM Kalburgi murder cases set up special court sat

Follow Us:
Download App:
  • android
  • ios