ಸರ್ಕಾರದಿಂದ ಇಂದಿರಾ ಕಿಟ್ ನೀಡುವ ಯೋಜನೆ ಜಾರಿಗೊಳಿಸಿದ್ದು, ಟೆಂಡರ್ ಪ್ರಕ್ರಿಯೆ ಪ್ರಗತಿಯಲ್ಲಿದೆ. ಫೆಬ್ರವರಿ ಅಂತ್ಯ ಅಥವಾ ಮಾರ್ಚ್ ತಿಂಗಳಲ್ಲಿ ಬೇಳೆ, ಸಕ್ಕರೆ, ಅಡುಗೆ ಎಣ್ಣೆ, ಉಪ್ಪು ಒಳಗೊಂಡ ಕಿಟ್ ನೀಡಲಾಗುವುದು

ಹಾಸನ: ಸರ್ಕಾರದಿಂದ ಇಂದಿರಾ ಕಿಟ್ ನೀಡುವ ಯೋಜನೆ ಜಾರಿಗೊಳಿಸಿದ್ದು, ಟೆಂಡರ್ ಪ್ರಕ್ರಿಯೆ ಪ್ರಗತಿಯಲ್ಲಿದೆ. ಫೆಬ್ರವರಿ ಅಂತ್ಯ ಅಥವಾ ಮಾರ್ಚ್ ತಿಂಗಳಲ್ಲಿ ಬೇಳೆ, ಸಕ್ಕರೆ, ಅಡುಗೆ ಎಣ್ಣೆ, ಉಪ್ಪು ಒಳಗೊಂಡ ಕಿಟ್ ನೀಡಲಾಗುವುದು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು. ಶುಕ್ರವಾರ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ‘ಈ ಯೋಜನೆಯಿಂದ ಪೌಷ್ಟಿಕ ಆಹಾರ ಸಿಗುತ್ತದೆ’ ಎಂದು ಹೇಳಿದರು.

Add Asianetnews Kannada as a Preferred SourcegooglePreferred

ತೂಕ ಅಳತೆಯ ಪರಿಶೀಲನೆ ಸಂದರ್ಭದಲ್ಲಿ ಗ್ರಾಹಕರಿಗೆ ಆಗುವ ನಷ್ಟವನ್ನು ತಡೆಯಬೇಕು, ಇಲಾಖೆಗೆ ನಿಗದಿಪಡಿಸಿರುವ ಗುರಿಯನ್ನು ಮಾರ್ಚ್ ಅಂತ್ಯದೊಳಗೆ ಪೂರ್ಣಗೊಳಿಸಬೇಕು ಎಂದು ಹೇಳಿದರು.

ಮನೆ-ಬೈಕ್ ಸಾಲ ಕಟ್ಟುತ್ತಿರುವವರಿಗೂ ಬಿಪಿಎಲ್‌ ಕಾರ್ಡ್‌ ವಿನಾಯ್ತಿ: ಮುನಿಯಪ್ಪ

ಹಾಸನ: ಬಿಪಿಎಲ್‌ ಕಾರ್ಡ್‌ನಿಂದ ತೆಗೆದುಹಾಕಿರುವ ಆದಾಯ ತೆರಿಗೆದಾರರು ಮನೆ ಮತ್ತು ಬೈಕ್‌ ಸಾಲ ಕಟ್ಟುತ್ತಿದ್ದರೆ ಅವರಿಗೆ ಮತ್ತೆ ಬಿಪಿಎಲ್‌ ಕಾರ್ಡ್‌ ನೀಡಬಹುದು ಎಂದು ಸೂಚಿಸಿರುವ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಎಚ್.ಮುನಿಯಪ್ಪ, ದೀರ್ಘ ಕಾಲದಿಂದ ತೆರಿಗೆ ಪಾವತಿ ಮಾಡುತ್ತಿರುವವರ ಬಿಪಿಎಲ್‌ ಕಾರ್ಡ್‌ಗಳನ್ನು ಎ.ಪಿ.ಎಲ್‌ಗೆ ಪರಿವರ್ತಿಸಬೇಕು ಎಂದು ಸೂಚಿಸಿದ್ದಾರೆ. ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿ ಅವರು ಮಾತನಾಡಿದರು. ಈಗಾಗಲೇ ಬಿಪಿಎಲ್‌ನಿಂದ ಎಪಿಎಲ್‌ಗೆ ಪರಿವರ್ತಿಸಿದ್ದರೆ ಅಗತ್ಯ ದಾಖಲೆಗಳನ್ನು ಪಡೆದು ಬಿಪಿಎಲ್ ಕಾರ್ಡ್ ನೀಡಲು ಮರು ಪರಿಶೀಲನೆ ನಡೆಸಬೇಕು. ಕುಟುಂಬದಲ್ಲಿ ಮಕ್ಕಳು ಬೇರೆ ಕಡೆ ಕೆಲಸ ಮಾಡಿಕೊಂಡು ಆದಾಯ ತೆರಿಗೆ ಪಾವತಿಸುತ್ತಿದ್ದರೆ ತಂದೆ-ತಾಯಿಗೆ ಬಿಪಿಎಲ್ ಕಾರ್ಡ್ ನೀಡಬಹುದು. ಈ ಬಗ್ಗೆ ಸೂಕ್ಷ್ಮವಾಗಿ ಪರಿಶೀಲಿಸಬೇಕು ಎಂದರು.

75 ವಯಸ್ಸಿನ ಮೇಲ್ಪಟ್ಟ ಒಂಟಿ ಹಿರಿಯ ನಾಗರಿಕರು ಮಾತ್ರ ಇರುವ ಮನೆಗಳಿಗೆ ಅನ್ನಸುವಿಧಾ ಯೋಜನೆಯಡಿ ಮನೆ ಬಾಗಿಲಿಗೆ ನ್ಯಾಯಬೆಲೆ ಅಂಗಡಿಯವರು ಪಡಿತರ ವಿತರಿಸಲು ಕ್ರಮ ವಹಿಸಬೇಕು. ಅಧಿಕಾರಿಗಳು ಆದ್ಯತೆ ಮೇಲೆ ಈ ಕಾರ್ಯಕ್ರಮವನ್ನು ಸಮರ್ಪಕವಾಗಿ ಅನುಷ್ಠಾನ ಮಾಡುವಂತೆ ತಿಳಿಸಿದರು.

ಗ್ರಾಹಕರಿಗೆ ಆಗುವ ನಷ್ಟವನ್ನು ತಡೆಯಬೇಕು

ತೂಕ ಅಳತೆಯ ಪರಿಶೀಲನೆ ಸಂದರ್ಭದಲ್ಲಿ ಗ್ರಾಹಕರಿಗೆ ಆಗುವ ನಷ್ಟವನ್ನು ತಡೆಯಬೇಕು, ಇಲಾಖೆಗೆ ನಿಗದಿಪಡಿಸಿರುವ ಗುರಿಯನ್ನು ಮಾರ್ಚ್ ಅಂತ್ಯದೊಳಗೆ ಪೂರ್ಣಗೊಳಿಸಬೇಕು ಎಂದು ಹೇಳಿದರು.