ಮಹದಾಯಿ: ಗೋವಾ ಮೂಲದ ಕೇಂದ್ರ ಸಚಿವ ರಾಜೀನಾಮೆ ಬೆದರಿಕೆ
ಮಹಾದಾಯಿ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಗೋವಾದ ಬೇಡಿಕೆಗಳನ್ನು ಕೇಳದಿದ್ದರೆ, ಕರ್ನಾಟಕಕ್ಕೆ ನೀಡಿರುವ ಅನುಮತಿಯನ್ನು ಹಿಂಪಡೆಯದಿದ್ದರೆ ನನ್ನ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ. ಕರ್ನಾಟಕಕ್ಕೆ ಅನುಮತಿ ನೀಡಿರುವುದು ಗೋವಾ ಜನರಿಗೆ ಮಾಡಿದ ಅನ್ಯಾಯವಾಗಿದೆ: ಶ್ರೀಪಾದ್ ನಾಯಕ್
ಪಣಜಿ(ಜ.01): ಮಹದಾಯಿ ನದಿ ತಿರುವು ಯೋಜನೆಗೆ ಸಂಬಂಧಿಸಿದಂತೆ ಕರ್ನಾಟಕದ ಪರಿಷ್ಕೃತ ವಿಸ್ತೃತ ಯೋಜನಾ ವರದಿಗೆ ಕೇಂದ್ರ ಸರ್ಕಾರ ನೀಡಿರುವ ಅನುಮತಿ ಹಿಂಪಡೆಯದಿದ್ದರೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧ ಎಂದು ಕೇಂದ್ರ ಬಂದರು, ಹಡಗು, ಜಲಸಾರಿಗೆ ಮತ್ತು ಪ್ರವಾಸೋದ್ಯಮ ಖಾತೆ ರಾಜ್ಯ ಸಚಿವ ಶ್ರೀಪಾದ್ ನಾಯಕ್ ಎಸ್ಸೋ ಹೇಳಿದ್ದಾರೆ.
ಮಹಾದಾಯಿ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಗೋವಾದ ಬೇಡಿಕೆಗಳನ್ನು ಕೇಳದಿದ್ದರೆ, ಕರ್ನಾಟಕಕ್ಕೆ ನೀಡಿರುವ ಅನುಮತಿಯನ್ನು ಹಿಂಪಡೆಯದಿದ್ದರೆ ನನ್ನ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ. ಕರ್ನಾಟಕಕ್ಕೆ ಅನುಮತಿ ನೀಡಿರುವುದು ಗೋವಾ ಜನರಿಗೆ ಮಾಡಿದ ಅನ್ಯಾಯವಾಗಿದೆ. ಇದು ಕೇಂದ್ರ ಸರ್ಕಾರದ ಒಮ್ಮುಖ ತೀರ್ಮಾನವಾಗಿದೆ. ನಾವೆಲ್ಲರೂ ಇದಕ್ಕೆ ವಿರೋಧ ವ್ಯಕ್ತಪಡಿಸುತ್ತೇವೆ ಅಂತ ತಿಳಿಸಿದ್ದಾರೆ.
ಮಹದಾಯಿ ಅನುಮತಿ ರದ್ದತಿಗಾಗಿ ಮೋದಿಗೆ ಮನವಿ: ಗೋವಾ ಸಿಎಂ ಸಾವಂತ್
ಅಗತ್ಯ ಬಿದ್ದರೆ ಗೋವಾ ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಲೇರಲಿದೆ. ನಾವು ರಾಜಕೀಯವನ್ನು ಬದಿಗಿಟ್ಟು ಗೋವಾದ ಹಿತಾಸಕ್ತಿಗಾಗಿ ಹೋರಾಡುತ್ತೇವೆ. ಈ ವಿಚಾರದಲ್ಲಿ ಎಲ್ಲಾ ಶಾಸಕರು ಒಗ್ಗಟ್ಟಾಗಿ ನಿಲ್ಲಬೇಕು ಎಂದು ಮನವಿ ಮಾಡುತ್ತೇನೆ ಎಂದು ಅವರು ಹೇಳಿದ್ದಾರೆ.