ವಕೀಲ ಕೆ.ವಿ. ಪ್ರವೀಣ್, ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಮಹಿಳೆಯರಂತೆ ಪುರುಷರಿಗೂ ಶಕ್ತಿ ಯೋಜನೆಯಡಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡುವಂತೆ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಸಂವಿಧಾನದ 14ನೇ ವಿಧಿ ಉಲ್ಲಂಘನೆಯಾಗುತ್ತಿದೆ ಎಂದು ಅವರು ವಾದಿಸಿದ್ದಾರೆ. ಇಲ್ಲದಿದ್ದರೆ ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸುವುದಾಗಿ ಎಚ್ಚರಿಸಿದ್ದಾರೆ. ಶಕ್ತಿ ಯೋಜನೆಯಿಂದ ಸಾರಿಗೆ ಇಲಾಖೆಗೆ ನಷ್ಟವಾಗುತ್ತಿದ್ದು, ಸರ್ಕಾರವೇ ಈ ಯೋಜನೆಯನ್ನು ನಿಲ್ಲಿಸಲು ಪ್ರಯತ್ನಿಸುತ್ತಿದೆಯೇ ಎಂಬ ಅನುಮಾನ ವ್ಯಕ್ತವಾಗಿದೆ.
ಶಿವಮೊಗ್ಗ (ಮಾ.14): ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಸಾಮಾನ್ಯ ಬಸ್‌ಗಳಲ್ಲಿ ಮಹಿಳೆಯರಂತೆ ಪುರುಷರಿಗೂ ಉಚಿತವಾಗಿ ಓಡಾಡುವ ಶಕ್ತಿ ಯೋಜನೆಯನ್ನು ಜಾರಿಗೊಳಿಸುವಂತೆ ವಕೀಲ ಕೆ.ವಿ ಪ್ರವೀಣ್ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಸಾರಿಗೆ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಪತ್ರ ಬರೆಯುವ ಮೂಲಕ ಒತ್ತಾಯಿಸಿದ್ದಾರೆ.
ಕರ್ನಾಟಕ ಸರ್ಕಾರವು ಸರ್ಕಾರಿ ಸ್ವಾಮ್ಯದ ಕೆ.ಎಸ್.ಆರ್.ಟಿ.ಸಿ ಮತ್ತು ಬಿ.ಎಂ.ಟಿ.ಸಿ ಸಾಮಾನ್ಯ ಬಸ್ಸುಗಳಲ್ಲಿ ಮಹಿಳೆಯರಿಗೆ ಶಕ್ತಿ ಯೋಜನೆ ಎಂಬ ಯೋಜನಡೆಯಡಿ ರಾಜ್ಯದಂತ ಉಚಿತವಾಗಿ ಪ್ರಯಾಣ ಮಾಡಲು ಅವಕಾಶ ಮಾಡಿಕೊಟ್ಟಿರುತ್ತೀರಿ. ಇದು ಸ್ವಾಗತರ್ಹವಾಗಿದೆ. ಆದರೆ, ಭಾರತ ಸಂವಿಧಾನದ 14 ನೇ ವಿಧಿಯ ಪ್ರಕಾರ ಲಿಂಗ ತಾರತಮ್ಯವಾಗಿರುತ್ತದೆ. ಇದು ಯಾವ ಮಾನದಂಡವು ಇಲ್ಲದೆ ಮಹಿಳೆ ಎಂಬ ಮಾತ್ರಕ್ಕೆ ಯೋಜನೆಯನ್ನು ನೀಡಿ ಪುರಷರನ್ನು ಕಡೆಗಣಿಸಲಾಗಿದೆ ಎಂದು ಉಲ್ಲೇಖ ಮಾಡಿದ್ದಾರೆ.
