ರಾಜ್ಯದಲ್ಲಿ ಮೇದರ ಸಮುದಾಯಕ್ಕೆ ಪ್ರತ್ಯೇಕವಾಗಿ 'ಕರ್ನಾಟಕ ಮೇದರ ಅಭಿವೃದ್ಧಿ ನಿಗಮ'ವನ್ನು ಸ್ಥಾಪಿಸಿದ ಸರ್ಕಾರ, ಸಣ್ಣ ಸಮುದಾಯಗಳ ಅಭಿವೃದ್ಧಿಗೂ ಮಾನ್ಯತೆಯನ್ನು ನೀಡಿದೆ. 

ಬೆಂಗಳೂರು (ಫೆ.21): ರಾಜ್ಯದಲ್ಲಿ ಮೇದರ ಸಮುದಾಯಕ್ಕೆ ಪ್ರತ್ಯೇಕವಾಗಿ 'ಕರ್ನಾಟಕ ಮೇದರ ಅಭಿವೃದ್ಧಿ ನಿಗಮ'ವನ್ನು ಸ್ಥಾಪಿಸಿದ ಸರ್ಕಾರ, ಸಣ್ಣ ಸಮುದಾಯಗಳ ಅಭಿವೃದ್ಧಿಗೂ ಮಾನ್ಯತೆಯನ್ನು ನೀಡಿದೆ. 

ಸಣ್ಣ ಸಣ್ಣ ಸಮುದಾಯಗಳ ಒಲೈಕೆಗೆ ಮುಂದಾದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಚುನಾವಣೆ ಸಮೀಪದ ಬೆನ್ನಲ್ಲೇ ಸಣ್ಣ ಸಣ್ಣ ಸಮುದಾಯಗಳ ಒಲೈಕೆ ಮಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ನಿನ್ನೆಯಿಂದ ನಾಲ್ಕೈದು ನೂತನ ನಿಗಮ ಮಂಡಳಿ ಸ್ಥಾಪನೆ ಮಾಡಿ ಆದೇಶ ಹೊರಡಿಸಲಾಗಿದೆ. ಇಂದು ಕರ್ನಾಟಕ ಮೇದಾರ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿ ಆದೇಶ ಹೊರಡಿಸಲಾಗಿದ್ದು, ಬುಟ್ಟಿ ನೇಯುವ ಕಾರ್ಯ ಮಾಡುವ ಸಮುದಾಯಕ್ಕೆ ನೆರವಾಗಲಿದೆ. 

ಗಾಣಿಗರಿಗೆ ಗುಡ್‌ ನ್ಯೂಸ್‌: ಕರ್ನಾಟಕ ಗಾಣಿಗ ಅಭಿವೃದ್ಧಿ ನಿಗಮ ಸ್ಥಾಪನೆ

ಹಡಪದ ನಿಗಮ, ಗಾಣಿಗ ನಿಗಮ,ನಾರಯಣ ಗುರು ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಿದ ಆದೇಶ ಹೊರಡಿಸಲಾಗಿದೆ. ಇಂದು ಕರ್ನಾಟಕದ ಮೇದರ ಅಭಿವೃದ್ಧಿ ನಿಗಮ ರಚನೆಗೆ ಆದೇಶ ನೀಡಲಾಗಿತ್ತು. ಸಾಕಷ್ಟು ಶಾಸಕರುಗಳು ಮತ್ತು ಸಮುದಾಯಗಳ ನಾಯಕರುಗಳು ತಮ್ಮ ಸಮುದಾಯಗಳ ಅಭಿವೃದ್ಧಿಗೆ ಪ್ರತ್ಯೇಕವಾಗಿ ನಿಗಮ‌ ಮಂಡಳಿ ರಚನೆಗಾಗಿ ಪಟ್ಟು ಹಿಡಿದಿದ್ದರು. ಇದೀಗ ನೂತನ ನಿಗಮ ಮಂಡಳಿ ರಚನೆ ಮೂಲಕ ಸಣ್ಣ ಸಮುದಾಯಗಳ ಒಲೈಕೆಗೆ ಸಿಎಂ ಮುಂದಾಗಿದ್ದಾರೆ‌.

ಮತಗಳನ್ನು ಸೆಳೆಯಲು ಬಿಜೆಪಿ ತಂತ್ರ: ಇನ್ನು ರಾಜ್ಯದಲ್ಲಿ ಸುಮಾರು 15 ಲಕ್ಷಕ್ಕೂ ಅಧಿಕ ಜನಸಂಖ್ಯೆಯನ್ನು ಹೊಂದಿರುವ ಮೇದರ ಸಮುದಾಯದ ಅಭಿವೃದ್ಧಿಗೆ ಹಲವು ವರ್ಷಗಳಿಂದ ಅಭಿವೃದ್ಧಿ ನಿಗಮ ಸ್ಥಾಪಿಸುವಂತೆ ಸರ್ಕಾರದ ಮೇಲೆ ಒತ್ತಡ ಹೇರಲಾಗಿತ್ತು. ಆದರೆ, ಹಲವು ವರ್ಷಗಳಿಂದ ಬೇಡಿಕೆ ಈಡೇರಿರಲಿಲ್ಲ. ಆದರೆ, ರಾಜ್ಯ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಎಲ್ಲ ವರ್ಗದ ಮತಗಳನ್ನು ಪಡೆಯಬೇಕು ಎಂಬ ನಿಟ್ಟಿನಲ್ಲಿ ಬಿಜೆಪಿ ಸರ್ಕಾರ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿ ಆದೇಶ ಹೊರಡಿಸಿದೆ. 

