ರಾಜ್ಯದ ನೇಕಾರರಿಗೆ ಸಿಹಿಸುದ್ದಿ: ನಾಳೆ ಬ್ಯಾಂಕ್ ಖಾತೆಗೆ 5 ಸಾವಿರ ರೂ. ಹಾಕುವ ಸರ್ಕಾರ
ಆರ್ಥಿಕ ಹಿನ್ನಡೆಯಿಂದ ಸಂಕಷ್ಟದಲ್ಲಿರುವ ವಿದ್ಯುತ್ ಮಗ್ಗ ಹಾಗೂ ಮಗ್ಗ ಪೂರ್ವ ಚಟುವಟಿಕೆಗಳಲ್ಲಿ ತೊಡಗಿರುವ ನೇಕಾರರು ಹಾಗೂ ಕಾರ್ಮಿಕರಿಗೆ 2022-23 ನೇ ಸಾಲಿನ ನೇಕಾರ ಸಮ್ಮಾನ್ 5, 000 ರೂ.ಗಳ ವಾರ್ಷಿಕ ಆರ್ಥಿಕ ನೆರವನ್ನು ಡಿಬಿಟಿ ಮುಖಾಂತರ ಒದಗಿಸಲಾಗುವುದು.
ಬೆಂಗಳೂರು (ಜ.10): ಆರ್ಥಿಕ ಹಿನ್ನಡೆಯಿಂದ ಸಂಕಷ್ಟದಲ್ಲಿರುವ ವಿದ್ಯುತ್ ಮಗ್ಗ ಹಾಗೂ ಮಗ್ಗ ಪೂರ್ವ ಚಟುವಟಿಕೆಗಳಲ್ಲಿ ತೊಡಗಿರುವ ನೇಕಾರರು ಹಾಗೂ ಕಾರ್ಮಿಕರಿಗೆ 2022-23 ನೇ ಸಾಲಿನ ನೇಕಾರ ಸಮ್ಮಾನ್ 5, 000 ರೂ.ಗಳ ವಾರ್ಷಿಕ ಆರ್ಥಿಕ ನೆರವನ್ನು ಡಿಬಿಟಿ ಮುಖಾಂತರ ಒದಗಿಸಲಾಗುವುದು. ಈ ಯೋಜನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿದ್ಯುತ್ ಮಗ್ಗ ನೇಕಾರರಿಗೆ/ ಕಾರ್ಮಿಕರಿಗೆ ನೇಕಾರ ಸಮ್ಮಾನ್ ಯೋಜನೆಯಡಿ ಆರ್ಥಿಕ ನೆರವನ್ನು ನೇರ ನಗದು (ಡಿಬಿಟಿ) ಮೂಲಕ ವರ್ಗಾವಣೆಗೆ ಜ.11 ರಂದು ಬೆಳಿಗ್ಗೆ 11.30 ಗಂಟೆಗೆ ಗೃಹ ಕಚೇರಿ ಕೃಷ್ಣಾದಲ್ಲಿ ಚಾಲನೆ ನೀಡಲಿದ್ದಾರೆ.
ರಾಜ್ಯದ ಕೈಮಗ್ಗ ಮತ್ತು ಜವಳಿ ಇಲಾಖೆ ಹಾಗೂ ಕಾರ್ಮಿಕ ಇಲಾಖೆಯ ಗಣತಿ/ ಸಮೀಕ್ಷೆಯಲ್ಲಿ ಈವರೆಗೆ ನೋಂದಾಯಿತರಾದ 1,02,980 ನೇಕಾರರು ತಲಾ 5 ಸಾವಿರ ರೂ.ಗಳ ನೆರವನ್ನು ಪಡೆಯಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಇದರಿಂದ ಸಾಂಕ್ರಾಮಿಕ ರೋಗ ಕೋವಿಡ್ ಕಂಡುಬಂದ ವರ್ಷದಿಂದಲೂ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ನೇಕಾರರಿಗೆ ಆರ್ಥಿಕ ಬಲವನ್ನು ತುಂಬಲು ಸರ್ಕಾರ ಮುಂದಾಗಿದೆ ಎಂದು ತಿಳಿಸಿದರು.
