Asianet Suvarna News Asianet Suvarna News

ಬರ ಪರಿಹಾರ ಶೀಘ್ರ ನೀಡಿ: ಅಮಿತ್‌ ಶಾಗೆ ಸಿಎಂ ಪತ್ರ

ತೀವ್ರ ಬರಗಾಲ ಎದುರಿಸುತ್ತಿರುವ ಕರ್ನಾಟಕಕ್ಕೆ ಕೇಂದ್ರದ ಬರ ಅಧ್ಯಯನ ತಂಡ ಆಗಮಿಸಿ, ಅಧ್ಯಯನ ನಡೆಸಿ ತಿಂಗಳಾದರೂ ಇನ್ನೂ ಪರಿಹಾರ ದೊರಕಿಲ್ಲ. ಹೀಗಾಗಿ ತಾವು ಮಧ್ಯಪ್ರವೇಶಿಸಿ ಶೀಘ್ರದಲ್ಲಿ ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆಯಾಗುವಂತೆ ಮಾಡಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

Give Drought Relief Soon Karnataka cm siddaramaiah writes to Union Minister Amit Shah akb
Author
First Published Nov 14, 2023, 8:35 AM IST

ಬೆಂಗಳೂರು: ತೀವ್ರ ಬರಗಾಲ ಎದುರಿಸುತ್ತಿರುವ ಕರ್ನಾಟಕಕ್ಕೆ ಕೇಂದ್ರದ ಬರ ಅಧ್ಯಯನ ತಂಡ ಆಗಮಿಸಿ, ಅಧ್ಯಯನ ನಡೆಸಿ ತಿಂಗಳಾದರೂ ಇನ್ನೂ ಪರಿಹಾರ ದೊರಕಿಲ್ಲ. ಹೀಗಾಗಿ ತಾವು ಮಧ್ಯಪ್ರವೇಶಿಸಿ ಶೀಘ್ರದಲ್ಲಿ ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆಯಾಗುವಂತೆ ಮಾಡಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಈ ಬಗ್ಗೆ ಶಾ ಅವರಿಗೆ ಮಂಗಳವಾರ ಪತ್ರ ಬರೆದಿರುವ ಮುಖ್ಯಮಂತ್ರಿಯವರು ( siddaramaiah), ರಾಜ್ಯದಲ್ಲಿ ಪ್ರಸಕ್ತ ವರ್ಷ ಶೇ.73ರಷ್ಟು ಮಳೆ ಕೊರತೆ ಉಂಟಾಗಿದ್ದು, ಅದರಿಂದಾಗಿ ರಾಜ್ಯದ 223 ತಾಲೂಕುಗಳು ಬರಕ್ಕೆ ತುತ್ತಾಗಿವೆ ಎಂದು ರಾಜ್ಯ ಸರ್ಕಾರ (State Govt) ಘೋಷಿಸಿದೆ. ಅದರಲ್ಲಿ ಸೆ. 22ರಂದು ರಾಜ್ಯ ಸರ್ಕಾರ 195 ತಾಲೂಕುಗಳಲ್ಲಿ ಬರದ ಪರಿಸ್ಥಿತಿಯಿದ್ದು, ಎನ್‌ಡಿಆರ್‌ಎಫ್‌ ನಿಯಮಗಳಂತೆ ಬರ ಪರಿಹಾರ ನೀಡುವಂತೆ ಮನವಿ ಸಲ್ಲಿಸಿತ್ತು. ಇದಾದ ನಂತರ ಮಳೆಯ ಕೊರತೆ ತೀವ್ರಗೊಂಡು ಮತ್ತೆ ಉಳಿದ ತಾಲೂಕುಗಳಲ್ಲೂ ಬರದ ಪರಿಸ್ಥಿತಿ ಎದುರಾಗಿತ್ತು. ಅದರ ಬಗ್ಗೆಯೂ ಕೇಂದ್ರ ಸರ್ಕಾರಕ್ಕೆ ಹೊಸದಾಗಿ ಮನವಿ ಸಲ್ಲಿಸಲಾಗಿತ್ತು ಎಂದಿದ್ದಾರೆ.

ಮೋದಿ Vs ಸಿದ್ದು ಕಾಳಗ: ಸಿದ್ದರಾಮಯ್ಯ ಎಷ್ಟು ದಿನ ಸಿಎಂ ಆಗಿರ್ತಾರೋ ಗೊತ್ತಿಲ್ಲವೆಂದ ಪ್ರಧಾನಿ

ಅದರ ಆಧಾರದಲ್ಲಿ ಕೇಂದ್ರ ಬರ ಅಧ್ಯಯನ ತಂಡವು ರಾಜ್ಯಕ್ಕೆ ಬಂದು ಅಕ್ಟೋಬರ್‌ 5ರಿಂದ 9ರವರೆಗೆ ಬರ ಪರಿಸ್ಥಿತಿಯನ್ನು ವೀಕ್ಷಿಸಿ ತೆರಳಿದೆ. ಆದರೆ ಈವರೆಗೆ ಬರ ಪರಿಹಾರ ಬಿಡುಗಡೆಗೆ ಸಂಬಂಧಿಸಿದಂತೆ ಯಾವುದೇ ಪ್ರಕ್ರಿಯೆಗಳನ್ನೂ ಕೇಂದ್ರದ ತಂಡ ಈವರೆಗೆ ಮಾಡಿಲ್ಲ ಎಂದು ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದ್ದಾರೆ.