ಈಡಿಗ- ಬಿಲ್ಲವರಿಗೆ ಗುಡ್‌ ನ್ಯೂಸ್‌: ಶ್ರೀ ನಾರಾಯಣಗುರು ಅಭಿವೃದ್ಧಿ ನಿಗಮ ಸ್ಥಾಪಿಸಿದ ಸರ್ಕಾರ

ಬೆಂಗಳೂರು (ಫೆ.20): ರಾಜ್ಯದಲ್ಲಿ ಸುಮಾರು 45 ಲಕ್ಷ ಜನಸಂಖ್ಯೆಯನ್ನು ಹೊಂದಿರುವ ಗಾಣಿಗ ಸಮುದಾಯಕ್ಕೆ ಅನುಕೂಲ ಆಗುವಂತೆ ರಾಜ್ಯ ಸರ್ಕಾರದಿಂದ ಇಂದು 'ಕರ್ನಾಟಕ ಗಾಣಿಗ ಅಭಿವೃದ್ಧಿ ನಿಗಮ'ವನ್ನು ಸ್ಥಾಪಿಸಿ ಜಾರಿಗೆ ತರಲಾಗಿತ್ತು. ಹಿಂದುಳಿದ ವರ್ಗಗಳ ಮೀಸಲಾತಿ ಪಟ್ಟಿಯ ಕ್ರಮಸಂಖ್ಯೆ 78(ಎ)ಯಿಂದ (ಇ)ವರೆಗೆ ಬರುವ ಗಾಣಿಗ, ತೇಲಿ, ಗಾಂಡ್ಲ, ವನಿಯನ್‌ ಹಾಗೂ ಜ್ಯೋತಿನಗರ, ಜ್ಯೋತಿನಗರ ವೈಶ್ಯ ಸಮುದಾಯಗಳ ಸರ್ವತೋಮುಖ ಅಭಿವೃದ್ಧಿಗೆ ಕರ್ನಾಟಕ ಗಾಣಿಗ ಅಭಿವೃದ್ಧಿ ನಿಗಮ ಸ್ಥಾಪಿಸಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಆದೇಶಿಸಲಾಗಿತ್ತು.

ಈಡಿಗರಿಗೂ ಗುಡ್‌ ನ್ಯೂಸ್‌ ನೀಡಿದ್ದ ಸರ್ಕಾರ: ಬಿಲ್ಲವ - ಈಡಿಗ ಸಮುದಾಯಗಳ ಸರ್ವತೋಮುಖ ಅಭಿವೃದ್ಧಿಗಾಗಿ ಪ್ರತ್ಯೇಕ ನಿಗಮವನ್ನು ಸ್ಥಾಪಿಸಲು ಆದೇಶಿಸಲಾಗಿದೆ. ಸರ್ಕಾರದ ಆದೇಶದಲ್ಲಿ ಹೊಸ ಕೆನೆಪದರ ಮತ್ತು ಭಾರತದ ಸಂವಿಧಾನದ ಅನುಚ್ಛೇದ 15/4ರ ಅನ್ವಯ ವಿದ್ಯಾಸಂಸ್ಥೆಗಳಲ್ಲಿ ಪ್ರವೇಶ ಮತ್ತು ಅನುಚ್ಚೇದ 16/4ರ ಅನ್ವಯ ನೇಮಕಾತಿಗಳಲ್ಲಿ ಮೀಸಲಾತಿಯನ್ನು ಕಲ್ಪಿಸಲು ಹಿಂದುಳಿದ ವರ್ಗಗಳನ್ನು ಗುರುತಿಸಿ ಜಾತಿ ಪಟ್ಟಿಯನ್ನು ಹಿರಡಿಸಲಾಗಿರುತ್ತದೆ. ಅದರನ್ವಯ ಸದರಿ ಜಾತಿ ಪಟ್ಟಿಯಲ್ಲಿ ಪ್ರವರ್ಗ 2ಎ ಕ್ರಮಸಂಖ್ಯೆ 4a ಯಿಂದ zವರೆಗೆ ನಮೂದಾಗಿರುವ ಈಡಿಗ ಸೇರಿದಂತೆ ಒಟ್ಟು 26 ಜಾತಿಗಳಿಗೆ ಶೈಕ್ಷಣಿಕ ಹಾಗೂ ಉದ್ಯೋಗ ನೇಮಕಾತಿಗಳಲ್ಲಿ ಮೀಸಲಾತಿಯನ್ನು ಕಲ್ಪಿಸಲಾಗಿತ್ತು.