ದುಬೈನಿಂದ ಬೆಂಗಳೂರಿಗೆ ಚಿನ್ನ ಅಕ್ರಮ ಸಾಗಣೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ನಟಿ ರನ್ಯಾ ರಾವ್‌ಗೆ ನಗರದ 61ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ ನ್ಯಾಯಾಲಯ ಜಾಮೀನು ನಿರಾಕರಿಸಿದೆ. 

ಬೆಂಗಳೂರು (ಮಾ.28): ದುಬೈನಿಂದ ಬೆಂಗಳೂರಿಗೆ ಚಿನ್ನ ಅಕ್ರಮ ಸಾಗಣೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ನಟಿ ರನ್ಯಾ ರಾವ್‌ಗೆ ನಗರದ 61ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ ನ್ಯಾಯಾಲಯ ಜಾಮೀನು ನಿರಾಕರಿಸಿದೆ. ಪ್ರಕರಣ ಸಂಬಂಧ ಜಾಮೀನು ಕೋರಿ ರನ್ಯಾ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿ ನ್ಯಾಯಾಲಯ ಆದೇಶಿಸಿದೆ. ಪ್ರಕರಣದಲ್ಲಿ ಅಂತ‌ರಾಷ್ಟ್ರೀಯ ಸಂಪರ್ಕಗಳು ಇದೆ. ಒಂದು ವರ್ಷದ ಅವಧಿ ಯಲ್ಲಿ 27 ಬಾರಿ ವಿದೇಶಿ ಪ್ರಯಾಣ ಮಾಡಿದ್ದಾರೆ. ರನ್ಯಾ ಅವರಿಂದ 4.83 ಕೋಟಿ ರು. ಸುಂಕ ವಂಚನೆಯಾಗಿದೆ ಎಂದು ಡಿಐಆ‌ರ್ಐ ತನಿಖಾಧಿಕಾರಿಗಳು ಬಲವಾಗಿ ವಾದಿಸಿದ್ದಾರೆ. 

ಆರೋಪಿ ಮೇಲಿನ ಆರೋಪಗಳು ಗಂಭೀರ ಸ್ವರೂಪದಲ್ಲಿವೆ. ಜಾಮೀನು ಮೇಲೆ ಬಿಡುಗಡೆಯಾದರೆ ಸಾಕ್ಷ್ಯ ನಾಶಕ್ಕೆ ಯತ್ನಿಸುವ, ದೇಶ ಬಿಟ್ಟು ಪರಾರಿಯಾಗುವ ಮತ್ತು ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆಯಿದೆ. ಇದ ರಿಂದ ತನಿಖೆ ಹಾದಿ ತಪ್ಪಬ ಹುದು. ಹಾಗಾಗಿ, ಜಾಮೀ ನು ನೀಡಲಾಗದು ಎಂದು ಆದೇಶದಲ್ಲಿ ತಿಳಿಸಿದೆ. ವಿಕೃತ ಆದೇಶ ಇನ್ನಷ್ಟೇ ಬಿಡುಗಡೆಯಾಗಬೇಕಿದೆ. ಹಿಂದೆ ನಗರದ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯ (ಮ್ಯಾಜಿಸ್ಟ್ರೇಟ್) ರನ್ಯಾಗೆ ಜಾಮೀನು ನಿರಾಕರಿಸಿತ್ತು. ಇದೀಗ ಸೆಷನ್ಸ್ ಕೋರ್ಟ್‌ಜಾಮೀನು ಅರ್ಜಿ ತಿರಸ್ಕರಿಸಿದೆ.

ಸಹಜ ನ್ಯಾಯ ಉಲ್ಲಂಘನೆ: ದುಬೈನಿಂದ ನಗರಕ್ಕೆ ಚಿನ್ನ ಅಕ್ರಮ ಸಾಗಣೆ ಪ್ರಕರಣದಲ್ಲಿ ಜಾಮೀನು ಕೋರಿ ನಟಿ ರನ್ಯಾ ರಾವ್‌ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ನಗರದ ಸಿಟಿ ಸಿವಿಲ್‌ ಮತ್ತು ಸೆಷನ್ಸ್‌ ನ್ಯಾಯಾಲಯ ಮಂಗಳವಾರಕ್ಕೆ ಮುಂದೂಡಿದೆ. ರನ್ಯಾ ರಾವ್‌ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಸೋಮವಾರ ನಗರದ 64ನೇ ಹೆಚ್ಚುವರಿ ಸಿಟಿ ಸಿವಿಲ್‌ ಹಾಗೂ ಸೆಷನ್ಸ್‌ ನ್ಯಾಯಾಲಯ ವಿಚಾರಣೆ ನಡೆಸಿತು. ರನ್ಯಾ ಪರ ವಕೀಲರು ತಮ್ಮ ವಾದ ಮುಕ್ತಾಯಗೊಳಿಸಿದರು. ನಂತರ ಪ್ರಕರಣ ತನಿಖಾಧಿಕಾರಿಗಳಾದ ಕಂದಾಯ ಗುಪ್ತಚರ ಜಾರಿ ನಿರ್ದೇಶನಾಲಯ ಪರ ವಕೀಲರು ವಾದ ಮಂಡಿಸಬೇಕಿತ್ತು. 

ನಟಿ ರನ್ಯಾ ರಾವ್ ಚಿನ್ನ ಕಳ್ಳ ಸಾಗಣೆ ಪ್ರಕರಣ: ಬಳ್ಳಾರಿ ಚಿನ್ನದ ವ್ಯಾಪಾರಿ ಬಂಧನ

ಆದರೆ, ಕಾಲಾವಕಾಶದ ಕೊರತೆಯಿಂದ ಅರ್ಜಿ ವಿಚಾರಣೆಯನ್ನು ನ್ಯಾಯಾಧೀಶ ಐ.ಪಿ.ನಾಯಿಕ್ ಅವರು ಮಂಗಳವಾರಕ್ಕೆ ಮುಂದೂಡಿದರು. ವಿಚಾರಣೆ ವೇಳೆ ರನ್ಯಾ ಪರ ವಕೀಲರು ವಾದ ಮಂಡಿಸಿ, ಪ್ರಕರಣದಲ್ಲಿ ಅರ್ಜಿದಾರರನ್ನು ಪರಿಶೀಲನೆ ನಡೆಸಿರುವ ಅಧಿಕಾರಿಗಳನ್ನೇ ಸಾಕ್ಷಿಗಳನ್ನಾಗಿ ಮಾಡಲಾಗಿದೆ. ಆರೋಪಿಯ ಅರೆಸ್ಟ್‌ ಮೆಮೊದಲ್ಲಿ ಬಂಧನಕ್ಕೆ ಸೂಕ್ತ ಕಾರಣ ನೀಡಿಲ್ಲ. ಬಂಧನ ಪ್ರಕ್ರಿಯೆಯಲ್ಲಿ ಸುಪ್ರಿಂ ಕೋರ್ಟ್‌ ನೀಡಿರುವ ಮಾರ್ಗಸೂಚಿ ಪಾಲಿಸಿಲ್ಲ. ಅಧಿಕಾರಿಗಳು ಸಹಜ ನ್ಯಾಯವನ್ನು ಉಲ್ಲಂಘಿಸಿದ್ದಾರೆ. ಸತ್ಯಾಂಶಗಳನ್ನು ಮುಚ್ಚಿಡುವ ಪ್ರಯತ್ನವನ್ನು ತನಿಖಾಧಿಕಾರಿಗಳು ನಡೆಸಿದ್ದಾರೆ ಎಂದು ಆಕ್ಷೇಪಿಸಿದರು.