ಮಳೆ ಕೊರತೆಯಿಂದಾಗಿ ರಾಜ್ಯದ 48 ಲಕ್ಷ ಹೆಕ್ಟೇರ್‌ ಪ್ರದೇಶದ 35,162.05 ಕೋಟಿ ರು. ಮೊತ್ತದ ಕೃಷಿ ಮತ್ತು ತೋಟಗಾರಿಕಾ ಬೆಳೆಗಳು ನಷ್ಟವುಂಟಾಗಿದೆ. ಅದರಲ್ಲಿ ಸಣ್ಣ ಹಿಡುವಳಿದಾರರಿಗೇ ಹೆಚ್ಚು ನಷ್ಟವಾಗಿದೆ. ರಾಜ್ಯದಲ್ಲಿ 2 ಹೆಕ್ಟೇರ್‌ಗಿಂತ ಕಡಿಮೆ ಭೂಮಿ ಹೊಂದಿರುವ 52.73 ಲಕ್ಷ ರೈತರಿದ್ದು, ಬರದಿಂದಾಗಿ ಅವರು ಹೆಚ್ಚಿನ ಸಮಸ್ಯೆಗೆ ಸಿಲುಕಿದ್ದಾರೆ. ಹೀಗಾಗಿ ರಾಜ್ಯ ಸರ್ಕಾರ ಈಗಾಗಲೆ ಅಕ್ಟೋಬರ್‌ ತಿಂಗಳಲ್ಲಿ 324 ಕೋಟಿ ರು. ಎಸ್‌ಡಿಆರ್‌ಎಫ್‌ ಮೂಲಕ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ಅದೇ ರೀತಿ ಬೆಳೆ ನಷ್ಟಕ್ಕೆ ಸಂಬಂಧಿಸಿದಂತೆ ಎನ್‌ಡಿಆರ್‌ಎಫ್ ಮೂಲಕ 18,171.44 ಕೋಟಿ ರು. ಬರ ಪರಿಹಾರ ನೀಡಬೇಕಿದೆ. ಅದರ ಬಗ್ಗೆ ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಬೇಕಿದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಎಲ್ಲೆಡೆ ಕಾಂಗ್ರೆಸ್‌ ಪರ ಒಲವು, ಪ್ರಧಾನಿ ಮೋದಿಗೆ ನೋವು: ಸಚಿವ ಚಲುವರಾಯಸ್ವಾಮಿ

ಎನ್‌ಡಿಆರ್‌ಎಫ್‌ ನಿಯಮ ಬದಲಾವಣೆಗೂ ಮನವಿ:

ಬೆಳೆ ನಷ್ಟ ಹಾಗೂ ಬರ ಪೀಡಿತ ತಾಲೂಕುಗಳ ಘೋಷಣೆಗೆ ಸಂಬಂಧಿಸಿದಂತೆ ಎನ್‌ಡಿಆರ್‌ಆರ್‌ಎಫ್‌ನ (NDRF)ನಿಯಮಗಳಲ್ಲೂ ಬದಲಾವಣೆ ತರಬೇಕಿದೆ. ಬರ ನಿರ್ವಹಣೆ 2020ರ ಪ್ರಕಾರ ಶೇ. 50ರಷ್ಟು ಬೆಳೆ ನಷ್ಟವುಂಟಾದರೆ ಮಾತ್ರ ಸಬ್ಸಿಡಿ (Subsidy)ನೀಡಲು ಸಾಧ್ಯ ಎಂಬ ಉಲ್ಲೇಖವಿದೆ. ಆದರೆ, ಅದು ಬಹಳಷ್ಟು ರೈತರಿಗೆ ಹಾಗೂ ಬರಪೀಡಿತ ತಾಲೂಕುಗಳಿಗೆ ಪರಿಹಾರ ದೊರಕದಂತೆ ಮಾಡುತ್ತಿದೆ. ಹೀಗಾಗಿ ನಿಯಮಗಳನ್ನು ಸಡಿಲಗೊಳಿಸಬೇಕು ಎಂದೂ ಸಿದ್ದರಾಮಯ್ಯ ಪತ್ರದಲ್ಲಿ ಕೋರಿದ್ದಾರೆ.

ರಾಜಕೀಯಕ್ಕಾಗಿ ಬಿಜೆಪಿಯಿಂದ ಬರ ಅಧ್ಯಯನ: ಸಿಎಂ ಸಿದ್ದರಾಮಯ್ಯ

Follow Us:
Download App:
  • android
  • ios