ಸರ್ಕಾರಿ ಶಾಲಾ ಮಕ್ಕಳಿಗೆ ಸಿಹಿ ಸುದ್ದಿ; ವಾರಕ್ಕೆ 3 ದಿನ ರಾಗಿ ಮಾಲ್ಟ್ ವಿತರಣೆಗೆ ಸಿಎಂ ಚಾಲನೆ

ಸರ್ಕಾರಿ ಶಾಲಾ ಮಕ್ಕಳಿಗೆ ವಾರಕ್ಕೆ ಮೂರು ದಿನ ರಾಗಿ ಮಾಲ್ಟ್ ನೀಡುವ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನ ಸೌಧಗ ಬ್ಯಾಂಕ್ವೆಟ್ ಹಾಲ್ ನಲ್ಲಿ ಗುರುವಾರ ಚಾಲನೆ ನೀಡಿದ್ದಾರೆ.

Good news for government students Karnataka CM drive to distribute Ragi  malt 3 days a week rav

ಬೆಂಗಳೂರು (ಫೆ.22): ಸರ್ಕಾರಿ ಶಾಲಾ ಮಕ್ಕಳಿಗೆ ವಾರಕ್ಕೆ ಮೂರು ದಿನ ರಾಗಿ ಮಾಲ್ಟ್ ನೀಡುವ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನ ಸೌಧಗ ಬ್ಯಾಂಕ್ವೆಟ್ ಹಾಲ್ ನಲ್ಲಿ ಗುರುವಾರ ಚಾಲನೆ ನೀಡಿದ್ದಾರೆ.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಕೆಎಂಎಫ್ ಹಾಗೂ ಶ್ರೀ ಸತ್ಯಸಾಯಿ ಅನ್ನಪೂರ್ಣ ಟ್ರಸ್ಟ್ ಸಹಯೋಗದೊಂದಿಗೆ ಸರ್ಕಾರಿ ಶಾಲಾ ಮಕ್ಕಳಿಗಾಗಿ ಸಾಯಿ ಶ್ಯೂರ್ ರಾಗಿ ಹೆಲ್ತ್ ಮಿಕ್ಸ್ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು.

SSLC ಪೂರ್ವಸಿದ್ಧತಾ ಪರೀಕ್ಷೆಗೆ ವಿದ್ಯಾರ್ಥಿಗಳೇ ಉತ್ತರ ಪತ್ರಿಕೆ ತರಬೇಕೆಂಬ ಆದೇಶ ಸಮರ್ಥಿಸಿಕೊಂಡ ಇಲಾಖೆ!

2013 ರಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ನಮ್ಮಲ್ಲಿ ಹಾಲು ಉತ್ಪಾದನೆ ಹೆಚ್ಚಾಯಿತು. ಈ ಹೆಚ್ಚುವರಿ ಹಾಲಿನ ಮಾರಾಟ ಮತ್ತು ಹಾಲಿನ ಉಪ ಉತ್ಪನ್ನಗಳನ್ನು ಹೆಚ್ಚುವರಿಯಾಗಿ ಉತ್ಪಾದನೆ ಮಾಡಲು ಸಾಧ್ಯವಿರಲಿಲ್ಲ. ಹೀಗಾಗಿ ಆ ಕೂಡಲೇ ಸರ್ಕಾರಿ ಶಾಲಾ ಮಕ್ಕಳಿಗೆ ವಾರದಲ್ಲಿ ಐದು ದಿನ ಹಾಲು ಕೊಡುವ ಕ್ಷೀರಭಾಗ್ಯ ಯೋಜನೆಯನ್ನು ಆರಂಭಿಸಿದೆ.

ಕೆಎಂಎಫ್ ಮೂಲಕ ಮಕ್ಕಳಿಗೆ ಹಾಲು ಹೋಗುತ್ತದೆ. ಈ ಹಾಲಿನ ಹಣವನ್ನು ಸರ್ಕಾರ ಕೆಎಂಎಪ್ ಗೆ ನೀಡುತ್ತದೆ. ಆ ಮೂಲಕ ಕೆಎಂಎಫ್ ಗೆ ಹಾಲು ಸರಬರಾಜು ಮಾಡುವ ರೈತರಿಗೆ ನೆರವಾಗುವ ತೀರ್ಮಾನ ಮಾಡಿದೆವು. ಇದರ ಜೊತೆಗೆ ಕಳೆದ ಬಜೆಟ್​​ನಲ್ಲಿ ಶಾಲಾ ಮಕ್ಕಳಿಗೆ ವಾರಕ್ಕೆ ಎರಡು ದಿನ ಮೊಟ್ಟೆ ನೀಡುವ ಕಾರ್ಯಕ್ರಮ ಆರಂಭಿಸಿದೆವು ಎಂದರು.

