Asianet Suvarna News Asianet Suvarna News

ಮೇಕೆದಾಟು ಡ್ಯಾಮ್‌ಗೆ ಶೀಘ್ರ ಅನುಮತಿ ಪಡೆಯಿರಿ: ಎಚ್‌ಡಿಕೆ

* ಕೇಂದ್ರವೂ ಪರಿಸರ ಅನುಮತಿ ಶೀಘ್ರ ನೀಡಬೇಕು
* ಯೋಜನೆಗಿದ್ದ ಅಡ್ಡಿ ನಿವಾರಣೆ
* ಸಿಎಂ ಯಡಿಯೂರಪ್ಪ ನೀಡಿದ ಹೇಳಿಕೆ ವಿರೋಧಿಸಿದ ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್‌ 
 

Get Soon Permission to Mekedatu Dam Says HD Kumaraswamy grg
Author
Bengaluru, First Published Jun 20, 2021, 2:27 PM IST

ಬೆಂಗಳೂರು(ಜೂ.20): ಮೇಕೆದಾಟು ಯೋಜನೆ ವಿಚಾರವಾಗಿ ಕೇಂದ್ರದಿಂದ ಶೀಘ್ರವೇ ಅನುಮತಿ ಪಡೆದು ಯೋಜನೆ ಜಾರಿಗೊಳಿಸುವುದರತ್ತ ರಾಜ್ಯ ಸರ್ಕಾರ ಗಮನ ಹರಿಸಬೇಕು ಮತ್ತು ಕೇಂದ್ರವೂ ಪರಿಸರ ಅನುಮತಿಯನ್ನು ಶೀಘ್ರ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಅವರು, ಮೇಕೆದಾಟು ಯೋಜನೆ ಸಂಬಂಧ ಎನ್‌ಜಿಟಿ ದಕ್ಷಿಣ ಪೀಠ ಆರಂಭಿಸಿದ ಸ್ವಯಂಪ್ರೇರಿತ ವಿಚಾರಣೆಯನ್ನು ಪ್ರಧಾನ ಪೀಠ ಇತ್ಯರ್ಥಪಡಿಸಿದೆ. ಯೋಜನೆಗಿದ್ದ ಅಡ್ಡಿಯೊಂದು ನಿವಾರಣೆಯಾಗಿದೆ. ಕೇಂದ್ರ-ರಾಜ್ಯದಲ್ಲಿ ಒಂದೇ ಸರ್ಕಾರ ಇದ್ದರೆ ಸ್ವರ್ಗ ಸೃಷ್ಟಿಯಾಗುವುದಾಗಿ ಬಿಜೆಪಿ ಹೇಳಿತ್ತು. ಸ್ವರ್ಗ ಬೇಡ, ಅನಿಶ್ಚಿತತೆಯಲ್ಲಿ ತೂಗುತ್ತಿರುವ ಮೇಕೆದಾಟು ಯೋಜನೆಗೆ ಪರಿಸರ ಅನುಮತಿಯನ್ನು ಶೀಘ್ರ ಪಡೆದುಕೊಂಡರೆ ಸಾಕು. ನಮ್ಮ ನೆಲ, ಜಲ, ಧನ ಬಳಸಿ ನಮ್ಮವರ ದಾಹ ನೀಗಿಸುವ ಯೋಜನೆ ವಿಚಾರದಲ್ಲಿ ಬಿಜೆಪಿ ಸರ್ಕಾರ ಇನ್ನು ನಿರ್ಲಕ್ಷ್ಯ ತೋರಬಾರದು ಎಂದು ಒತ್ತಾಯಿಸಿದ್ದಾರೆ.

ಮೇಕೆ​ದಾ​ಟು, ಕಾವೇರಿ ಬಗ್ಗೆ ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್‌ ದೂರು

ಕೇಂದ್ರದ ಅನುಮತಿ ಸಿಕ್ಕ ಕೂಡಲೇ ಯೊಜನೆ ಆರಂಭಿಸುವ ಬಗ್ಗೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ನೀಡಿದ ಹೇಳಿಕೆಯನ್ನು ಸೋದರ ಮತ್ತು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್‌ ವಿರೋಧಿಸಿದ್ದಾರೆ. ನ್ಯಾಯಾಲಯದಲ್ಲಿ ವಿಚಾರಣೆಯಾಗುತ್ತಿರುವ ಪ್ರಕರಣವೊಂದರಲ್ಲಿ ಕರ್ನಾಟಕ ಏಕಪಕ್ಷೀಯವಾಗಿ ನಡೆದುಕೊಳ್ಳುತ್ತಿದೆ ಎಂಬುದು ಅವರ ಆರೋಪ. ವಿಚಾರಣೆಯಾಗುತ್ತಿರುವ ಯೋಜನೆಯೊಂದಕ್ಕೆ ತಡೆ ತರಲು ಪ್ರಧಾನಿಯನ್ನು ಭೇಟಿಯಾಗಿದ್ದು ತಪ್ಪಲ್ಲವೇ ಎಂದು ಅವರು ಪ್ರಶ್ನಿಸಿದ್ದಾರೆ.
 

Follow Us:
Download App:
  • android
  • ios