ಸಂಕ್ರಾಂತಿಗೆ ವಿದ್ಯುತ್ ಮಗ್ಗ ನೇಕಾರರಿಗೂ 5000 ರು.: ಸಿಎಂ ಬೊಮ್ಮಾಯಿ
"ನೇಕಾರ ಸಮ್ಯಾನ್ (ವಿದ್ಯುತ್ ಮಗ್ಗ)"
ಆರ್ಥಿಕ ಹಿನ್ನೆಡೆಬಂದ ಸಂಕಷ್ಟದಲ್ಲಿರುವ ವಿದ್ಯುತ್ ಮಗ್ಗ ಹಾಗೂ ಮಗ್ಗ ಪೂರ್ವ ಚಟುವಟಿಕೆಯಲ್ಲಿ ತೊಡಗಿರುವ ನೇಕಾರರು ಹಾಗೂ ಕಾರ್ಮಿಕಲಿಗೆ ರೂ.5000/- ಗಳ ವಾರ್ಷಿಕ ಆರ್ಥಿಕ ನೆರವನ್ನು ನೇರ ನಗದು ವರ್ಗಾವಣೆ ಮುಖಾಂತರ ಒದಗಿಸಲು 2022- 23ನೇ ಸಾಅನಿಂದ "ನೇಕಾರ ಸಮ್ಯಾನ್(ವಿದ್ಯುತ್ ಮಗ್ಗ)" ಹೊಸ ಯೋಜನೆಯನ್ನು ಸನ್ಮಾನ ಮುಖ್ಯಮಂತ್ರಿ ಘೋಷಣೆ ಮಾಡಿದ್ದಾರೆ.
• 2020-21 ನೇ ಸಾಲಿನಲ್ಲಿ ಕೋವಿಡ್-19 ಸಂಕಷ್ಟದ ಪ್ರಯುಕ್ತ 51862 ವಿದ್ಯುತ್ ಮಗ್ಗ ನೇಕಾರಲಿಗೆ ರೂ.2,000/- ಗಳಂತೆ ಒಟ್ಟು ರೂ.1037.24 ಲಕ್ಷಗಳನ್ನು ಡಿ.ಸಿ.ಟಿ ಮೂಲಕ ಬಿಡುಗಡೆ ಮಾಡಲಾಗಿದೆ.
• 2021-22 ನೇ ಸಾಲಿನಲ್ಲಿ ಕೋಬಿಡ್-19 2ನೇ ಅಲೆಯ ಸಂಕಷ್ಟದ ಪ್ರಯುಕ್ತ 85,718 ವಿದ್ಯುತ್ ಮಗ್ಗ ನೇಕಾರರಿಗೆ ರೂ.3,000/- ಗಳಂತೆ ಒಟ್ಟು ರೂ.2571.54 ಲಕ್ಷಗಳನ್ನು ಅ.ಬಿ.ಐ ಮೂಲಕ ಬಿಡುಗಡೆ ಮಾಡಲಾಗಿದೆ.
ವಿದ್ಯುತ್ ಮಗ್ಗ ಹಾಗೂ ಮಗ್ಗ ಪೂರ್ವ ಚಟುವಟಿಕೆಯಲ್ಲಿ ತೊಡಗಿರುವ ನೇಕಾರರು | ಕಾರ್ಮಿಕರ ಮಾಹಿತಿಯನ್ನು ಕ್ರೂಡೀಕರಿಸಲು ಇಲಾಖೆಖಂದ ಗಣತಿ / ಸಮೀಕ್ಷೆಯನ್ನು ಕೈಗೊಳ್ಳಲಾಗಿದೆ.