ರಾಗಿ ಮಾಲ್ಟ್: ಈಗ ಅತ್ಯಂತ ಪೌಷ್ಠಿಕವಾದ ರಾಗಿ ಮಾಲ್ಟ್ ಕೊಡುವ ಕಾರ್ಯಕ್ರಮ ಶುರುವಾಗಿದೆ. ಇದರಿಂದ ಮಕ್ಕಳ ಮಾನಸಿಕ ಮತ್ತು ದೈಹಿಕ ಆರೋಗ್ಯ ವೃದ್ಧಿಯಾಗುತ್ತದೆ. ಮಕ್ಕಳು ರಕ್ತಹೀನತೆ ಮತ್ತು ಪೌಷ್ಠಿಕಾಂಶ ಕೊರತೆಯಿಂದ ಬಳಲಬಾರದು ಎಂಬುದು ಇದರ ಉದ್ದೇಶ. ಆಗ ಮಾತ್ರ ಮಕ್ಕಳು ಮಾನಸಿಕವಾಗಿ ಸದೃಢವಾಗಿ ಓದಿನಲ್ಲಿ ಹೆಚ್ಚು ಚುರುಕಾಗುತ್ತಾರೆ. ಗುಣಮಟ್ಟದ ಶಿಕ್ಷಣ ಪಡೆದುಕೊಳ್ಳುತ್ತಾರೆ. ಶ್ರೀಮಂತರ ಮಕ್ಕಳ ರೀತಿ ಬಡವರು, ಶ್ರಮಿಕರು, ದಲಿತ ಮಕ್ಕಳಿಗೂ ಉತ್ತಮ ಶಿಕ್ಷಣ ದೊರೆಯಬೇಕು. ಏಕೆಂದರೆ ಮಕ್ಕಳೇ ದೇಶದ, ಸಮಾಜದ ಭವಿಷ್ಯವನ್ನು ರೂಪಿಸುತ್ತಾರೆ ಎಂದು ತಿಳಿಸಿದರು.

 

ಶಿಕ್ಷಣ ಇಲಾಖೆಯಿಂದ ಮತ್ತೊಂದು ಎಡವಟ್ಟು; SSLC ಪೂರ್ವಸಿದ್ಧತಾ ಪರೀಕ್ಷೆಗೆ ವಿದ್ಯಾರ್ಥಿಗಳೇ ಉತ್ತರ ಪತ್ರಿಕೆ ತರುವಂತೆ ಮೌಖಿಕ ಆದೇಶ!

ಶಿಕ್ಷಣದಿಂದ ಸ್ವಾಭಿಮಾನ: ಶಿಕ್ಷಣದಿಂದ ಮಾತ್ರ ಸ್ವಾಭಿಮಾನ ಹೆಚ್ಚಾಗಲು ಸಾಧ್ಯ. ಜ್ಞಾನದ ಬೆಳವಣಿಗೆ ಶಿಕ್ಷಣದಿಂದ ಸಾಧ್ಯ. ಶಿಕ್ಷಣ ಅಂದರೆ ಕೇವಲ ಓದು, ಬರಹ ಕಲಿಸುವುದಲ್ಲ. ಸಮಾಜದ ಸಮಸ್ಯೆಗಳಿಗೆ ಸ್ಪಂದಿಸುವ ವೈಚಾರಿಕತೆಯುಳ್ಳ ಶಿಕ್ಷಣ ಅಗತ್ಯ. ಉನ್ನತ ಶಿಕ್ಷಣ ಪಡೆದ ವೈದ್ಯರು, ಎಂಜಿನಿಯರ್​​ಗಳೂ ಈಗ ಮೌಢ್ಯಕ್ಕೆ ಜೋತು ಬಿದ್ದಿದ್ದಾರೆ. ಬಸವಾದಿ ಶರಣರು ಮೌಢ್ಯಮುಕ್ತ ಸಮಾಜ ನಿರ್ಮಾಣಕ್ಕೆ ಶ್ರಮಿಸಿದ್ದರು. ವೈಚಾರಿಕ ಶಿಕ್ಷಣದಿಂದ ಮಾತ್ರ ಮೌಢ್ಯಮುಕ್ತ ಸಮಾಜ ನಿರ್ಮಾಣವಾಗಲು ಸಾಧ್ಯ ಅಭಿಪ್ರಾಯಪಟ್ಟರು.

ಶಿಕ್ಷಣ ಸಚಿವ ಮಧು ಬಂಗಾರಪ್ಪ, ಇಲಾಖೆ ಕಾರ್ಯದರ್ಶಿ ಶಾಲಿನಿ ರಜನೀಶ್ ಮತ್ತಿತರರು ಹಾಜರಿದ್ದರು

Latest Videos
Follow Us:
Download App:
  • android
  • ios