ಮದ್ಯ ಪ್ರಿಯರಿಗೆ ಗುಡ್‌ನ್ಯೂಸ್: ಸೂಪರ್ ಮಾರ್ಕೆಟ್‌ಗಳಲ್ಲಿಯೂ ಎಣ್ಣೆ ಲಭ್ಯ!
ರಾಜ್ಯದಲ್ಲಿ ಇನ್ನುಮುಂದೆ ಸೂಪರ್ ಮಾರ್ಕೆಟ್‌ಗಳಲ್ಲಿಯೂ ಮದ್ಯ ಮಾರಾಟವನ್ನು ಮಾಡಲು ಕರ್ನಾಟಕ ಸರ್ಕಾರ ಚಿಂತನೆ ಮಾಡಿದೆ ಎಂದು ಸಚಿವ ಆರ್.ಬಿ. ತಿಮ್ಮಾಪುರ ತಿಳಿಸಿದರು.
ಬೆಂಗಳೂರು (ಸೆ.22): ರಾಜ್ಯದಲ್ಲಿ ಪ್ರಮುಖ ಆದಾಯದ ಮೂಲವಾಗಿರುವ ಅಬಕಾರಿ ಇಲಾಖೆಯ ಆದಾಯವನ್ನು ಹೆಚ್ಚಳ ಮಾಡುವಲ್ಲಿ ರಾಜ್ಯ ಸರ್ಕಾರ ಚಿಂತನೆ ಮಾಡಿದಂತಿದೆ. ಈ ನಿಟ್ಟಿನಲ್ಲಿ ರಾಜ್ಯಾದ್ಯಂತ ಮಹಾನಗರ, ನಗರಗಳು, ಪಟ್ಟಣಗಳು ಹಾಗೂ ಗ್ರಾಮೀಣ ಭಾಗದಲ್ಲಿರುವಂತಹ ಸೂಪರ್ ಮಾರ್ಕೆಟ್‌ಗಳಲ್ಲಿಯೂ ಮದ್ಯ ಮಾರಾಟದ ಬಗ್ಗೆ ಚರ್ಚೆ ಮಾಡಲಾಗಿದೆ ಎಂಬ ಸುಳಿವನ್ನು ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ನೀಡಿದ್ದಾರೆ.
ಬೆಂಗಳೂರಿನಲ್ಲಿ ಶುಕ್ರವಾರ ಸೂಪರ್ ಮಾರ್ಕೆಟ್ ಗಳಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಅವರು, ಈ ಪ್ರಸ್ತಾವನೆಯ ಚರ್ಚೆಯನ್ನು ಮಾಡಲಾಗಿದೆ. ಆದರೆ, ಈವರೆಗೆ ಜಾರಿಗೆ ತರುವ ಬಗ್ಗೆ ತೀರ್ಮಾನ ಆಗಿಲ್ಲ. ಸೂಪರ್ ಮಾರ್ಕೆಟ್‌ನಲ್ಲಿ ಮದ್ಯ ಮಾರಾಟ ಮಾಡುವುದರ ಸಾಧಕ ಬಾಧಕಗಳ ಬಗ್ಗೆ ಚರ್ಚೆ ಮಾಡಿ ನಿರ್ಧಾರ ಕೈಗೊಳ್ಳಲಾಗುವುದು. ಇದರ ಬಗ್ಗೆ ಅಧಿಕಾರಿಗಳ ಜೊತೆಗೆ ಚರ್ಚೆ ಮಾಡಿದ್ದೇನೆ. ಇನ್ನೂ ಚರ್ಚೆಯ ಹಂತದಲ್ಲಿದೆಯೇ ಹೊರತು ತೀರ್ಮಾನ ಆಗಿಲ್ಲ ಎಂದು ತಿಳಿಸಿದರು.
ಕಾವೇರಿ ನೀರಿನ ವಿಚಾರದಲ್ಲಿ ಸಿಟ್ಟಿದ್ರೆ ಎಷ್ಟಾದ್ರೂ ಬೈಯಿರಿ, ಬೈಸಿಕೊಳ್ತೀವಿ: ಡಿಸಿಎಂ ಡಿ.ಕೆ. ಶಿವಕುಮಾರ್
ಮತ್ತೊಂದೆಡೆ ಗ್ರಾಮೀಣ ಪ್ರದೇಶಗಳಲ್ಲಿ ಮಾರ್ಕೆಟ್‌ಗಳು ಹಾಗೂ ಕಿರಾಣಿ (ಪ್ರಾವಿಷನ್ ಸ್ಟೋರ್ಸ್) ಅಂಗಡಿಗಳಲ್ಲಿ ಮಾರಾಟ ಮಾಡುತ್ತಾರೆ ಎಂಬ ದೂರುಗಳು ಕೇಳಿಬಂದಿವೆ. ಈಗಲೂ ಹಳ್ಳಿಗಳಲ್ಲಿ ಪರವಾನಗಿ ಇಲ್ಲದೆಯೇ ಮದ್ಯ ಮಾರಾಟ ಮಾಡುವವರ ಹಾವಳಿ ಹೆಚ್ಚಾಗುತ್ತಿದೆ. ಹೀಗಾಗಿ, ಅಕ್ರಮ ಮದ್ಯ ಮಾರಾಟವನ್ನು ತಡೆಗಟ್ಟಬೇಕಿದೆ. ಜನರು ಎಲ್ಲಾದರೂ ಮದ್ಯವನ್ನು ತೆಗೆದುಕೊಳ್ಳುತ್ತಾರೆ. ಆದರೆ, ಮುಖ್ಯವಾಗಿ ಜನರು ಖರೀದಿ ಮಾಡುವ ಮದ್ಯವು ಕಾನೂನಾತ್ಮಕವಾಗಿರಲಿ ಎಂದು ನೋಡುತ್ತಿದ್ದೇವೆ. ಇನ್ನು ಸಿಕ್ಕಾಪಟ್ಟೆ ಮದ್ಯ ಮಾರಾಟ ಮಾಡುವ ಉದ್ದೇಶ ಇಲ್ಲ. ಈ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಬಕಾರಿ ಇಲಾಖೆಗೆ ಯಾವುದೇ ತೆರಿಗೆ ಸಂಗ್ರಹ ಟಾರ್ಗೆಟ್ ನೀಡಿಲ್ಲ ಎಂದು ತಿಳಿಸಿದರು.