• ಇಲಾಖೆಯ ಗಣತಿ / ಸಮೀಕ್ಷೆಯಲ್ಲಿ ಇದುವರೆಗೆ ನೋಂದಾಯಿತ ಸುಮಾರು 1,02,980 ನೇಕಾರರು / ಕಾರ್ಮಿಕರಿಗೆ ಸನ್ಮಾನ್ಯ ಮುಖ್ಯಮಂತ್ರಿಯವರಿಂದ ತಲಾ ರೂ.5000/- ಗಳಂತೆ ವಾರ್ಷಿಕ ಆರ್ಥಿಕ ನೆರವನ್ನು ನೇರ ನಗದು ವರ್ಗಾವಣೆ (DBT) ಮುಖಾಂತರ ಈ ದಿನ ವರ್ಗಾಯಿಸಲು ಚಾಲನೆ ನೀಡಲಾಗುತ್ತಿದೆ.
Bagalkot : 15 ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನೇಕಾರರಿಂದ ಬೆಳಗಾವಿಗೆ ಪಾದಯಾತ್ರೆ
ಪಾದಯಾತ್ರೆ ಮಾಡುವ ಬಗ್ಗೆ ಬಾಗಲಕೋಟೆಯಲ್ಲಿ ನಿರ್ಧಾರ: ರಾಜ್ಯದಲ್ಲಿ ಕಳೆದ ವರ್ಷದಿಂದ ನೇಕಾರರ 15 ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದರೂ ಈವರೆಗೆ ಒಂದೇ ಒಂದು ಬೇಡಿಕೆ ಕೂಡ ಈಡೇರಿಲ್ಲ. ಈ ವರ್ಷವಾದರೂ ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸುವ ನಿಟ್ಟಿನಲ್ಲಿ ಬಾಗಲಕೋಟೆ, ಗದಗ ಮತ್ತು ಕೊಪ್ಪಳ ಜಿಲ್ಲೆಯ ನೇಕಾರರು ಪಾದಯಾತ್ರೆ ಮಾಡುವ ಬಗ್ಗೆ ಬಾಗಲಕೋಟೆಯಲ್ಲಿ ನೇಕಾರರು ಡಿಸೆಂಬರ್ ತಿಂಗಳು ನಿರ್ಧಾರ ಮಾಡಿದ್ದರು. ಪ್ರಮುಖ ಬೇಡಿಕೆಗಳು: ರಾಜ್ಯದ ಕಟ್ಟಡ ಕಾರ್ಮಿಕರ ಮಾದರಿಯಲ್ಲಿಯೇ ರಾಜ್ಯದಲ್ಲಿರುವ 5 ರಿಂದ 6 ಲಕ್ಷ ನೇಕಾರರಿಗೆ ಕಾರ್ಮಿಕರ ಸೌಲಭ್ಯ ನೀಡುವುದು. ಸಾಲದ ಸುಳಿಯಲ್ಲಿರುವ ರಾಜ್ಯದ ನೇಕಾರರಿಗೆ ಸಂಪೂರ್ಣ ಸಾಲಮನ್ನಾ ಮಾಡುವುದು. ರೈತರಂತೆ ಉಪಕರಣಗಳ ಮೇಲೆ ಸಬ್ಸಿಡಿ ನೀಡುವುದು. ಕಚ್ಚಾಮಾಲು ಪೂರೈಕೆಯಲ್ಲಿ ಸಬ್ಸಿಡಿ ನೀಡುವುದು. ನೇಕಾರರಿಗೆ ಉಚಿತ ವಿದ್ಯುತ್ ನೀಡುವುದು ಸೇರಿ ಹದಿನೈದು ಬೇಡಿಕೆಗಳ ಈಡೇರಿಸಲು ಒತ್ತಾಯಿಸಲು ತೀರ್ಮಾನಿಸಲಾಯಿತು.