ಈಗಾಗಲೇ ರಾಜ್ಯ ಸರ್ಕಾರವು ತನ್ನ ಎಲ್ಲಾ ಸಾರಿಗೆ ನಿಗಮಗಳಿಗೆ ಉಲ್ಲೇಖದಂತೆ ಉಚಿತವಾಗಿ ಸಾಮಾನ್ಯ ಸಾರಿಗೆ ಬಸ್‌ಗಳಲ್ಲಿ ಪ್ರಯಾಣಕ್ಕೆ ಅನುವು ಮಾಡಿಕೊಟ್ಟಿದೆ. ಆದರೆ, ಹಣ ಕೊಟ್ಟ ಪುರುಷರು ನಿಂತುಕೊಂಡು ಪ್ರಯಾಣಿಸುವಂತಾಗಿದೆ. ಇದು ನನಗೂ ಕೂಡಾ ಆಗುತ್ತಿರುವ ಅನುಭವವಾಗಿದ್ದು, ಈ ಮೂಲಕ ಸಂವಿಧಾನದ ಮೂಲಭೂತ ಹಕ್ಕಿನ ಉಲ್ಲಂಘನೆಯಾಗಿದೆ. ಆದ್ದರಿಂದ ತಾವುಗಳು ಕೂಡಲೇ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಸಾಮಾನ್ಯ ಬಸ್‌ಗಳಲ್ಲಿ ಮಹಿಳೆಯರಂತೆ ಪುರುಷರಿಗೂ ಉಚಿತವಾಗಿ ಓಡಾಡುವ ಶಕ್ತಿ ಯೋಜನೆಯನ್ನು ಜಾರಿಗೊಳಿಸಬೇಕು ಎಂದು ಒತ್ತಾಯ ಮಾಡಿದ್ದಾರೆ.
ಇದನ್ನೂ ಓದಿ: ಶಕ್ತಿ ಯೋಜನೆಯಿಂದ ಕೋಟಿ ಕೋಟಿ ನಷ್ಟ; ಕೊನೆಗೂ ಒಪ್ಪಿಕೊಂಡ ರಾಜ್ಯ ಸರ್ಕಾರ!
ಒಂದು ವೇಳೆ ರಾಜ್ಯ ಸರ್ಕಾರದಿಂದ ಪುರುಷರಿಗೂ ಸರ್ಕಾರಿ ಸ್ವಾಮ್ಯದ ಸಾರಿಗೆಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಿಕೊಡಲು ಸಾಧ್ಯವಾಗದಿದ್ದಲ್ಲಿ ಸೂಕ್ತ ನ್ಯಾಯಾಲಯದಲ್ಲಿ ನಿಮ್ಮನ್ನು ಪಾರ್ಟಿಯನ್ನಾಗಿ ಮಾಡಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಲಾಗುತ್ತದೆ ಎಚ್ಚರಿಕೆ ನೀಡಿದ್ದಾರೆ.
ಗ್ಯಾರಂಟಿ ನಿಲ್ಲಿಸಲು ದಾಳವಾಯ್ತಾ ಕೇಸ್: ಇನ್ನು ರಾಜ್ಯ ಸರ್ಕಾರಕ್ಕೆ ಹಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿಗೆ ಹಿನ್ನಡೆ ಉಂಟಾಗಿದೆ ಎಂದು ಹೇಳಲಾಗುತ್ತಿದೆ. ಜೊತೆಗೆ, ಸಾರಿಗೆ ಇಲಾಖೆಗೆ ಕೋಟ್ಯಂತರ ರೂ. ನಷ್ಟವಾಗಿದೆ ಎಂದು ಸ್ವತಃ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರೇ ಹೇಳಿಕೊಂಡಿದ್ದಾರೆ. ಇದೀಗ ರಾಜ್ಯ ಸರ್ಕಾರಕ್ಕೆ ಅತಿಹೆಚ್ಚು ಹೊರೆ ಆಗುತ್ತಿರುವ ಶಕ್ತಿ ಯೋಜನೆಯನ್ನು ನಿಲ್ಲಿಸಲು ಸೂಕ್ತ ಕಾರಣವೇ ಇಲ್ಲವಾಗಿದೆ. ಆದ್ದರಿಂದ ಸ್ವತಃ ಸರ್ಕಾರವೇ ವಕೀಲರಿಂದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಅಥವಾ ತಕರಾರು ಅರ್ಜಿಯನ್ನು ಹಾಕಿಸಿ ಈ ಶಕ್ತಿ ಯೋಜನೆಯನ್ನು ನಿಲ್ಲಿಸುವ ಹುನ್ನಾರ ಮಾಡುತ್ತಿದೆ ಎಂಬ ಅನುಮಾನಕ್ಕೂ ದಾರಿ ಮಾಡಿಕೊಟ್ಟಿದೆ.
ಇದನ್ನೂ ಓದಿ: ಗ್ಯಾರೆಂಟಿಯೆಂಬ 'ಬಿಸಿತುಪ್ಪ'! ಟಿಕೆಟ್ ದರ ಏರಿಸಿದ್ರೂ ಸಾಕಾಗ್ತಿಲ್ಲ ದುಡ್ಡು: ಎಷ್ಟೆಷ್ಟು ಕೋಟಿ ಸಾಲ? ಇಲ್ಲಿದೆ ಡಿಟೇಲ್ಸ್
